ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ
ಕೊವಿಡ್ 19 ಸಂಕಷ್ಟದ ನಡುವೆ ಮೋದಿ ಸರ್ಕಾರ್ 2.0 ಪೂರ್ಣ ಪ್ರಮಾಣದ ಬಜೆಟ್ ಇಂದು ಮಂಡನೆಯಾಗಿದೆ. ವೈಯಕ್ತಿಕ ತೆರಿಗೆದಾರರಿಗೆ ಕೊಂಚ ರಿಲೀಫ್ ನೀಡುವ ಆರ್ಥಿಕ ವರ್ಷಕ್ಕೆ ಅನುಗುಣವಾಗಿ ಮೂಲ ಆದಾಯ ತೆರಿಗೆ ಮಿತಿಯನ್ನು ಬದಲಾಯಿಸಲು ಮುಂದಾಗುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಲಕ್ಷ ರು ತನಕ ವಾರ್ಷಿಕ ಆದಾಯವಿರುವ ಸಂಬಳದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ.
ಕಳೆದ ಒಂದು ವರ್ಷದ ಮಿನಿ ಬಜೆಟ್ ನಲ್ಲಿ ಮಧ್ಯಮ ವರ್ಗದ ಕೈಲಿಗೆ ಹೆಚ್ಚಿನ ನಗದು ಸೇರಲಿದ್ದು, ಇದರಿಂದ ವ್ಯಾಪಾರ, ವಹಿವಾಟು, ಖರೀದಿ ಪ್ರಕ್ರಿಯೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಕಳೆದ ಬಜೆಟ್ ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್ ಪುನರ್ ರಚನೆ ಮಾಡಲಾಗಿದ್ದು, ಈ ಬಾರಿ ಸ್ಲ್ಯಾಬ್ ನಲ್ಲಿ ಬದಲಾವಣೆಯಾಗಿಲ್ಲ. ಕಳೆದ ಬಾರಿ ವೇತನದಾರ ವರ್ಗಗಳ ಬೇಡಿಕೆಯನ್ನು ಪರಿಗಣಿಸಿಲ್ಲ, ತೆರಿಗೆ ಪಾವತಿ ಮೂಲ ಮಿತಿಯಾದ 2.5 ಲಕ್ಷ ರುಗಳನ್ನು ನಿರೀಕ್ಷೆಯಂತೆ ಬದಲಾಯಿಸಿಲ್ಲ.
ವೃತ್ತಿಪರರ ತೆರಿಗೆದಾರ, ಸಣ್ಣ ತೆರಿಗೆದಾರರಿಗೆ ಅನುಕೂಲವಾಗಲು ಆದಾಯ ತೆರಿಗೆ ಇಲಾಖೆಯಿಂದ ಇ -ಸಹಯೋಗ ಯೋಜನೆ ಜಾರಿಗೊಳಿಸಲಿದೆ. ತೆರಿಗೆ ಪಾವತಿ, ಪಾವತಿ ವಿಧಾನ ಮಾತ್ರ ಬದಲಾವಣೆ ಘೋಷಣೆಯಾಗಿದೆ. ಆರ್ಥಿಕ ಬಿಕ್ಕಟ್ಟು, ಹಿಂಜರಿತ, ಕುಸಿತವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗೃಹಸಾಲದ ಲಾಭಾಂಶದ ಮೇಲೆ ತೆರಿಗೆ ವಿನಾಯಿತಿ ಮುಂದುವರಿಕೆ, ಒಂದು ವರ್ಷದ ತನಕ ಲಾಭಾಂಶ ತೆರಿಗೆ ಕಟ್ಟುವಂತಿಲ್ಲ.

