'ಆರ್ಥಿಕ ಅಪರಾಧಿ' ಘೋಷಣೆಗೆ ತಡೆ ಕೋರಿದ್ದ ಮಲ್ಯಗೆ ಹಿನ್ನಡೆ
ಮುಂಬೈ, ನವೆಂಬರ್ 22: ಭಾರತದ ಹತ್ತಾರು ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚಿಸಿ, ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಯತ್ನ ಜಾರಿಯಲ್ಲಿದೆ.
ಈ ನಡುವೆ ಮದ್ಯದ ದೊರೆ ವಿಜಯ್ ಮಲ್ಯ ಅವರು ತಮ್ಮನ್ನು ಆರ್ಥಿಕ ಅಪರಾಧಿ ಎಂದು ಹೊಸ ತಿದ್ದುಪಡಿ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯವು ಕರೆದು, ದೋಷರೋಪಣ ಸಲ್ಲಿಸಲು ಮುಂದಾಗಿರುವುದಕ್ಕೆ ತಡೆ ನೀಡುವಂತೆ ಕೋರಿ, ಕೋರ್ಟಿಗೆ ಅರ್ಜಿ ಹಾಕಿದ್ದರು.

ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಅರ್ಜಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಗುರುವಾರದಂದು ಮಲ್ಯ ಅವರ ಅರ್ಜಿಯನ್ನು ತಿರಸ್ಕರಿಸಿದೆ.
ಮಲ್ಯ ಒಡೆತನದ 12.5 ಸಾವಿರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡಬೇಕೆಂದು ಅದು ನ್ಯಾಯಾಲಯಕ್ಕೆ ಕೇಳಿತ್ತು. ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಮಲ್ಯ ಅವರು, ತಮ್ಮ ಬಳಿ 14,000 ಕೋಟಿ ರು ಮೌಲ್ಯದ ಆಸ್ತಿ ಇದ್ದು, ಇದನ್ನು ಮಾರಿ, ಸಾಲ ವಾಪಸ್ ಮಾಡುತ್ತೇನೆ ಎಂದು ಒಪ್ಪಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು












Click it and Unblock the Notifications