ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣಗೆ ನ್ಯಾಯಾಂಗ ಬಂಧನ

|
Google Oneindia Kannada News

ನವದೆಹಲಿ, ಮಾರ್ಚ್ 14: ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌ (ಎನ್‌ಎಸ್‌ಇ)ಯ ಹಿಮಾಲಯನ್ ಯೋಗಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಚಿತ್ರಾ ರಾಮಕೃಷ್ಣರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಸಿಬಿಐ ವಿಶೇಷ ನ್ಯಾಯಾಲಯವು ಇಂದು ಚಿತ್ರಾರನ್ನು ಜೈಲಿಗೆ ಕಳಿಸಿದೆ.

ಎನ್‌ಎಸ್‌ಇ ಸ್ಥಳ ಪರಭಾರೆ ಪ್ರಕರಣದಲ್ಲಿ, ಆರೋಪಿ ರಾಮಕೃಷ್ಣ ತನ್ನ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆರೋಪಿ ಆನಂದ್ ಸುಬ್ರಮಣಿಯನ್ ಅವರನ್ನು ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಎಂಡಿ ಸಲಹೆಗಾರರನ್ನಾಗಿ ಮರು ನೇಮಕ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ. ಏಪ್ರಿಲ್ 1, 2015 ರಿಂದ, NRC ಮತ್ತು ಮಂಡಳಿಯ ಗಮನಕ್ಕೆ ತರದೆ ನೇಮಕಾತಿ ಮಾಡಲಾಗಿದೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.

ಎನ್ಎಸ್ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣನ್ ಬಂಧಿಸಿದ ಸಿಬಿಐಎನ್ಎಸ್ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣನ್ ಬಂಧಿಸಿದ ಸಿಬಿಐ

ಆನಂದ್ ಸುಬ್ರಮಣಿಯನ್ ಅವರ ಜಾಮೀನಿನ ವಿರುದ್ಧ ನ್ಯಾಯಾಲಯದ ಮುಂದೆ ಸಲ್ಲಿಸಿದ ಉತ್ತರದಲ್ಲಿ, ಆನಂದ್ ಸುಬ್ರಮಣಿಯನ್ ಅವರು ಎನ್‌ಎಸ್‌ಇಯಲ್ಲಿ ಮುಖ್ಯ ಕಾರ್ಯತಂತ್ರದ ಸಲಹೆಗಾರರಾಗಿ ತೊಡಗಿಸಿಕೊಳ್ಳುವ ಮೊದಲು ಚಿತ್ರಾ ರಾಮಕೃಷ್ಣ ಅವರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದರು ಎಂದು ಹೇಳಿದ್ದಾರೆ. ಅವರ ಪತ್ನಿ ಸುನಿತಾ ಸುಬ್ರಮಣಿಯನ್ ಅವರು ಏಪ್ರಿಲ್ 2011 ರಿಂದ ಚೆನ್ನೈನಲ್ಲಿ NSE ಯ ಪ್ರಾದೇಶಿಕ ಮುಖ್ಯಸ್ಥರಾಗಿದ್ದರು.

CBI court sends former NSE CEO Chitra Ramkrishan to 14 days custody

ಫೆಬ್ರವರಿ 11 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರು ನಿಯಂತ್ರಕ ಸೆಬಿ ಆದೇಶ ಹೊರಡಿಸಿ, ಚಿತ್ರಾ ರಾಮಕೃಷ್ಣ ಅವರು ನೇಮಕಾತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 3 ಕೋಟಿ ರೂಪಾಯಿ ದಂಡವನ್ನು ವಿಧಿಸಿತ್ತು.

 ಪರಿಚಯವೇ ಇಲ್ಲದ ಯೋಗಿ ಮಾತಿನಂತೆ ನಿರ್ಧಾರ ಕೈಗೊಂಡಿದ್ದ ಎನ್‌ಎಸ್‌ಇ ಮಾಜಿ ಸಿಇಒ! ಪರಿಚಯವೇ ಇಲ್ಲದ ಯೋಗಿ ಮಾತಿನಂತೆ ನಿರ್ಧಾರ ಕೈಗೊಂಡಿದ್ದ ಎನ್‌ಎಸ್‌ಇ ಮಾಜಿ ಸಿಇಒ!

ಏನಿದು ಎನ್‌ಎಸ್‌ಇ ಹಗರಣ ಪ್ರಕರಣ?
ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌ ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರು ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತಿಳಿಸಿದೆ ಎಂದು reuters ವರದಿ ಮಾಡಿದೆ.

4 ಲಕ್ಷ ಕೋಟಿ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯದ ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್​ಎಸ್​ಇ (NSE)ಗೆ ಮಾಜಿ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಚಿತ್ರಾ ರಾಮಕೃಷ್ಣ ತಾನು ನೋಡದ, ತನಗೆ ಪರಿಚಯವೇ ಇಲ್ಲದ ಹಿಮಾಲಯದ ಯೋಗಿಯೋರ್ವರ ಸಲಹೆಯನ್ನು ಪಡೆದುಕೊಂಡೇ ನಿರ್ಧಾರವನ್ನು ಕೈಗೊಳ್ಳುತ್ತಿದ್ದರು. NSEಯ ಪ್ರಮುಖ ವ್ಯವಹಾರ ಯೋಜನೆಗಳು ಮತ್ತು ಅಜೆಂಡಾ ಸೇರಿದಂತೆ ಹಲವಾರು ವಿಚಾರಗಳನ್ನು ಆ ಅಪರಿಚಿತ ಯೋಗಿಯೊಂದಿಗೆ ಹಂಚಿಕೊಂಡಿದ್ದಾರೆ ಎಂಬ ವಿಚಾರವನ್ನು ಸೆಬಿ ಬಹಿರಂಗಪಡಿಸಿದೆ.

ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016 ರ ನಡುವೆ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (ಎನ್‌ಎಸ್‌ಇ) ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಆಗಿದ್ದರು ಮತ್ತು "ವೈಯಕ್ತಿಕ ಕಾರಣಗಳನ್ನು" ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು.

ಎನ್‌ಎಸ್‌ಇ ಮಾಜಿ ಎಂಡಿ ಮತ್ತು ಸಿಇಒ ಚಿತ್ರಾ ರಾಮಕೃಷ್ಣ ಅವರು ಮತ್ತು ಇತರರ ವಿರುದ್ಧ ತೆರಿಗೆ ವಂಚನೆ ತನಿಖೆಯ ಭಾಗವಾಗಿ ಮುಂಬೈನಲ್ಲಿ ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

English summary
Former NSE chief Chitra Ramkrishna has been sent to jail for a period of 14 days by CBI court in a market manipulation scam case on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X