ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್ 29: ಡಿಜಿಟಲ್ ದುಡ್ಡು ಬಿಟ್ ಕಾಯಿನ್ ಮೌಲ್ಯ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಮಾರ್ಚ್ 29: ಡಿಜಿಟಲ್ ಕರೆನ್ಸಿ ಕ್ರಿಪ್ಟೋಕರೆನ್ಸಿ ಮೌಲ್ಯ ಸತತವಾಗಿ 55 ರಿಂದ 58 ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿದೆ. ಕಳೆದೊಂದು ದಿನದಲ್ಲಿ ಒಟ್ಟಾರೆ ಕ್ರಿಪ್ಟೋ ಮಾರುಕಟ್ಟೆ ಮೌಲ್ಯ ಶೇ 3.77ರಷ್ಟು ಹೆಚ್ಚಳ ಕಂಡಿದೆ.

ಮಾರ್ಚ್ 29ರಂದು ಈ ಸಮಯಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $57,964.12
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,082,068,667,634
ಒಂದು ಬಿಟ್ ಕಾಯಿನ್ ಬೆಲೆ = 42,10,092.28ರು
(1 USD=72.72 ರುಪಾಯಿ)

ಕಳೆದ 24 ಗಂಟೆಗಳಲ್ಲಿ ಶೇ 2.62ರಷ್ಟು ಏರಿಕೆ ಕಂಡಿದೆ. ಈ ವಾರ ಶೇ 2.31ರಷ್ಟು ಏರಿಕೆಯಾಗಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಎಥೆರೆಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 6.92ರಷ್ಟು ಏರಿಕೆ ಕಂಡು 1,831.77 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $211,113,899,405 ಮೌಲ್ಯ ಹೊಂದಿದೆ. ಮತ್ತೊಂದು ಕರೆನ್ಸಿ ಕಾರ್ಡಾನೋ ಕಳೆದ 24 ಗಂಟೆಗಳಲ್ಲಿ ಶೇ 1.36ರಷ್ಟು ಕುಸಿತ ಕಂಡಿದ್ದು, 1.21 ಡಾಲರ್ ಮೌಲ್ಯಹೊಂದಿದ್ದು, ಒಟ್ಟಾರೆ, $38,564,967,738 ಮಾರುಕಟ್ಟೆ ಮೌಲ್ಯ ಹೊಂದಿದೆ.

Bitcoin Rate steady On March 29: Latest Rate Here

ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಮಾರ್ಚ್ 29ರಂದು 60, 000 ಡಾಲರ್ ಗಡಿ ದಾಟಿತ್ತು. ಶೇ 6.64ರಷ್ಟು ಏರಿಕೆ ಕಂಡು ಮೊದಲ ಬಾರಿಗೆ ದಾಖಲೆಯ $61,073.71 ತಲುಪಿತ್ತು. ನಂತರ ಸ್ವಲ್ಪ ಮಟ್ಟಿನ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ ಶೇ 120.2ರಷ್ಟು ಏರಿಕೆ ಕಂಡಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

English summary
Bitcoin Rate steady On March 29: Here the details of bitcoin Latest Rate steady after rallying 61, 074 USD for the first time and Market Cap.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X