• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗ್ರಾಹಕರಿಗೆ ಸಿಹಿ ಸುದ್ದಿ: ಖಾದ್ಯ ತೈಲಗಳ ಮೇಲೆ ಆಮದು ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಅಕ್ಟೋಬರ್ 14: ಸರಕುಗಳ ಜಾಗತಿಕ ಬೆಲೆ ಏರಿಕೆಯಿಂದ ದೇಶದ ಗ್ರಾಹಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ ಖಾದ್ಯ ತೈಲಗಳ ಆಮದು ಸುಂಕವನ್ನು ಕಡಿತಗೊಳಿಸಿದೆ.

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಕಡಿತಗೊಳಿಸಿದೆ.

ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಬೀಜದ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ.2.5ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಚ್ಚಾ ತಾಳೆ ಎಣ್ಣೆಯು ಕೃಷಿ ಸೆಸ್ ಅನ್ನು ಶೇ.20ರಿಂದ ಶೇ.7.5ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿರುವುದರ ಅನುಕೂಲ ಗ್ರಾಹಕರಿಗೆ ಸಿಗಲಿದೆ.

ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಎರಡರ ಮೇಲಿನ ಕೃಷಿ ಸೆಸ್ ಅನ್ನು ಶೇ.20ರಿಂದ ಶೇ.5ಕ್ಕೆ ಇಳಿಸಲಾಗಿದೆ. ಈ ಎಲ್ಲ ಬದಲಾವಣೆಗಳು ಗುರುವಾರದಿಂದ (ಅಕ್ಟೋಬರ್ 14, 2021ರಿಂದ 2022ರ ಮಾರ್ಚ್ ಅಂತ್ಯದವರೆಗೆ) ಜಾರಿಯಲ್ಲಿರುತ್ತವೆ ಎಂದು ಆದೇಶಗಳಲ್ಲಿ ಹೇಳಲಾಗಿದೆ.

ಖಾದ್ಯ ದರ್ಜೆಯ ಸೋಯಾಬೀನ್ ಎಣ್ಣೆ, ಖಾದ್ಯ ದರ್ಜೆಯ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಬ್ಲೀಚ್ ಡಿಯೋಡರೈಸ್ಡ್ (ಆರ್​ಬಿಡಿ) ಪಾಮ್ ಆಯಿಲ್, ಆರ್​ಬಿಡಿ ಪಾಮೋಲಿನ್, ಆರ್​ಬಿಡಿ ಪಾಮ್ ಸ್ಟೀರಿನ್ ಮತ್ತು ಕಚ್ಚಾ ತಾಳೆ ಎಣ್ಣೆಯನ್ನು ಹೊರತುಪಡಿಸಿ ಯಾವುದೇ ಪಾಮ್ ಎಣ್ಣೆಯನ್ನು ಶೇ.32.5ರಿಂದ ಶೇ.17.5ಕ್ಕೆ ಕಡಿಮೆ ಮಾಡಲಾಗಿದೆ.

ಅಕ್ಟೋಬರ್ 8ರಿಂದ ಜಾರಿಗೆ ಬರುವಂತೆ ನ್ಯಾಷನಲ್ ಕಮಾಡಿಟಿ ಮತ್ತು ಡೆರಿವೇಟಿವ್ಸ್ ಎಕ್ಸ್‌ಚೇಂಜ್ ಲಿಮಿಟೆಡ್ (NCDEX)ನಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆಬೀಜಗಳ ಮೇಲೆ ಸ್ಪೆಕ್ಯುಲೆಟಿವ್ (ಸಟ್ಟಾ) ವ್ಯಾಪಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲದ ಹೆಚ್ಚಿನ ಬೆಲೆಗಳು ದೇಶೀಯ ಬೆಲೆಯ ಮೇಲೆ ಗಣನೀಯ ಪರಿಣಾಮ ಬೀರುತ್ತವೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ತೈಲಗಳು ಮತ್ತು ಫ್ಯಾಟ್​ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ವರ್ಷದಿಂದ ವರ್ಷಕ್ಕೆ ಶೇ.34.19 ಹೆಚ್ಚಾಗಿದೆ ಎಂದು ಅಂಕಿ- ಅಂಶಗಳ ಸಚಿವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ತಿಳಿದುಬಂದಿದೆ.

Central Government Cuts Import Duty On Edible Oils

ಗ್ರಾಹಕರ ಆಹಾರ ಬೆಲೆ ಸೂಚ್ಯಂಕವನ್ನು ಆಧರಿಸಿದ ಒಟ್ಟಾರೆ ಆಹಾರ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ.0.68ರಷ್ಟಿತ್ತು. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ.10.68ರಷ್ಟಿತ್ತು.

