ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ
ನವದೆಹಲಿ, ಜೂ 1: ಜೂನ್ ತಿಂಗಳ ಆರಂಭದ ದಿನದಂದು ಗ್ರಾಹಕರಿಗೆ ಶುಭ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ. ಆದರೆ, ಗೃಹ ಬಳಕೆ ಅಡುಗೆ ಅನಿಲ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಕಳೆದ ತಿಂಗಳು 14.2 ಕೆಜಿ ಸಿಲಿಂಡರ್ ಬೆಲೆ ಸರಾಸರಿ 45 ರು ತಗ್ಗಿಸಲಾಗಿತ್ತು.
19 ಕೆ.ಜಿ ತೂಗುವ ಸಿಲಿಂಡರ್ ಬೆಲೆ 100 ತಗ್ಗಿಸಲಾಗಿದೆ. ಇಂಡಿಯನ್ ಆಯಿಲ್ ವರದಿ ಪ್ರಕಾರ 122 ರು ಪ್ರತಿ ಸಿಲಿಂಡರ್ ತನಕ ಬೆಲೆ ತಗ್ಗಿದೆ. ಪರಿಷ್ಕೃತ ದರ ಜಾರಿಗೆ ಬಂದ ಬಳಿಕ ಸಿಲಿಂದರ್ ಬೆಲೆ 1595.50 ರು ನಿಂದ 1473.50 ರು ಗೆ ತಗ್ಗಿದೆ.
ಕಳೆದ ನವೆಂಬರ್ ತಿಂಗಳಿನಿಂದಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ಮೂರನೇ ಬಾರಿಗೆ ಅಡುಗೆ ಅನಿಲ ದರ ಏರಿಕೆ ಮಾಡಿದ್ದ ತೈಲ ಮಾರುಕಟ್ಟೆ ಕಂಪನಿಗಳು, ಮಾರ್ಚ್ ತಿಂಗಳಲ್ಲಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿತ್ತು. ಒಟ್ಟಾರೆ ಕಳೆದ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಾಣಲಾಗಿದೆ.
ಜೂನ್ 1ರಂದು ಗೃಹ ಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ :
ದೆಹಲಿ: 809 ರು
ಬೆಂಗಳೂರು: 812 ರು
ಮುಂಬೈ: 809 ರು
ಕೋಲ್ಕತಾ: 835ರು
ಚೆನ್ನೈ: 825ರು
19 ಕೆ.ಜಿ ಸಿಲಿಂಡರ್ ದರ
ದೆಹಲಿ: 1473.50 ರು (ಮೇ ದರ: 1595.50)
ಮುಂಬೈ: 1422.50 ರು (1545)
ಕೋಲ್ಕತಾ: 1544.50ರು (1667.50)
ಚೆನ್ನೈ: 1603ರು (1725.50)
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