ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ, ನ.2: ಪ್ರತಿ ತಿಂಗಳ ಆರಂಭದಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಅನಿಲದ ದರವನ್ನು ಆಧರಿಸಿ ತೈಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಮೊದಲ ದಿನದಂದು ದೇಶದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ನಿರ್ಧಾರ ಮಾಡುತ್ತವೆ. ಅದರಂತೆ ನವೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಗೃಹಬಳಕೆಯ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ತಗ್ಗಿಸಲಾಗಿತ್ತು. ಆದರೆ, ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಬೆಲೆ ಏರಿಕೆ ಮಾಡಲಾಗಿತ್ತು. ನಂತರ ಬಹುತೇಕ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿತ್ತು.

Commercial LPG cylinder price hiked

ಈಗ 19 ಕೆ.ಜಿಯ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಬೆಲೆ 75 ರು ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ನವೆಂಬರ್ 01ರಿಂದಲೇ ಜಾರಿಗೆ ಬಂದಿದ್ದು, ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1241.50 ರು/ಸಿಲಿಂಡರ್ ನಷ್ಟಿದೆ. ಅಕ್ಟೋಬರ್ ತಿಂಗಳಲ್ಲಿ ಈ ದರ ದೆಹಲಿಯಲ್ಲಿ1166 ರು ಪ್ರತಿ ಸಿಲಿಂಡರ್ ನಷ್ಟಿತ್ತು.

ಎಲ್ಪಿಜಿ ಬೆಲೆ: ಗೃಹ ಬಳಕೆಯ ಸಬ್ಸಿಡಿರಹಿತ 14.2 ಕೆ.ಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ594 ರು ನಷ್ಟಿದ್ದರೆ ಬೆಂಗಳೂರು 597ರು. ಮೆಟ್ರೋ ನಗರಗಳ ಪೈಕಿ ಚೆನ್ನೈನಲ್ಲಿ 19.5 ಕೆ ಜಿಸಿಲಿಂಡರ್ ಬೆಲೆ 1354ರು ಹಾಗೂ 14.2 ಕೆಜಿ ಸಿಲಿಂಡರ್ ಬೆಲೆ 610 ರು ಇದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ

ನಿಮ್ಮ ನಗರದಲ್ಲಿ ಎಲ್ಪಿಜಿ, ಪೆಟ್ರೋಲ್, ಡೀಸೆಲ್ ದರವನ್ನು ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+