ಬಿಲ್ಡರ್ಸ್ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಜೊತೆ ಸಭೆ: ಎಸ್ ಆರ್ ವಿಶ್ವನಾಥ್
ಬೆಂಗಳೂರು ನವೆಂಬರ್ 15: ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್ ಗಳು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ನಗರದ ನಿರ್ಮಾಣಕ್ಕೆ ಬಹಳಷ್ಟು ಕೊಡುಗೆಯನ್ನು ನೀಡುವ ಈ ಬಿಲ್ಡರ್ ಗಳಿಗೆ ಇರುವ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಮುಖ್ಯಮಂತ್ರಿಗಳೊಂದಿಗೆ ಸದ್ಯದಲ್ಲೇ ಬಿಲ್ಡರ್ಸ್ ಅಸೋಸಿಯೇಷನ್ ಪದಾಧಿಕಾರಿಗಳ ಸಭೆಯನ್ನು ಆಯೋಜಿಸುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಭರವಸೆ ನೀಡಿದರು.
ನಗರದ ಬಿಲ್ಡರ್ಸ್ ಎನ್ ಜಿ ವಿ ಕ್ಲಬ್ ನಲ್ಲಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಕರ್ನಾಟಕ ಬೆಂಗಳೂರು ಶಾಖೆ, ಬಿಲ್ಡಿಂಗ್ ಕ್ಷೇತ್ರದ ಎಲ್ಲಾ ವಿಭಾಗದ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಆಯೋಜಿಸಿದ್ದ ಬಿಲ್ಡರ್ಸ್ ಡೇ ಕಾರ್ಯಕ್ರಮದಲ್ಲಿ ಹಿರಿಯ ಬಿಲ್ಡರ್ಸ್ ಗಳಿಗೆ ಸರ್ ಎಂ ವಿ ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡಿದರು.
ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಆಗಿರುವ ಆರ್ಥಿಕ ಬೆಳವಣಿಗೆಗಳ ಹಿನ್ನಲೆಯಲ್ಲಿ ಬಿಲ್ಡರ್ ಗಳು ತಾವು ನಿರ್ಮಿಸಿದ ಫ್ಲಾಟ್ ಗಳು ಮಾರಾಟವಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇದರಲ್ಲಿ ಹೆಚ್ಚಾಗಿ ತೊಂದರೆಗೆ ಈಡಾಗಿರುವವರು ಮಧ್ಯಮ ಗಾತ್ರದ ಬಿಲ್ಡಿಂಗ್ ಸಂಸ್ಥೆಗಳು. ಇವರಿಗೆ ಇರುವ ತೊಂದರೆಗಳು, ರಾಜ್ಯ ಸರಕಾರದಿಂದ ಆಗಬಹುದಾದ ಹಲವಾರು ಅನುಕೂಲಗಳ ಬಗ್ಗೆ ಚರ್ಚೆ ನಡೆಸಲು ಸದ್ಯದಲ್ಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಜೊತೆ ಸಭೆಯನ್ನು ಆಯೋಜಿಸಲಾಗುವುದು. ಈ ಸಭೆಯಲ್ಲಿ ಬಿಲ್ಡರ್ಸ್ ಅಸೋಷಿಯೇಷನ್ ಪದಾಧಿಕಾರಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

ನಗರದ ಮೂಲಭೂತ ಸೌಕರ್ಯಗಳ ಹೆಚ್ಚಳ
ನಗರದ ಮೂಲಭೂತ ಸೌಕರ್ಯಗಳ ಹೆಚ್ಚಳಕ್ಕೆ ಮಾನ್ಯ ಮುಖ್ಯಮಂತ್ರಿಗಳು ಬಹಳಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಹಲವಾರು ಯೋಜನೆಗಳನ್ನು ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನದ ನಂತರ ನಗರ ಮತ್ತಷ್ಟು ಸುಂದರವಾಗಲಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಬಿಲ್ಡರ್ಸ್ ಗಳ ಅಗತ್ಯತೆ ಬಹಳಷ್ಟಿದೆ. ಇದನ್ನು ಮನಗೊಂಡು ಈ ಕ್ಷೇತ್ರದಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ವಿಶ್ವನಾಥ್ ಭರವಸೆ ನೀಡಿದರು.

