ಆರ್‌ಟಿಒದಲ್ಲಿ ಪರೀಕ್ಷೆ ಇಲ್ಲದೇ ಸಿಗಲಿದೆ DL; ಏನಿದು ಹೊಸ ನಿಯಮ...
ನವದೆಹಲಿ, ಜೂನ್ 16: ಡ್ರೈವಿಂಗ್ ಲೈಸೆನ್ಸ್ ನಿರೀಕ್ಷೆಯಲ್ಲಿರುವ ಜನರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಚಾಲನಾ ಪರವಾನಗಿ ಪಡೆಯಲು ಹೊಸ ಅಧಿಸೂಚನೆ ಹೊರಡಿಸಿದ್ದು, ಈ ನಿಯಮದ ಪ್ರಕಾರ ನೀವು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇದೀಗ ಆರ್‌ಟಿಒಗೆ ಹೋಗಿ ಚಾಲನಾ ಪರೀಕ್ಷೆಗೆ ಒಳಪಡಬೇಕಾಗಿಲ್ಲ.
Recommended Video
ಆದರೆ ಯಾವುದೇ ಸರ್ಕಾರಿ ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರದಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ. ಅಂಥವರಿಗೆ ಚಾಲನಾ ಪರವಾನಗಿ ಅರ್ಜಿ ಸಲ್ಲಿಸುವಾಗ ಆರ್‌ಟಿಒದಲ್ಲಿ ನಡೆಯಲಿರುವ ಚಾಲನಾ ಪರೀಕ್ಷೆಯಿಂದ ವಿನಾಯಿತಿ ಸಿಗಲಿದೆ. ಈ ನಿಯಮ ಯಾವಾಗ ಜಾರಿಗೆ ಬರಲಿದೆ? ಮುಂದೆ ಓದಿ...

ಜುಲೈ 1ರಿಂದ ಈ ನಿಯಮ ಜಾರಿ
ಜುಲೈ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಚಾಲನಾ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸುವ ವ್ಯಕ್ತಿಗೆ ಇನ್ನು ಆರ್‌ಟಿಒದಲ್ಲಿ ಚಾಲನಾ ಪರೀಕ್ಷೆಯ ಅಗತ್ಯವಿರುವುದಿಲ್ಲ. ಅವರ ಚಾಲನಾ ಪರವಾನಗಿಯನ್ನು ಅವರು ಚಾಲನೆ ತರಬೇತಿ ಪಡೆದುಕೊಂಡ, ರಾಜ್ಯ ಸಾರಿಗೆ ಪ್ರಾಧಿಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಚಾಲನಾ ತರಬೇತಿ ಕೇಂದ್ರದ ಪ್ರಮಾಣ ಪತ್ರವನ್ನು ಪರಿಗಣಿಸಿ ನೀಡಲಾಗುವುದು.

ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸೂಚನೆ
ಚಾಲನಾ ಟ್ರ್ಯಾಕ್, ಐಟಿ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆಯ ಮಾನದಂಡಗಳನ್ನು ಪೂರೈಸುವ ಹಾಗೂ ನಿಗದಿತ ಪಠ್ಯಕ್ರಮದ ಪ್ರಕಾರ ತರಬೇತಿ ನೀಡುವ ಚಾಲನಾ ಕೇಂದ್ರಗಳಿಗೆ ಮಾನ್ಯತೆ ನೀಡಲಾಗುವುದು ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ. ಈ ಖಾಸಗಿ ಚಾಲನಾ ತರಬೇತಿ ಕೇಂದ್ರಗಳ ಮಾನ್ಯತೆ ಐದು ವರ್ಷಗಳವರೆಗೆ ಇರುತ್ತದೆ. ನಂತರ ಅವುಗಳನ್ನು ಸರ್ಕಾರ ನವೀಕರಿಸಬೇಕಾಗುತ್ತದೆ.

