ಮಾರ್ಚ್ 22: ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ ಮೌಲ್ಯ ಎಷ್ಟಿದೆ?

ಬೆಂಗಳೂರು, ಮಾರ್ಚ್22: ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ ಮೌಲ್ಯ ಕುಸಿತದ ನಡುವೆಯೂ ಸ್ಥಿರತೆ ಕಾಪಾಡಿಕೊಂಡಿದೆ. ಸತತವಾಗಿ 55 ರಿಂದ58 ಸಾವಿರ ಡಾಲರ್‌ನಂತೆ ವಹಿವಾಟು ನಡೆಸಿದ್ದು, ಸೋಮವಾರ ಕೂಡಾ ಹೆಚ್ಚಿನ ಏರಿಳಿತವಾಗಿಲ್ಲ.

ಮಾರ್ಚ್ 22ರಂದು ಈ ಸಮಯಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $57,111.26
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,068,290,570,615
ಒಂದು ಬಿಟ್ ಕಾಯಿನ್ ಬೆಲೆ = 41,25,210.75ರು
(1 USD=72.37 ರುಪಾಯಿ)

ಕಳೆದ 24 ಗಂಟೆಗಳಲ್ಲಿ ಶೇ 0.36ಷ್ಟು ಇಳಿಕೆ ಕಂಡಿದೆ. ಈ ವಾರ ಶೇ 0.40 ರಷ್ಟು ಏರಿಕೆಯಾಗಿತ್ತು. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಎಥೆರೆಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 0.10ರಷ್ಟು ಇಳಿಕೆ ಕಂಡು 1,785.20 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $205,805,229,884 ಮೌಲ್ಯ ಹೊಂದಿದೆ. ಮತ್ತೊಂದು ಕರೆನ್ಸಿ ಕಾರ್ಡಾನೋ ಕಳೆದ 24 ಗಂಟೆಗಳಲ್ಲಿ ಶೇ 1.63ರಷ್ಟು ಕುಸಿತ ಕಂಡಿದ್ದು, 1.21 ಡಾಲರ್ ಮೌಲ್ಯಹೊಂದಿದ್ದು, ಒಟ್ಟಾರೆ, $37,862,347,324ಮಾರುಕಟ್ಟೆ ಮೌಲ್ಯ ಹೊಂದಿದೆ.

Bitcoin Rate steady On March 22: Latest Rate Here

ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ಭಾನುವಾರ (ಮಾರ್ಚ್ 14)ರಂದು 60, 000 ಡಾಲರ್ ಗಡಿ ದಾಟಿತ್ತು. ಅದಕ್ಕೂ ಮುನ್ನ ಶನಿವಾರದಂದು ಶೇ 6.64ರಷ್ಟು ಏರಿಕೆ ಕಂಡು ಮೊದಲ ಬಾರಿಗೆ ದಾಖಲೆಯ $61,073.71 ತಲುಪಿತ್ತು. ನಂತರ ಸ್ವಲ್ಪ ಮಟ್ಟಿನ ಕುಸಿತ ಕಂಡಿತ್ತು.

ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ ಶೇ 120.2ರಷ್ಟು ಏರಿಕೆ ಕಂಡಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+