ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಟ್ ಕಾಯಿನ್ ಮೌಲ್ಯ $64,000 ಗಡಿ ದಾಟಿ ಹೊಸ ದಾಖಲೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ಡಿಜಿಟಲ್ ಕರೆನ್ಸಿ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್, ಇಥೆರಿಯಂ, ಕಾರ್ಡನೋ ಸೇರಿದಂತೆ ಹಲವು ಕರೆನ್ಸಿಗಳ ಟ್ರೇಡರ್ಸ್ ಇಂದು ಭರ್ಜರಿ ಲಾಭದ ನಿರೀಕ್ಷೆಯಲ್ಲಿ ವಹಿವಾಟು ನಡೆಸಿದ್ದಾರೆ. ಯುರೋಪಿನ ಅತಿದೊಡ್ಡ ಸಂಸ್ಥೆ ಕಾಯಿನ್ಸ್‌ಬಿಟ್ ಎಂಟ್ರಿ, ಕಾಯಿನ್‌ಬೇಸ್ ಗ್ಲೋಬಲ್ ಐಎನ್‌ಸಿ ಲಿಸ್ಟಿಂಗ್ ಎಲ್ಲವೂ ಕ್ರಿಪ್ಟೋ ಕರೆನ್ಸಿ ಮೌಲ್ಯ ಏರಿಕೆಗೆ ಕಾರಣವಾಗಿವೆ.

ಇತ್ತೀಚೆಗೆ ಉತ್ತಮ ವಹಿವಾಟು ಮೂಲಕ, ಒಟ್ಟಾರೆ, ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಮೌಲ್ಯ $2 ಟ್ರಿಲಿಯನ್‌ಗೆ ಏರಿಕೆಯಾಗಲು ಕಾರಣವಾಗಿವೆ. ಈ ನಡುವೆ ಬಿಟ್ ಕಾಯಿನ್ ಈ ಹಿಂದಿನ $61,222 ಮೌಲ್ಯ ದಾಖಲೆ ಮುರಿದು ಏಪ್ರಿಲ್ ತಿಂಗಳಲ್ಲಿ ಮೊದಲ ಬಾರಿಗೆ 64 ಸಾವಿರ ಡಾಲರ್ ಮೌಲ್ಯಕ್ಕೇರಿದೆ.

ಇಂದು ಬಿಟ್ ಕಾಯಿನ್ ಮಧ್ಯಾಹ್ನದ ವೇಳೆಗೆ ಶೇ 1.6ರಷ್ಟು ಏರಿಕೆ ಕಂಡು 64, 207 ಯುಎಸ್ ಡಾಲರ್ ಮೌಲ್ಯ ಗಳಿಸಿತ್ತು, ಜೊತೆಗೆ ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮೌಲ್ಯ 2,248,143,626,421 ಟ್ರಿಲಿಯನ್ ಡಾಲರ್ ದಾಟಿದೆ. ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 103.72ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 61,556.59 ಡಾಲರ್ ದಾಖಲೆ ಮುರಿದಿದ್ದು, 70 ಸಾವಿರ ಡಾಲರ್

Bitcoin price surge above $64,000 for the first time

ಏಪ್ರಿಲ್ 14ರಂದು ಈ ಸಮಯ(19:55)ಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $63,229.91
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,211,789,797,104
ಒಂದು ಬಿಟ್ ಕಾಯಿನ್ ಬೆಲೆ = 47,19,428.40 ರು
(1 USD=75.13 ರುಪಾಯಿ)

ಬಿಟ್ ಕಾಯಿನ್ ಕಳೆದ 24 ಗಂಟೆಗಳಲ್ಲಿ ಶೇ 0.41ರಷ್ಟು ಏರಿಕೆ ಕಂಡಿದೆ. ಈ ವಾರ ಶೇ 13.40ರಷ್ಟು ಏರಿಕೆಯಾಗಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಇಥೆರಿಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 4.31ರಷ್ಟು ಏರಿಕೆ ಕಂಡು 2,323.40 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $276,725,697,835 ಮೌಲ್ಯ ಹೊಂದಿದೆ. ಅಚ್ಚರಿಯೆಂದರೆ ಕಳೆದ ಒಂದು ವಾರದಲ್ಲೇ ಅತಿ ಹೆಚ್ಚು 103.19% ಏರಿಕೆ ಕಂಡಿರುವ XRP 1.60 ಯುಎಸ್ ಡಾಲರ್ ಬೆಲೆ ಹಾಗೂ $85,230,212,684 ಮೌಲ್ಯದೊಂದಿಗೆ ಗಮನ ಸೆಳೆದಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

English summary
Bitcoin price surge above $64,000 for the first time as traders eye coinsbit listing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X