ಮಾರ್ಚ್ 18ರಂದು ಡಿಜಿಟಲ್ ದುಡ್ಡು ಬಿಟ್ ಕಾಯಿನ್ ಮೌಲ್ಯ ಸುಧಾರಣೆ

ಬೆಂಗಳೂರು, ಮಾರ್ಚ್18: ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ ಮೌಲ್ಯ ಗುರುವಾರ ಕೂಡಾ ಸ್ಥಿರತೆ ಪಡೆದುಕೊಂಡಿದೆ. ಸತತವಾಗಿ ಏರಿಕೆ ನಂತರ ಸೋಮವಾರದಂದು ಶೇ 9.2 ರಷ್ಟು ಒಟ್ಟಾರೆ ಕುಸಿತ ಕಂಡಿತ್ತು. ಆದರೆ, ಇಂದು 58 ಸಾವಿರ ಡಾಲರ್‌ನಂತೆ ಆರಂಭಿಕ ವಹಿವಾಟು ನಡೆಸಿದೆ.

ಭಾನುವಾರ (ಮಾರ್ಚ್ 14)ರಂದು 60, 000 ಡಾಲರ್ ಗಡಿ ದಾಟಿತ್ತು. ಶನಿವಾರದಂದು ಶೇ 6.64ರಷ್ಟು ಏರಿಕೆ ಕಂಡು ಮೊದಲ ಬಾರಿಗೆ ದಾಖಲೆಯ $61,073.71 ತಲುಪಿತ್ತು. ನಂತರ ಸ್ವಲ್ಪ ಮಟ್ಟಿನ ಕುಸಿತ ಕಂಡಿತ್ತು.

ಮಾರ್ಚ್ 18ರಂದು ಈ ಸಮಯಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $58,838.56
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,096,671,692,904
ಒಂದು ಬಿಟ್ ಕಾಯಿನ್ ಬೆಲೆ = 42,51,230.22 ರು
(1 USD=72.40 ರುಪಾಯಿ)

Bitcoin Rate hike On March 18: Latest Rate Here

ಕಳೆದ 24 ಗಂಟೆಗಳಲ್ಲಿ ಶೇ 4.96ಷ್ಟು ಇಳಿಕೆ ಕಂಡಿದೆ. ಈ ವಾರ 4.42% ರಷ್ಟು ಏರಿಕೆಯಾಗಿತ್ತು. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಎಥೆರೆಯಂ(Ethereum) ಕಳೆದ 24 ಗಂಟೆಗಳಲ್ಲಿ ಶೇ 3.42ರಷ್ಟು ಏರಿಕೆ ಕಂಡು 1,838.79 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $ 211,231,702,974ಮೌಲ್ಯ ಹೊಂದಿದೆ. ಮತ್ತೊಂದು ಕರೆನ್ಸಿ ಕಾರ್ಡಾನೋ ಕಳೆದ 24 ಗಂಟೆಗಳಲ್ಲಿ ಶೇ 14.15ರಷ್ಟು ಏರಿಕೆ ಕಂಡಿದ್ದು, $44,866,536,928 ಮೌಲ್ಯ ಹೊಂದಿದೆ.

ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ ಶೇ 120.2ರಷ್ಟು ಏರಿಕೆ ಕಂಡಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+