ಮೂಲ ತೆರಿಗೆ ಪಾವತಿ ಮಿತಿ ಮೂಲ ತೆರಿಗೆ ಪಾವತಿ ಮಿತಿ
ಮೂಲ ತೆರಿಗೆ ಪಾವತಿ ಮಿತಿ ಮೂಲ ತೆರಿಗೆ ಪಾವತಿ ಮಿತಿ : 5 ಲಕ್ಷ ರು ತನಕ ತೆರಿಗೆ ಪಾವತಿಸುವಂತಿಲ್ಲ, ಇನ್ನೊಂದಿಷ್ಟು ಉಳಿತಾಯ ತೋರಿಸಿದರೆ 9 ಲಕ್ಷ ರು ತನಕ ತೆರಿಗೆ ಕಟ್ಟದೆ ಇರಬಹುದು ಎಂದು ತಜ್ಞರು ತಿಳಿಸಿದ್ದಾರೆ. ಆದರೆ, ತೆರಿಗೆ ಪಾವತಿ ಮೂಲ ಮಿತಿಯಾದ 2.5 ಲಕ್ಷ ರುಗಳನ್ನು 2014ರಿಂದ ಇಲ್ಲಿ ತನಕ ಬದಲಾಯಿಸಿಲ್ಲ. ಪ್ರಸ್ತುತ ಬಜೆಟ್ ನಲ್ಲಿ ಈ ಮಿತಿಯನ್ನು 3 ಲಕ್ಷ ರುಗಳಿಗೆ ಏರಿಸಲು ಬೇಡಿಕೆ ಬಂದಿತ್ತು. ಆದರೆ, ಈಗಾಗಲೇ ವೈಯಕ್ತಿಕ ಆದಾಯ 5 ಲಕ್ಷರು ತನಕ ಹೊಂದಿರುವವರು ಸೆಕ್ಷನ್ 87ಎ ಅಡಿಯಲ್ಲಿ ಪೂರ್ತಿ ತೆರಿಗೆ ರಿಬೇಟ್ ಪಡೆಯಬಹುದಾಗಿದೆ. ಹೀಗಾಗಿ, ಮೂಲ ಮಿತಿಯನ್ನು ಬದಲಾಯಿಸಿಲ್ಲ.

ಆದಾಯ ತೆರಿಗೆ ಪಾವತಿ ಸ್ಲ್ಯಾಬ್ಸ್
ಮೂಲ ಆದಾಯ ತೆರಿಗೆ ಮಿತಿ 2.5 ಲಕ್ಷ ರು 5 ಲಕ್ಷ ರು ತನಕ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ.
5 ಲಕ್ಷ ರು ನಿಂದ 7.5 ಲಕ್ಷ ರು ತನಕ ಆದಾಯ ಉಳ್ಳವರಿಗೆ 10% ತೆರಿಗೆ
7.5 ಲಕ್ಷ ರು ನಿಂದ1 0 ಲಕ್ಷ ರು ತನಕ ಆದಾಯ ಉಳ್ಳವರಿಗೆ 15% ತೆರಿಗೆ
10 ಲಕ್ಷ ರು ನಿಂದ 12.5 ಲಕ್ಷ ರು ತನಕ ಆದಾಯ ಉಳ್ಳವರಿಗೆ 20% ತೆರಿಗೆ
12.5 ಲಕ್ಷ ರು ನಿಂದ 15 ಲಕ್ಷ ರು ತನಕ ಆದಾಯ ಉಳ್ಳವರಿಗೆ 25% ತೆರಿಗೆ
15 ಲಕ್ಷ ರು ಮೇಲ್ಪಟ್ಟ ಆದಾಯ ಉಳ್ಳವರಿಗೆ ಶೇ 30 ರಷ್ಟು ತೆರಿಗೆ

ಐಟಿ ರಿಟರ್ನ್ಸ್ ಎಲ್ಲಾ ವಿಧಾನಗಳನ್ನು ಡಿಜಿಟಲೀಕರಣ
* ಆದಾಯ ತೆರಿಗೆ ಪಾವತಿ ಮಾಡಲಿ ಆಧಾರ್, ಪ್ಯಾನ್ ಕಾರ್ಡ್ ಎರಡರಲ್ಲಿ ಒಂದು ಹೊಂದಿದ್ದರೆ ಸಾಕು, ಎರಡು ಕಡ್ಡಾಯ ಎಂಬ ಸಡಿಲಗೊಳಿಸಲಾಗಿದೆ.
