LPG Cylider Price: ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆ: ಸಂಪೂರ್ಣ ಮಾಹಿತಿ ಇಲ್ಲಿದೆ
ನವದೆಹಲಿ, ಏಪ್ರಿಲ್ 01: ದೇಶದ ಜನತೆಗೆ ಏಪ್ರಿಲ್ ತಿಂಗಳ ಮೊದಲ ದಿನವೇ ಗುಡ್‌ನ್ಯೂಸ್ ಸಿಕ್ಕಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ಭರ್ಜರಿ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಸಿಲಿಂಡರ್ ದರ ಇಳಿಕೆ ಮಾಡುವ ಮೂಲಕ ಗ್ರಾಹಕರ ಸಿಹಿ ಸುದ್ದಿಯನ್ನನೀಡಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 41 ಇಳಿಕೆಯಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿವೆ.
ವಾಣಿಜ್ಯ ಸಿಲಿಂಡರ್ ಸಿಲಿಂಡರ್ ದರ ಇಳಿಕೆ ಮಾಡಿದ್ದು, ಇದು ಬೃಹತ್ ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 41 ಇಳಿಕೆಯಾಗಿದೆ ಮಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಇದು ಹೋಟೆಲ್ ಸೇರಿದಂತೆ ಸಿಲಿಂಡರ್ ನಂಬಿಕೊಂಡಿರುವ ಇನ್ನಿತರೆ ಉದ್ಯಮದಲ್ಲಿರುವವರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಅಲ್ಲದೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ 1,762 ರೂ.ಗಳಷ್ಟಿದೆ. ಈ ಕಡಿತದ ಮೊದಲು, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 1803 ರೂ.ಗಳಷ್ಟಿತ್ತು. ಮುಂಬೈ ನಲ್ಲಿ 1,714.50 ರೂ. ( 1,755.50 ರೂ. ರಿಂದ ಇಳಿಕೆ) ಕೋಲ್ಕತ್ತಾದಲ್ಲಿ 1,872 ರೂ. (1,913 ರೂ.ಗಳಿಂದ ಇಳಿಕೆ) ಚೆನ್ನೈನಲ್ಲಿ 1,924.50 ರೂ. ( 1,965.50 ರೂ. ರಿಂದ ಇಳಿಕೆ)ಯಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ 1 ನೇ ತಾರೀಖಿನಂದು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಅಗತ್ಯಕ್ಕೆ ಅನುಗುಣವಾಗಿ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸುತ್ತವೆ ಅಥವಾ ಕಡಿಮೆ ಮಾಡುತ್ತವೆ. ಕಂಪನಿಗಳು ಮಾರ್ಚ್ 1 ರಿಂದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 6 ರೂ. ಹೆಚ್ಚಿಸಿದ್ದವು. ಮನೆಗಳಲ್ಲಿ ಬಳಸುವ 14.2 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 14.2 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ. ಮತ್ತು ಚೆನ್ನೈನಲ್ಲಿ 818.50 ರೂ. ಇದೆ.












Click it and Unblock the Notifications