ಭಾರತ್ ಪೆಟ್ರೋಲಿಯಂ ಖಾಸಗೀಕರಣಕ್ಕೆ ಮುಂದಾದ ಸರ್ಕಾರ, ಖರೀದಿಗೆ ಕಾದಿದೆ ರಿಲಯನ್ಸ್
ನವದೆಹಲಿ, ಅಕ್ಟೋಬರ್ 07: ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(BPCL) ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತ್ ಪೆಟ್ರೋಲಿಯಂ ಸಂಸ್ಥೆ ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಪೂರಕ ಪ್ರಕ್ರಿಯೆಗಳು ಆರಂಭವಾಗಿವೆ. ರಾಷ್ಟೀಕೃತ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಜಾರಿಗೊಳಿಸಲು ಕಾಯಿದೆಗೆ ತಿದ್ದುಪಡಿ ತರುವುದು ಅಗತ್ಯ.
ಬಿಪಿಸಿಎಲ್ ರಾಷ್ಟ್ರೀಕೃತಗೊಳಿಸುವ ಕಾಯ್ದೆ 1976 ಹಾಗೂ ತಿದ್ದುಪಡಿ ಕಾಯ್ದೆ 2016ಗೆ ಬೇಕಾದ ಮರು ತಿದ್ದುಪಡಿಯನ್ನು ಮಾಡಲಾಗಿದೆ. ಇದಕ್ಕೆ ಸಂಸತ್ತಿನಲ್ಲಿ ಅನುಮೋದನೆ ಸಿಗಬೇಕಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ನಲ್ಲಿ ಸರ್ಕಾರ ಶೇ.53.3 ಪಾಲು ಹೊಂದಿದೆ. ಈ ಷೇರುಗಳ ಮಾರಾಟದಿಂದ 60-70 ಸಾವಿರ ಕೋಟಿ ರೂಪಾಯಿ ಆದಾಯ ಬರಬಹುದೆಂಬ ನಿರೀಕ್ಷೆ ಹೊಂದಲಾಗಿದೆ. ಬಿಪಿಸಿಎಲ್ ಮಾರುಕಟ್ಟೆ ಮೌಲ್ಯ ಅಕ್ಟೋಬರ್ 04, 2019ಕ್ಕೆ 1.11 ಲಕ್ಷ ಕೋಟಿ ರು ನಷ್ಟಿದೆ.
2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರವು ಭಾರತ್ ಪೆಟ್ರೋಲಿಯಂ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದ್ದರು. ಈ ಪ್ರಕ್ರಿಯೆ ಬಗ್ಗೆ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸರ್ಕಾರಿ ಸ್ವಾಮ್ಯ ಬಿಪಿಸಿಎಲ್ ಹಾಗೂ ಎಚ್ ಪಿಸಿಎಲ್ ಖಾಸಗೀಕರಣಕ್ಕೆ ಸಂಸತ್ತಿನ ಅನುಮೋದನೆ ಅಗತ್ಯ ಎಂದು ಹೇಳಿತ್ತು.

ಬಿಪಿಸಿಎಲ್ ಷೇರುಗಳನ್ನು ಖರೀದಿಸಲು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ಸುಕವಾಗಿದೆ ಎನ್ನಲಾಗಿದೆ. ಇದಲ್ಲದೆ ಯುಕೆಯ ಬಿಪಿ, ಕುವೈಟ್ ಪೆಟ್ರೋಲಿಯಂ, ಮಲೇಷಿಯಾದ ಪೆಟ್ರೋನಾಸ್, ಸೌದಿ ಅರಾಮ್ಕೋ ಹಾಗೂ ಶೆಲ್ ಮತ್ತು ಎಸ್ಸಾರ್ ಆಯಿಲ್ ಕೂಡಾ ರೇಸಿನಲ್ಲಿವೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿದರೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.
ಮುಂಬೈನಲ್ಲಿ ನಾಲ್ಕು ತೈಲ ಘಟಕ, ಕೇರಳದ ಕೊಚ್ಚಿ, ಮಧ್ಯಪ್ರದೇಶದ ಬಿನಾ, ಅಸ್ಸಾಂನ ನುಮಾಲಿಗರ್ ನಲ್ಲಿ ತೈಲ ಘಟಕಗಳನ್ನು ಬಿಪಿಸಿಎಲ್ ಹೊಂದಿದ್ದು, ಒಟ್ಟಾರೆ, 38.3 ಮಿಲಿಯನ್ ಟನ್ ಕಚ್ಚಾತೈಲವನ್ನು ಇಂಧನವಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿವೆ. ಇದರ ಜೊತೆಗೆ 15,078ಪೆಟ್ರೋಲ್ ಪಂಪ್ ಹಾಗೂ 6,004 ಎಲ್ ಪಿಜಿ ವಿತರಣೆಯನ್ನು ಬಿಪಿಸಿಎಲ್ ಹೊಂದಿದೆ. ಭಾರತ 294.4 ಮಿಲಿಯನ್ ಟನ್ ತೈಲ ಸಂಸ್ಕರಣಾ ಸಾಮರ್ಥ್ಯ, 65 554 ಪೆಟ್ರೋಲ್ ಪಂಪ್ ಹಾಗೂ 24 026 ಎಲ್ ಪಿ ಜಿ ವಿತರಣೆಯನ್ನು ಹೊಂದಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications