• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತೈಲ ಬೆಲೆ ಇಳಿಕೆ ಒಎಂಸಿಗಳೇ ನಿರ್ಧರಿಸಲಿವೆ: ನಿರ್ಮಲಾ ಸೀತಾರಾಮನ್

|
Google Oneindia Kannada News

ನವದೆಹಲಿ, ಫೆ. 3: ಕೇಂದ್ರ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಬಗ್ಗೆ ಯಾವುದೇ ಸೂಚನೆ ನೀಡದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಲೆ ಬದಲಾವಣೆಯ ಬಗ್ಗೆ ಸಂದರ್ಶನವೊಂದರಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡಿ, ತೈಲ ಬೆಲೆ ಇಳಿಕೆ, ಪರಿಷ್ಕರಣೆ ಯಾವುದೇ ನಿರ್ಧಾರವನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMC) ತೆಗೆದುಕೊಳ್ಳುತ್ತವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ $ 90 ದಾಟುತ್ತಿದ್ದಂತೆ, ಭಾರತದಲ್ಲೂ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಸುದ್ದಿ ಬಂದಿತ್ತು. ಇದರಿಂದ ಗ್ರಾಹಕರು ಕಂಗಲಾಗಿದ್ದರು. ಜೊತೆಗೆ ಸರ್ಕಾರವು ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಬಹುದು ಎಂಬುದು ಸಾಮಾನ್ಯ ನಿರೀಕ್ಷೆಯಿತ್ತು. ಇಂಧನದ ಮೇಲಿನ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಯು ಬೆಲೆಯ 40-50% ರಷ್ಟಿದೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದಾಯದ ಪ್ರಮುಖ ಮೂಲವಾಗಿದೆ. ಆದರೆ, ಬೆಲೆ ಪರಿಷ್ಕರಣೆಯ ವಿಷಯಕ್ಕೆ ಬಂದರೆ "ತೈಲ ಮಾರುಕಟ್ಟೆ ಕಂಪನಿಗಳ ಕೈಯಲ್ಲಿದೆ" ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ತೈಲ ಮಾರುಕಟ್ಟೆ ಕಂಪನಿಗಳು (OMC): ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ - ರೀಟೈಲ್ ಪಂಪ್‌ಗಳಲ್ಲಿ ಮಾರಾಟವಾಗುವ ಇಂಧನದ ಬೆಲೆಯನ್ನು ಅಂತಾರಾಷ್ಟ್ರೀಯ ದರಗಳೊಂದಿಗೆ ಹೊಂದಿಸಲು ಪ್ರತಿ ಹದಿನೈದು ದಿನಗಳಿಗೊಮ್ಮೆ ಬದಲಾಯಿಸುತ್ತದೆ. ಇದಲ್ಲದೆ, ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $ 80 ರಷ್ಟಿದ್ದ ಕಾರಣ ಬೆಲೆಗಳಿಂದ ಪರಿಹಾರವನ್ನು ಒದಗಿಸಲು ಕೇಂದ್ರ ಸರ್ಕಾರವು ನವೆಂಬರ್ 4, 2021 ರಂದು ಕೊನೆಯದಾಗಿ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಅಲ್ಲಿಂದೀಚೆಗೆ ಕಚ್ಚಾ ತೈಲ ಬೆಲೆಗಳು ಗಣನೀಯವಾಗಿ ಏರಿಕೆ ಕಂಡಿದೆ. ಆದರೆ OMCಗಳು ಗ್ರಾಹಕರಿಗೆ ವೆಚ್ಚದ ಏರಿಕೆಯನ್ನು ಸಂಪೂರ್ಣವಾಗಿ ವರ್ಗಾಯಿಸಲು ಸಾಧ್ಯವಾಗಿಲ್ಲ, ಇದು ಕಡಿಮೆ-ಚೇತರಿಕೆಗೆ ಕಾರಣವಾಗುತ್ತದೆ. ಫೆಬ್ರವರಿ 3ರಂದು ಸರಿ ಸುಮಾರು 90 ನೇ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬದಲಾಗದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಇದು ಇದುವರೆಗಿನ ಸುದೀರ್ಘ ಅವಧಿಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 95.41 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 86.67 ರೂ ಇದೆ.

ಕೇಂದ್ರ ಬಜೆಟ್ 2022ನಲ್ಲಿ ಮಿಶ್ರಣವಲ್ಲದ ಇಂಧನದ ಪ್ರತಿ ಲೀಟರ್ ಮೇಲೆ 2 ರೂ. ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ, ಈ ಹೆಚ್ಚುವರಿ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಹೀಗಾಗಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ.

ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ತಿಂಗಳು ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 0.45ರಷ್ಟು ಇಳಿಕೆಯಾಗಿ 89.06 ಯುಎಸ್ ಡಾಲರ್‌ನಷ್ಟಿದೆ. (1 usd to inr=74.85 ರು).

ನಿರ್ಮಲಾ ಸೀತಾರಾಮನ್
Know all about
ನಿರ್ಮಲಾ ಸೀತಾರಾಮನ್
English summary
Budget 2022: After leaving the excise duty on petrol and diesel unchanged in the Union Budget 2022-23, Finance Minister Nirmala Sitharaman said that any decision on price change, especially for petrol, would be taken by the oil marketing companies (OMCs).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X