• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಲೀಕ ವಿಜಿ ಸಿದ್ದಾರ್ಥ ಕಣ್ಮರೆ, ಕಾಫಿ ಡೇ ಷೇರುಗಳು ಕುಸಿತ

|

ಬೆಂಗಳೂರು, ಜುಲೈ 30: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕೆಫಿ ಕಾಫಿಡೇ ಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ನಿಗೂಢ ನಾಪತ್ತೆ ಪ್ರಕರಣದಿಂದ ಅವರ ಸಂಸ್ಥೆಗಳ ಸಿಬ್ಬಂದಿಗಳು ದಿಗ್ಭ್ರಮೆಗೊಳಗಾಗಿದ್ದಾರೆ. ಕಾಫಿ ಡೇ ಸೇರಿದಂತೆ ವಿಜಿ ಸಿದ್ದಾರ್ಥ ಅವರ ಮಾಲೀಕತ್ವದ ಸಂಸ್ಥೆಗಳು ಮಂಗಳವಾರದಂದು ಬಂದ್ ಆಗಿವೆ. ಈ ನಡುವೆ ಷೇರುಪೇಟೆಯಲ್ಲಿ ಕಾಫಿ ಡೇ ಸಂಸ್ಥೆ ಷೇರುಗಳು ನಿರಂತರವಾಗಿ ಕುಸಿಯುತ್ತಿವೆ.

ಕಾಫಿ ಡೇ ಮಾಲೀಕ ಸಿದ್ದಾರ್ಥ ನಿಗೂಡ ನಾಪತ್ತೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಕಾಫಿ ಡೇ ಸಂಸ್ಥೆಎಲ್ಲಾ ವ್ಯವಹಾರಗಳು ಕಾರ್ಯಸ್ಥಗಿತಗೊಳಿಸಲಾಗಿದೆ.

CCD Owner VG Siddhartha Missing LIVE: ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ನಾಪತ್ತೆ: ಕ್ಷಣ-ಕ್ಷಣದ ಮಾಹಿತಿCCD Owner VG Siddhartha Missing LIVE: ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ನಾಪತ್ತೆ: ಕ್ಷಣ-ಕ್ಷಣದ ಮಾಹಿತಿ

ಪ್ರತಿಷ್ಠಿತ ಎಬಿಸಿ ಕಂಪನಿ ಸೇರಿದಂತೆ ಸೇರಾಯ್ ರೆಸಾರ್ಟ್, ಅಂಬರ್ ವ್ಯಾಲಿ ಶಾಲೆ, ವಿ.ಟಿ.ಸಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಸ್ಟೇಟ್ ಕೆಲಸಕ್ಕೆ ಅಗಮಿಸಿದ ಸಾವಿರಾರು ಕಾರ್ಮಿಕರನ್ನು ವಾಪಸ್ ಕಳುಹಿಸಲಾಗಿದೆ.

ಮಂಗಳವಾರಂದು ಬಿಎಸ್ಇಯಲ್ಲಿ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಷೇರುಗಳು 154.05ರು ನಂತೆ ವಹಿವಾಟು ಆರಂಭಿಸಿದ್ದು, 19.90% ಕುಸಿತ ಕಂಡು 38.50ರು ಕಳೆದುಕೊಂಡಿದೆ. ಇದೇ ವೇಳೆ ಎನ್ ಎಸ್ ಇಯಲ್ಲಿ 20% ಕುಸಿತ ಕಂಡು 38.35ರು ನಷ್ಟು ನಷ್ಟವಾಗಿದೆ.

ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಸುಳಿವು ನೀಡದ ಡ್ರೈವರ್ ದೂರುಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಸುಳಿವು ನೀಡದ ಡ್ರೈವರ್ ದೂರು

ಮಾರ್ಚ್ 2019ರ ಎಣಿಕೆಯಂತೆ ಭಾರತದಲ್ಲಿ ಸುಮಾರು 1,752 ಕೆಫೆಗಳನ್ನು ಹೊಂದಿರುವ ಕೆಫೆ ಕಾಫಿ ಡೇ ಸದ್ಯ ದೇಶದಲ್ಲಿ ಮುಂಚೂಣಿಯಲ್ಲಿರುವ ಕಾಫಿ ಸಂಸ್ಥೆಯಾಗಿದೆ. ಭಾರತದಲ್ಲಿ ವಿಸ್ತೃತವಾದ ಕಾಫಿ ಮಳಿಗೆಯನ್ನು ವಿಸ್ತರಿಸುವಲ್ಲಿ ಸಂಸ್ಥೆಯ ಸ್ಥಾಪಕ ವಿಜಿ ಸಿದ್ದಾರ್ಥ ಅವರ ಪಾತ್ರ ದೊಡ್ಡದು. 1996ರಿಂದ ಇಲ್ಲಿ ತನಕ ಹಲವು ಏರಿಳಿತ ಕಂಡಿರುವ ಸ್ವದೇಶಿ ಬ್ರ್ಯಾಂಡ್ ಕೆಫೆ ಕಾಫಿ ಡೇ ಈಗ ಅಮೆರಿಕದ ಕೋಕ ಕೋಲಾ ಕಂಪನಿ ಪಾಲಾಗುವ ಮಾತುಕತೆ ನಡೆದಿತ್ತು. ಕಾಫಿ ಡೇ ಸಂಸ್ಥೆ ಆದಾಯ 1,777 ಕೋಟಿ ರು ಹಾಗೂ 2020ರ ವೇಳೆಗೆ 2250 ಕೋಟಿ ರು ಗಳಿಕೆ ಗುರಿ ಹೊಂದಿದ್ದರು. ಇತ್ತೀಚೆಗೆ ಸಿದ್ದಾರ್ಥ ಅವರು ಮೈಂಡ್ ಟ್ರೀಯಲ್ಲಿದ್ದ ತಮ್ಮ 20.3% ಷೇರುಗಳನ್ನು ಎಲ್ ಅಂಡ್ ಟಿ ಕಂಪನಿಗೆ ಮಾರಿದ್ದರು.

English summary
Cafe Coffee Day VG Siddhartha goes missing, Coffee Day Enterprises Ltd shares down on Tuesday (July 30) on BSE lost Rs 38.50 tanked 19.99% in the opening trade.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X