ಚಾಲನಾ ಕೇಂದ್ರಗಳಿಗೆ ಷರತ್ತುಗಳು...
ಪ್ರತಿ ವರ್ಷ ರಸ್ತೆ ಅಪಘಾತದಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆಯನ್ನು ನಿಯಂತ್ರಿಸಲು ಕೇಂದ್ರ ಈ ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದೆ. ಈ ಹೊಸ ಮಾರ್ಗಸೂಚಿಗಳೊಂದಿಗೆ, ಚಾಲನಾ ಕೌಶಲ ಹೆಚ್ಚಿಸುವ ಉದ್ದೇಶ ಸಚಿವಾಲಯದ್ದಾಗಿದೆ. ಚಾಲನಾ ತರಬೇತಿ ಕೇಂದ್ರಗಳಿಗೆ ಸಂಬಂಧಿಸಿದಂತೆ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಕೆಲವು ಷರತ್ತುಗಳನ್ನು ವಿಧಿಸಿದೆ.

ಷರತ್ತುಗಳು ಏನು?
1. ಪ್ರತಿ 5 ವರ್ಷಗಳಿಗೆ ಖಾಸಗಿ ಚಾಲನಾ ತರಬೇತಿ ಕೇಂದ್ರಗಳ ಮಾನ್ಯತೆಯನ್ನು ನವೀಕರಿಸಿಕೊಳ್ಳಬೇಕು.
2. ದ್ವಿಚಕ್ರ, ತ್ರಿಚಕ್ರ ಹಾಗೂ ಲಘು ಮೋಟಾರು ವಾಹನಗಳ ತರಬೇತಿ ಕೇಂದ್ರಗಳು ಕನಿಷ್ಠ ಒಂದು ಎಕರೆ ಪ್ರದೇಶ ಜಾಗ ಹೊಂದಿರಬೇಕು.
3. ಮಧ್ಯಮ ಮತ್ತು ಭಾರೀ ಪ್ರಯಾಣಿಕ, ಸರಕು ವಾಹನಗಳು ಹಾಗೂ ಟ್ರೇಲರ್‌ಗಳ ತರಬೇತಿ ಕೇಂದ್ರಗಳಿಗೆ ಕನಿಷ್ಠ ಎರಡು ಎಕರೆ ಭೂಮಿ ಇರಬೇಕು.
4. ತರಬೇತುದಾರ ಕನಿಷ್ಠ 12ನೇ ತರಗತಿ ಪಾಸ್ ಆಗಿದ್ದು, ಕನಿಷ್ಠ 5 ವರ್ಷಗಳ ಚಾಲನಾ ಅನುಭವ ಹೊಂದಿರಬೇಕು.
5. ಚಾಲನಾ ತರಬೇತಿ ನೀಡುವವರು ಸಚಿವಾಲಯದ ಬೋಧನಾ ಪಠ್ಯಕ್ರಮದಂತೆ ತರಬೇತಿ ನೀಡಬೇಕು. ಲಘು ಮೋಟಾರು ವಾಹನ ಓಡಿಸಲು 29 ಗಂಟೆಗಳವರೆಗೆ ತರಬೇತಿ ನೀಡಬೇಕು.
6. ಚಾಲನಾ ಕೇಂದ್ರಗಳ ಪಠ್ಯಕ್ರಮವು ಸಿದ್ಧಾಂತ ಹಾಗೂ ಪ್ರಾಯೋಗಿಕ ಈ ಎರಡು ಭಾಗಗಳನ್ನು ಒಳಗೊಂಡಿರಬೇಕು.
7. ಚಾಲನೆಯ ಮೂಲ ಅಂಶಗಳನ್ನು ಪ್ರಾಯೋಗಿಕ ಕಲಿಕೆ ಮೂಲಕ 21 ಗಂಟೆಗಳ ಕಾಲ ಕಲಿಯಬೇಕಾಗುತ್ತದೆ.
8. ಸಿದ್ಧಾಂತದ ಕಲಿಕೆಯು 8 ಗಂಟೆಗಳ ಅವಧಿಯದ್ದಾಗಿರಬೇಕು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications