ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಮೆಂಟ್ ದರ ನಿಯಂತ್ರಣ ಪ್ರಾಧಿಕಾರ ರಚನೆಗೆ ಒತ್ತಾಯ

|
Google Oneindia Kannada News

ಬೆಂಗಳೂರು ಡಿಸೆಂಬರ್‌ 24: ಅನಿಯಂತ್ರಿತವಾಗಿ ಹೆಚ್ಚಾಗುತ್ತಿರುವ ಸಿಮೆಂಟ್‌ ಹಾಗೂ ಸ್ಟೀಲ್‌ ದರಗಳಿಗೆ ನಿಯಂತ್ರಣ ಹೇರಲು ದರ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಾಯ ಹೇರುವುದಾಗಿ ಬಿಲ್ಡರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಮು ಮೋಹನ್‌ ಹೇಳಿದರು.

ನಗರದ ಬಿಲ್ಡರ್ಸ್‌ ಅಸೋಷಿಯೇಷನ್‌ ಎನ್‌.ಜಿ.ವಿ ಕ್ಲಬ್‌ನಲ್ಲಿ ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಬೆಂಗಳೂರು ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಬಿಲ್ಡರ್ಸ್‌ ಡೇ ಹಾಗೂ ಭಾರತ ರತ್ನ ಸರ್‌ ಎಂ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಿಮೇಂಟ್‌ ಹಾಗೂ ಸ್ಟೀಲ್‌ ಕಟ್ಟಡ ಕಾಮಗಾರಿಯ ಅತ್ಯಂತ ಅವಶ್ಯಕ ಕಚ್ಚಾ ವಸ್ತುಗಳು. ಈ ವಸ್ತುಗಳ ದರವನ್ನು ದಿನೇ ದಿನೇ ಹೆಚ್ಚಿಸಲಾಗುತ್ತಿದೆ.

ಸಿಮೆಂಟ್‌ ಉತ್ಪಾದಕರು ತಮ್ಮಲ್ಲೇ ತಂಡವನ್ನು ರಚಿಸಿಕೊಂಡು ಬೆಲೆಯನ್ನು ಹೆಚ್ಚಿಸುತ್ತಿರುವ ಬಗ್ಗೆ ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಕಾಂಪಿಟೇಷನ್‌ ಕಮಿಷನ್‌ ಗೆ ದೂರು ನೀಡಿತ್ತು. ಇದರ ವಿಚಾರಣೆ ನಡೆಸಿದ ಕಾಂಪಿಟೇಷನ್‌ ಕಮಿಷನ್‌ ಆಫ್‌ ಇಂಡಿಯಾ ಬಿಲ್ಡರ್ಸ್‌ ಅಸೋಸಿಯೇಷನ್‌ ಗೆ 6307 ಕೋಟಿ ರೂಪಾಯಿಗಳ ನಷ್ಟವನ್ನು ಭರಿಸಿಕೊಡುವಂತೆ ಆದೇಶ ನೀಡಿದೆ. ಈ ಪ್ರಕರಣದ ಮೇಲ್ಮನವಿಯ ತನಿಖೆ ಇನ್ನೂ ಕೂಡಾ ಸುಪ್ರೀಂ ಕೋರ್ಟಿನಲ್ಲಿದೆ ಎಂದರು.

Builders Association demand Govt to form Cement and Steel authority

ಇದೇ ರೀತಿ ಸ್ಟೀಲ್‌ ಉತ್ಪಾದಕರು ಹೆಚ್ಚಿನ ದರಕ್ಕೆ ಹೊರ ದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಕಳೆದ 6 ತಿಂಗಳಲ್ಲಿ ಕೋವಿಡ್‌ ನಮ್ಮ ಕ್ಷೇತ್ರದ ಮೇಲೆ ಬಹಳ ಆಘಾತಕಾರಿ ಪರಿಣಾಮ ಬೀರಿದೆ. ಇಂತಹ ಸಂಧರ್ಭದಲ್ಲೂ ಶೇಕಡಾ 50 ರಷ್ಟು ದರವನ್ನು ಹೆಚ್ಚಿಸಲಾಗಿದೆ.

ಈ ಬೆಳವಣಿಗೆಗಳು ಕಟ್ಟಡ ಕಾಮಗಾರಿ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬಿರಿದ್ದು, ಇವುಗಳ ಬೆಲೆ ನಿಯಂತ್ರಣ ಮಾಡದಿದ್ದಲ್ಲಿ ಕಾಮಗಾರಿಗಳನ್ನು ಸಂಪೂರ್ಣ ನಿಲ್ಲಿಸಬೇಕಾಗುವ ಸಂಧರ್ಭ ಒದಗಿ ಬರಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಿಮೆಂಟ್‌ ಹಾಗೂ ಸ್ಟೀಲ್‌ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವ ಮೂಲಕ ಈ ಕ್ಷೇತ್ರದ ಹಿತಾಸಕ್ತಿಯನ್ನು ಕಾಪಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

Builders Association demand Govt to form Cement and Steel authority

ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಬೆಂಗಳೂರು ವಿಭಾಗದ ಅಧ್ಯಕ್ಷ ಜಿ ರವೀಂದ್ರ ಮಾತನಾಡಿ, ಕಟ್ಟಡ ಕಾರ್ಮಿಕರು ಹಾಗೂ ಇಂಜೀನಿಯರ್ಸ್‌ ಗೆ ತರಬೇತಿ ನೀಡಲು ತರಬೇತಿ ಕೇಂದ್ರವನ್ನು ಸ್ಥಾಪಿಸಲು ಸ್ಥಳ ನೀಡುವಂತೆ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಇನ್ನು ಕೆಲವೇ ದಿನಗಳಲ್ಲಿ ನಿವೇಶನ ದೊರಕುವ ಭರವಸೆಯನ್ನು ವ್ಯಕ್ತಪಡಿಸಿದರು.

Builders Association demand Govt to form Cement and Steel authority

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಕಾರ್ಯಕ್ರಮದಲ್ಲಿ ಭಾರತ ರತ್ನ ಸರ್‌ ಎಂ ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ಕೆ.ಎಲ್‌ ಮೋಹನ್‌ ರಾವ್‌ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ 2021 ರ ಡೈರಿಯನ್ನು ಬಿಡುಗಡೆಗೊಳಿಸಲಾಯಿತು. ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಕರ್ನಾಟಕ ರಾಜ್ಯ ವಿಭಾಗದ ಅಧ್ಯಕ್ಷ ಯು. ಎಂ ಗುರಶಾಂತಪ್ಪ, ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಬೆಂಗಳೂರು ವಿಭಾಗದ ಕಾರ್ಯದರ್ಶಿ ಅಬ್ದುಲ್‌ ಸತಾರ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

English summary
Builder Association of India demanded Karnataka Government to form Cement and Steel authority to cap price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X