ಬಿಲ್ಡರ್ಸ್ ಅಸೋಷಿಯೇಷನ್ ಶಿವಪ್ರಕಾಶ್
ಬಿಲ್ಡರ್ಸ್ ಅಸೋಷಿಯೇಷನ್ ಬೆಂಗಳೂರು ಶಾಖೆ (ಕರ್ನಾಟಕ) ಯ ಅಧ್ಯಕ್ಷರಾದ ಎಸ್ ಶಿವಪ್ರಕಾಶ್ ಮಾತನಾಡಿ, ಪ್ರತಿವರ್ಷ ಹಿರಿಯ ಬಿಲ್ಡರ್‌ಗಳೀಗೆ ಸರ್ ಎಂ ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ನೀಡಿ ಗೌರವಿಸುವ ಜೊತೆಯಲ್ಲಿಯೇ, ಬಿಲ್ಡಿಂಗ್ ಕ್ಷೇತ್ರದ ಸಾಮಾನ್ಯ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದವರನ್ನೂ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ನಗರದಲ್ಲಿ ಬಿಲ್ಡರ್‌ಗಳಿಗೆ ಇರುವ ತೊಂದರೆಗಳ ಬಗ್ಗೆ ರಾಜ್ಯ ಸರಕಾರದ ಗಮನವನ್ನು ಸೆಳೆಯುವ ಕಾರ್ಯವನ್ನು ಮಾಡಲಾಗುತ್ತಿದೆ. ಅಲ್ಲದೆ, ರಾಜ್ಯ ಕಾರ್ಮಿಕ ಇಲಾಖೆಯ ಜೊತೆಗೂಡಿ ಬಿಲ್ಡಿಂಗ್ ಕ್ಷೇತ್ರದ ಕಾರ್ಮಿಕರಿಗೆ ಪ್ರಮಾಣ ಪತ್ರ ನೀಡುವ ಯೋಜನೆಯನ್ನೂ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಹಾನರಿಂಗ್ ಆಫ್ ಆರ್ಟಿಸನ್ಸ್ ಡೆ
ನವೆಂಬರ್ 13 ರಂದು ಹಾನರಿಂಗ್ ಆಫ್ ಆರ್ಟಿಸನ್ಸ್ ಡೆ ಪ್ರಯುಕ್ತ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ವಿವಿಧ ಕಂಪನಿಗಳ ಕಾರ್ಮಿಕರು ಭಾಗವಹಿಸಿದ್ದರು. ಬಿಲ್ಡಿಂಗ್ ಕ್ಷೇತ್ರದಲ್ಲಿನ ಕಾರ್ಮಿಕರು ಹಾಗೂ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಆಯುಕ್ತರಾದ ಕೆ.ಜಿ ಶಾಂತಾರಾಮ್ ಅವರು ಬಹುಮಾನ ವಿತರಿಸಿದರು.

ಹಿರಿಯ ಬಿಲ್ಡರ್ ಕೆ ಅಪ್ಪಿ ರೆಡ್ಡಿಗೆ ಪ್ರಶಸ್ತಿ
ಕಾರ್ಯಕ್ರಮದಲ್ಲಿ ಹಿರಿಯ ಬಿಲ್ಡರ್ ಕೆ ಅಪ್ಪಿ ರೆಡ್ಡಿ ಅವರಿಗೆ ಸರ್ ಎಂ ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ, ಹಿರಿಯ ಬಿಲ್ಡರ್‌ಗಳಾದ ಕೆ ಮುನಿಸ್ವಾಮಿ ರಾಜು, ಕೆ ಬಸವನ ಗೌಡ, ಎನ್ ಕುಪೇಂದ್ರ ಅವರಿಗೆ ಸನ್ಮಾನಿಸಲಾಯಿತು. ಬಿಲ್ಡರ್ಸ್ ಅಸೋಷಿಯೇಷನ್ ಕರ್ನಾಟಕ ಬೆಂಗಳೂರು ಶಾಖೆ ಉಪಾಧ್ಯಕ್ಷ ಬಿ ಎಂ ನಟರಾಜ್, ಕಾರ್ಯದರ್ಶಿ ವಿ ಎಲ್ ಮುನಿರಾಜ್, ಜಂಟಿ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಖಜಾಂಚಿ ಕೆ ಮನೋಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru Real Estate: ಬೆಂಗಳೂರು ರಿಯಲ್ ಎಸ್ಟೇಟ್ ಮೇಲೆ ಹೊಸ ಪ್ರಭಾವ: AI, ಉದ್ಯೋಗ ಅನಿಶ್ಚಿತತೆ ನಡುವೆ ಬೆಲೆ ಇಳಿಕೆ ಭೀತಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Property: ಆಸ್ತಿದಾರರಿಗೆ 2026 ವರ್ಷ ಅದೃಷ್ಟ: ರಿಯಲ್ ಎಸ್ಟೇಟ್ನಲ್ಲಿ ಹೊಸ ಸಂಚಲನ, ಮನೆ ಮಾರಾಟ ಭರ್ಜರಿ ಹೆಚ್ಚಳ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ











Click it and Unblock the Notifications