ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

9 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ಕೊಟ್ಟ ಕಾಗ್ನಿಜೆಂಟ್

|
Google Oneindia Kannada News

ಬೆಂಗಳೂರು, ಜುಲೈ 31: ಭಾರತದ ಪ್ರಮುಖ ಐಟಿ ಸಂಸ್ಥೆ, ಯುಎಸ್ ಮೂಲದ ಕಾಗ್ನಿಜೆಂಟ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಕಳೆದ ಮೂರು ತಿಂಗಳಿನಲ್ಲಿ ಸುಮಾರು 9000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿರುವುದು ಬೆಳಕಿಗೆ ಬಂದಿದೆ.

ಕೊರೊನಾ ಆರ್ಥಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಉದ್ಯೋಗ ಕಡಿತ ಮಾಡದಂತೆ ಪ್ರಧಾನಿ ಮೋದಿ ಕೂಡಾ ಐಟಿ ಸಂಸ್ಥೆಗಳಿಗೆ ಮನವಿ ಮಾಡಿದ್ದರು. ಆದರೆ ಅಮೆರಿಕ ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್‌ ತನ್ನದೇ ಕಾನೂನು ಪಾಲಿಸುವಂತಿದೆ. 18 ಸಾವಿರಕ್ಕೂ ಅಧಿಕ ಮಂದಿಗೆ ಯಾವುದೇ ಪ್ರಾಜೆಕ್ಟ್ ನೀಡದೆ ಬೆಂಚ್ ನಲ್ಲಿರಿಸಲಾಗಿತ್ತು.

18,000 ಟೆಕ್ಕಿಗಳಿಗೆ ಪಿಂಕ್ ಸ್ಲಿಪ್, ಕರ್ನಾಟಕ ಐಟಿ ಯೂನಿಯನ್ ಗರಂ18,000 ಟೆಕ್ಕಿಗಳಿಗೆ ಪಿಂಕ್ ಸ್ಲಿಪ್, ಕರ್ನಾಟಕ ಐಟಿ ಯೂನಿಯನ್ ಗರಂ

ಭಾರತದೆಲ್ಲೆಡೆ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಕಂಪನಿ ಆಡಳಿತ ಮಂಡಳಿ ಒತ್ತಡ ಹೇರಿದೆ. ಈ ಸುದ್ದಿ ಬಗ್ಗೆ ಕರ್ನಾಟಕ ರಾಜ್ಯ ಐಟಿ/ ಐಟಿಯೇತರ ಉದ್ಯೋಗಿಗಳ ಯೂನಿಯನ್(KITU) ಗರಂ ಆಗಿದ್ದು, ಕಾನೂನು ಸಮರ ಆರಂಭಿಸಿದೆ.

Cognizant may have laid off over 9000 employees globally in three months

ಕೊವಿಡ್19: ಕೆಲಸದಿಂದ ವಜಾಗೊಂಡ ಟೆಕ್ಕಿ ದೀಪಾ ಬರೆದ ಪತ್ರ ಕೊವಿಡ್19: ಕೆಲಸದಿಂದ ವಜಾಗೊಂಡ ಟೆಕ್ಕಿ ದೀಪಾ ಬರೆದ ಪತ್ರ

ಈಗ ಜಾಗತಿಕವಾಗಿ 9000 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಮಾರ್ಚ್ 31ರಂತೆ ಸಂಸ್ಥೆಯ ಉದ್ಯೋಗಿಗಳ ಸಂಖ್ಯೆ 2,91, 700 ನಷ್ಟಿತ್ತು. ಜೂನ್ 30ರ ವೇಳೆಗೆ 2,81,200 ಆಗಿದೆ. 9,400 ಮಂದಿಯನ್ನು ಕಾರ್ಯಕ್ಷಮತೆ ಆಧಾರದ ಮೇಲೆ ತೆಗೆದು ಹಾಕಲಾಗಿದೆ, 1100 ಮಂದಿ ಸ್ವಯಂ ರಾಜೀನಾಮೆ ನೀಡಿದ್ದಾರೆ ಎಂದು ಸಂಸ್ಥೆ ಸಿಇಒ ಬ್ರಿಯಾನ್ ಹಂಫ್ರೈಸ್ ಹೇಳಿದ್ದಾರೆ.

English summary
US-based IT major Cognizant announced its results for the April-June quarter, which revealed that the company’s headcount had reduced by 10,500 people in the quarter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X