* ಐಟಿ ರಿಟರ್ನ್ಸ್ ಎಲ್ಲಾ ವಿಧಾನಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ಕೃತಕ ಬುದ್ಧಿಮತ್ತೆ(AI)ಬಳಸಿಕೊಂಡು ತೆರಿಗೆ ಪಾವತಿ ವ್ಯವಸ್ಥೆಯನ್ನು ಅಧಿಕಾರಿಗಳು ರಹಿತ, ಆನ್ ಲೈನ್ ವ್ಯವಸ್ಥೆಯಾಗಿ ಬದಲಾಯಿಸಲಾಗುತ್ತದೆ.
* ಒಂದು ಬ್ಯಾಂಕಿನ ಒಂದು ಖಾತೆಯಿಂದ ವಾರ್ಷಿಕ 1 ಕೋಟಿ ರು ವಿಥ್ ಡ್ರಾ ಮಾಡಿದರೆ ಶೇ 2ರಷ್ಟು ಟಿಡಿಎಸ್ ಕಡಿತಗೊಳಿಸಲಾಗುತ್ತದೆ.
* ಭವಿಷ್ಯ ನಿಧಿ ಹಾಗೂ ವಿಮೆ ಯಲ್ಲಿ ಹೂಡಿಕೆ ಮಾಡಿದರೆ 6.25 ಲಕ್ಷ ರು ತನಕ ತೆರಿಗೆ ವಿನಾಯಿತಿ ಇರುತ್ತದೆ.
* TDS ಅಡಿಯಲ್ಲಿ ಗೃಹಸಾಲದ ಮಿತಿ 1.5 ಲಕ್ಷರು ನಿಂದ 2 ಲಕ್ಷ ರುಗೆ ಏರಿಕೆ.
* ಸ್ಟಾಡರ್ಡ್ ಡಿಡಕ್ಷನ್ 40 ಸಾವಿರ ರು ನಿಂದ 50 ಸಾವಿರ ರು ಗೆ ಏರಿಕೆ. 2019-20ನೇ ಸಾಲಿನ ಬಜೆಟ್ ನಲ್ಲೂ ಈ ಎಲ್ಲಾ ಅಂಶಗಳನ್ನು ಮುಂದುವರೆಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೋಟಿ ರು ಆದಾಯ ಇದ್ದವರಿಗೆ ಆದಾಯ ಮಿತಿ
ವಾರ್ಷಿಕ 2 ಕೋಟಿ ರು ನಿಂದ 5 ಕೋಟಿ ರು ಆದಾಯ ಹೊಂದಿದವರಿಗೆ ತೆರಿಗೆ ಶೇ 3ರಷ್ಟು ಹೆಚ್ಚಳ.
ವಾರ್ಷಿಕ 5 ಕೋಟಿ ರುಗೂ ಅಧಿಕ ಆದಾಯ ಹೊಂದಿದವರಿಗೆ ಶೇ 7ರಷ್ಟು ತೆರಿಗೆ
ಎರಡರಿಂದ ಐದು ಕೋಟಿ ಮಧ್ಯೆ ಆದಾಯ ಇರುವವರಿಗೆ ತೆರಿಗೆ ಪ್ರಮಾಣವು 39 ಪರ್ಸೆಂಟ್ ಆಗುತ್ತದೆ. ಇನ್ನು ಆದಾಯವು 5 ಕೋಟಿ ಮೀರಿದರೆ ಸರ್ ಚಾರ್ಜ್ ಏರಿಕೆ ನಂತರ 42.74 ಪರ್ಸೆಂಟ್ ತೆರಿಗೆ ಬೀಳುತ್ತದೆ. ಇನ್ನು ವಾರ್ಷಿಕವಾಗಿ ಬ್ಯಾಂಕ್ ಖಾತೆಯಿಂದ ಎರಡು ಕೋಟಿ ನಗದು ವಿಥ್ ಡ್ರಾ ಮಾಡಿದರೆ ಎರಡು ಪರ್ಸೆಂಟ್ ತೆರಿಗೆ ಬೀಳುತ್ತದೆ.












Click it and Unblock the Notifications