ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್: ಆದಾಯ ತೆರಿಗೆ, ಜಿಎಸ್ಟಿ ಬದಲಾವಣೆ ನಿರೀಕ್ಷೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 27: ಸರಕು ಮತ್ತು ಸೇವೆಗಳ ಬಳಕೆಗೆ ಉತ್ತೇಜನ ನೀಡುವುದು, ವೈಯಕ್ತಿಕ ಆದಾಯ ತೆರಿಗೆಯಲ್ಲಿ ವಿನಾಯತಿ ನೀಡುವುದು ಸೇರಿದಂತೆ ಹಲವು ಪ್ರಮುಖ ಅಂಶಗಳ ಬಗ್ಗೆ ಕೇಂದ್ರ ಬಜೆಟ್ ಗೂ ಮುನ್ನ ಚರ್ಚೆ ನಡೆದಿದೆ.

ಮೂಲಸೌಕರ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದು, ನಾಲ್ಕು ವರ್ಷಗಳಲ್ಲಿ 100 ಲಕ್ಷ ಕೋಟಿ ರೂಪಾಯಿ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಿದೆ.

ಈಗಾಗಲೇ ನೇರೆ ತೆರಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ 1.45 ಲಕ್ಷಕೋಟಿ ರು ಕಾರ್ಪೊರೇಟ್ ತೆರಿಗೆ ಕಡಿತ ಮಾಡಿರುವ ಕೇಂದ್ರ ಸರ್ಕಾರವು ಈಗ ವೈಯಕ್ತಿಕ ಆದಾಯ ತೆರಿಗೆ ಮಿತಿ ಬದಲಾವಣೆಗೆ ಮುಂದಾಗಿದೆ. ಹಾಲಿ 5 ಲಕ್ಷ ರೂ. ನಿಂದ 10ಲಕ್ಷ ರೂ. ವರೆಗಿನ ಆದಾಯಕ್ಕೆ ಶೇಕಡ 20ರಷ್ಟು ತೆರಿಗೆಯನ್ನು ಶೇ. 10 ಪ್ರಮಾಣಕ್ಕೆ ತಗ್ಗಿಸುವ ಬಗ್ಗೆ ಚಿಂತನೆ ಇದೆ.

Budget 2020: Personal Income tax cuts in line

ತೆರಿಗೆ ಪ್ರಮಾಣಾ ಇಳಿಕೆ ಮಾಡುವ ಮೂಲಕ ಮಧ್ಯಮವರ್ಗ ಹಾಗೂ ಸಂಬಳದಾರರು ಹೆಚ್ಚು ಕೊಳ್ಳುವಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವ ಉದ್ದೇಶವೂ ಇದೆ. ಗೃಹನಿರ್ಮಾಣ, ವಾಹನ ಖರೀದಿ, ಸರಕು ತಯಾರಿಕೆ ಹೆಚ್ಚಾಗಲಿದೆ. ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಲಿದೆ. ಈ ಮೂಲಕ ಆರ್ಥಿಕ ಚೇತರಿಕೆ ಕ್ರಮ ಕೈಗೊಳ್ಳಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯೋಜನೆ ಹಾಕಿಕೊಂಡಿದ್ದಾರೆ.

English summary
Budget 2020: Union government likely cut in personal income tax. what are the proposals before minister Nirmala Sitharaman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X