ಆಮದು ಸುಂಕವನ್ನು ಕಡಿಮೆ ಮಾಡುವುದು ಖಾದ್ಯ ತೈಲ ಬೆಲೆಗಳನ್ನು ಇಳಿಕೆ ಮಾಡುವ ಸರ್ಕಾರದ ಪ್ರಮುಖ ಕಾರ್ಯತಂತ್ರದ ಒಂದು ಭಾಗವಾಗಿದೆ. ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರವು ಪ್ರಸ್ತುತ ರಾಷ್ಟ್ರೀಯ ಪ್ರಾಯೋಜಿತ ಯೋಜನೆ ಮಿಷನ್ ಆನ್ ಎಡಿಬಲ್ ಆಯಿಲ್ಸ್-ಆಯಿಲ್ ಪಾಮ್ (NMEO-OP) ಎಂದು ಕರೆಯುತ್ತಿದೆ. ಅಂದಹಾಗೆ ಮಲೇಷ್ಯಾ ಮತ್ತು ಇಂಡೋನೇಷ್ಯಾ ದೇಶಗಳು ಭಾರತದ ಖಾದ್ಯ ತೈಲ ಆಮದುಗಳ ಪ್ರಮುಖ ದೇಶಗಳಾಗಿವೆ.

ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ
2022ರ ಮಾರ್ಚ್ 31ರವರೆಗೆ ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ ಹೇರಿ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಪರವಾನಗಿಗಳ ಅಗತ್ಯತೆಗಳನ್ನು ತೆಗೆದು ಹಾಕುವುದು, ದಾಸ್ತಾನು ಮಿತಿ ಮತ್ತು ನಿರ್ದಿಷ್ಟ ಆಹಾರ ಉತ್ಪನ್ನಗಳ ಸಾಗಾಣೆಗೆ ನಿರ್ಬಂಧ (ತಿದ್ದುಪಡಿ) ಆದೇಶ- 2021 ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂದರೆ 2021ರ ಸೆಪ್ಟೆಂಬರ್ 8ರಿಂದ ಅನ್ವಯವಾಗುವಂತೆ ಹೊರಡಿಸಲಾಗಿದೆ. ಭವಿಷ್ಯದ ವ್ಯಾಪಾರದಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆ ಬೀಜಗಳನ್ನು ಎನ್​ಸಿಡಿಇಎಕ್ಸ್‌ನಿಂದ ಅಮಾನತು ಮಾಡಲಾಗಿದ್ದು, ಅದು 2021ರ ಅಕ್ಟೋಬರ್ 8ರಿಂದ ಜಾರಿಗೆ ಬಂದಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದೇಶೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಗಳ ಬೆಲೆ ಮತ್ತಷ್ಟು ಕುಸಿತವಾಗಲಿದ್ದು, ಆ ಮೂಲಕ ದೇಶಾದ್ಯಂತ ಗ್ರಾಹಕರಿಗೆ ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ಕೊಂಚ ನಿರಾಳತೆ ಸಿಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಗಳ ಬೆಲೆ ಏರಿಕೆಯಾಗಿರುವುದು ದೇಶೀಯವಾಗಿ ಖಾದ್ಯ ತೈಲಗಳ ಬೆಲೆ ಮೇಲೂ ಗಮನಾರ್ಹ ಪರಿಣಾಮ ಬೀರಿತ್ತು.

ಇದೀಗ ಭಾರತ ಸರ್ಕಾರ ಖಾದ್ಯ ತೈಲದಂತಹ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಲು ಬಹುಹಂತದ ಕಾರ್ಯತಂತ್ರವನ್ನು ರೂಪಿಸಿದೆ. ಆಮದು ಸುಂಕ ವ್ಯವಸ್ಥೆ ಏಕರೂಪಗೊಳಿಸುವುದು, ದಾಸ್ತಾನುಗಾರರು ತಮ್ಮ ಬಳಿ ಹೊಂದಿರುವ ದಾಸ್ತಾನುಗಳನ್ನು ಸ್ವಯಂ ಘೋಷಣೆ ಮಾಡಿಕೊಳ್ಳಲು ವೆಬ್ ಪೋರ್ಟಲ್ ಆರಂಭ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಖಾದ್ಯ ತೈಲಗಳ ಬೆಲೆಯನ್ನು ದೇಶೀಯವಾಗಿ ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿದ್ದು, ಕೇಂದ್ರ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ಎಲ್ಲ ರಾಜ್ಯಗಳೊಂದಿಗೆ ಹಂಚಿಕೊಳ್ಳಲಾಗಿದೆ. ಈ ಆದೇಶದಡಿ ಖಾದ್ಯ ತೈಲಗಳು ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿಯನ್ನು ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ಧರಿಸಲಿವೆ.

English summary
The central government on Wednesday cut the import duty on edible oils to provide relief to the country's consumers from the global price rise.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X