ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಟ್ ಕಾಯಿನ್ ಇತರೆ ಡಿಜಿಟಲ್ ದುಡ್ಡಿನ ಮೌಲ್ಯ ಸ್ಥಿರ, ಟ್ರೇಡರ್ಸ್‌ ಖುಷ್

|
Google Oneindia Kannada News

ಬೆಂಗಳೂರು, ಏಪ್ರಿಲ್ 17: ಡಿಜಿಟಲ್ ಕರೆನ್ಸಿ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್, ಇಥೆರಿಯಂ, ಕಾರ್ಡನೋ ಸೇರಿದಂತೆ ಹಲವು ಕರೆನ್ಸಿಗಳ ಟ್ರೇಡರ್ಸ್ ಈ ವಾರ ಭರ್ಜರಿ ಲಾಭದ ನಿರೀಕ್ಷೆಯಲ್ಲಿ ವಹಿವಾಟು ನಡೆಸಿದ್ದಾರೆ. ಪೇಪಾಲ್ ಮೌಲ್ಯಕ್ಕೆ ಸಮನಾಗಿ ಇಥೆರಿಯಂ ತನ್ನ ಮಾರುಕಟ್ಟೆ ಮೌಲ್ಯ ಹೆಚ್ಚಿಸಿಕೊಂಡಿದೆ. ಹತ್ತು ಹಲವು ಜಾಗತಿಕ ವಿದ್ಯಮಾನಗಳು ಪ್ರಮುಖ ಕ್ರಿಪ್ಟೋ ಕರೆನ್ಸಿ ಮೌಲ್ಯ ಏರಿಕೆಗೆ ಕಾರಣವಾಗಿದೆ.

ಇತ್ತೀಚೆಗೆ ಉತ್ತಮ ವಹಿವಾಟು ಮೂಲಕ, ಒಟ್ಟಾರೆ, ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಮೌಲ್ಯ $2 ಟ್ರಿಲಿಯನ್‌ಗೆ ಏರಿಕೆಯಾಗಿದೆ. ಈ ನಡುವೆ ಬಿಟ್ ಕಾಯಿನ್ ಈ ಹಿಂದಿನ $61,222 ಮೌಲ್ಯ ದಾಖಲೆ ಮುರಿದು ಏಪ್ರಿಲ್ ತಿಂಗಳಲ್ಲಿ ಮೊದಲ ಬಾರಿಗೆ 64 ಸಾವಿರ ಡಾಲರ್ ಮೌಲ್ಯಕ್ಕೇರಿತ್ತು.

ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮೌಲ್ಯ ಕಳೆದ 24 ಗಂಟೆಗಳಲ್ಲಿ ಶೇ 6ರಷ್ಟು ಕಂಡು 2,172,919,251,737 ಟ್ರಿಲಿಯನ್ ಡಾಲರ್ ದಾಟಿದೆ. ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 103.72ರಷ್ಟು ಲಾಭವನ್ನು ನೀಡಿದೆ.

Bitcoin price steady on April 30

ಏಪ್ರಿಲ್ 30ರಂದು ಈ ಸಮಯ(23:00)ಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $56,363.68
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,057,765,716,413
ಒಂದು ಬಿಟ್ ಕಾಯಿನ್ ಬೆಲೆ = 41,91,126.19 ರು
(1 USD=74.00 ರುಪಾಯಿ)

ಬಿಟ್ ಕಾಯಿನ್ ಕಳೆದ 24 ಗಂಟೆಗಳಲ್ಲಿ ಶೇ 6.25ರಷ್ಟು ಏರಿಕೆ ಕಂಡಿದೆ. ಈ ವಾರ ಶೇ 13.35ರಷ್ಟು ಏರಿಕೆಯಾಗಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಇಥೆರಿಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 0.50ರಷ್ಟು ಏರಿಕೆ ಕಂಡು 2,759.58 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $319,807,448,989ಮೌಲ್ಯ ಹೊಂದಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

English summary
After surge of record $64,000 for the first time, Bitcoin price today(April 30) settle at $56,000.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X