ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಪೆಟ್ರೋಲಿಯಂ ಷೇರು ಮಾರಲು ಮುಂದಾದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 14: ದೇಶದ ಎರಡನೆಯ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿ ಭಾರತ್ ಪೆಟ್ರೋಲಿಯಂನ (ಬಿಪಿಸಿಎಲ್‌) ಷೇರುಗಳನ್ನು ವಿದೇಶಿ ತೈಲ ಸಂಸ್ಥೆಯೊಂದಕ್ಕೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಸ್ಪರ್ಧೆಯನ್ನು ಹೆಚ್ಚಿಸಲು ಮತ್ತು ಸುದೀರ್ಘಕಾಲದಿಂದ ಸರ್ಕಾರಿ ಸ್ವಾಮ್ಯದ ಕಂಪೆನಿಗಳೇ ಪ್ರಾಬಲ್ಯ ಸಾಧಿಸಿರುವ ವಲಯದಲ್ಲಿ ಬದಲಾವಣೆ ತರಲು ಸರ್ಕಾರವು ಬಹುರಾಷ್ಟ್ರೀಯ ಕಂಪೆನಿಗಳನ್ನು ಸೆಳೆಯಲು ಮುಂದಾಗಿದೆ ಎಂದು ಸಂಸ್ಥೆಗೆ ಸಂಬಂಧಿಸಿರುವ ಕೆಲವು ವ್ಯಕ್ತಿಗಳು ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

ಮೂಲಗಳ ಪ್ರಕಾರ ಸರ್ಕಾರವು ಕಂಪೆನಿಯಲ್ಲಿ ತನ್ನ ಹಿಡಿತದಲ್ಲಿರುವ ಶೇ 53.3ರಷ್ಟು ಷೇರುಗಳನ್ನು ಮಾರಾಟ ಮಾಡಲು ಚಿಂತನೆ ನಡೆಸಿದೆ.

Central Government May Sell BPCL Stakes To Overseas Oil Firm

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳ ಮಾರಾಟದಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ 1.05 ಟ್ರಿಲಿಯನ್ ರೂಪಾಯಿಗಳನ್ನು ಎತ್ತಲು ನರೇಂದ್ರ ಮೋದಿ ಸರ್ಕಾರ ಗುರಿ ಹೊಂದಿದೆ. ಷೇರುಗಳ ಮಾರಾಟದ ವರದಿ ಬಹಿರಂಗವಾಗುತ್ತಿದ್ದಂತೆಯೇ ಭಾರತ್ ಪೆಟ್ರೋಲಿಯಂನ ಷೇರುಗಳ ಮೌಲ್ಯ ಶೇ 7ರಷ್ಟು ಹೆಚ್ಚಳಗೊಂಡಿವೆ.

English summary
Reports says the central government is planning to sell its stakes in the Bharat Petroleum Corp to a overseas oil firm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X