• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

''ಪೆಟ್ರೋಲ್ ಬಂಕ್‌ಗೆ ನರೇಂದ್ರ ಮೋದಿ ವಸೂಲಿ ಕೇಂದ್ರ ಎಂದು ಹೆಸರಿಡಿ''

|

ನವದೆಹಲಿ, ಡಿ. 9: ದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ತುಂಬಾ ಹೆಚ್ಚಾಗಿದೆ. 2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಈ ದಾಖಲೆ ಈ ಬಾರಿ ಧೂಳಿಪಟವಾಗಿದೆ. ಪೆಟ್ರೋಲ್ ಬಂಕ್ ಗಳು ವಸೂಲಿ ಕೇಂದ್ರವಾಗಿಬಿಟ್ಟಿವೆ. ಹೀಗಾಗಿ ದೇಶದ ಎಲ್ಲಾ ಪೆಟ್ರೋಲ್ ಬಂಕ್ ಗಳನ್ನು ನರೇಂದ್ರ ಮೋದಿ ವಸೂಲಿ ಕೇಂದ್ರಗಳಿಗೆ ಎಂದು ಹೆಸರಿಡಿ ಎಂದು ಕಾಂಗ್ರೆಸ್ ಟೀಕಿಸಿದೆ.

ಅಂತಾರಾಷ್ಟ್ರೀಯ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಸತತ 6ದಿನಗಳಿಂದ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗಿತ್ತು. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 83.71 ರೂ, ಮುಂಬೈಯಲ್ಲಿ ಪೆಟ್ರೋಲ್ ಲೀಟರ್‌ಗೆ 90.34 ರೂ, ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 86.58 ರೂಪಾಯಿಗೆ ಮುಟ್ಟಿದೆ. ಇನ್ನು ಡೀಸೆಲ್ ದರ ಲೀಟರ್‌ಗೆ ದೆಹಲಿಯಲ್ಲಿ 73.87 ರೂ.ನಷ್ಟಿದ್ದು, ಮುಂಬೈನಲ್ಲಿ 80.51 ರೂಗಳಷ್ಟಿದೆ. ಬೆಂಗಳೂರಿನಲ್ಲಿ ಡೀಸೆಲ್ ಲೀಟರ್‌ಗೆ 78.37 ರೂಪಾಯಿನಷ್ಟಿದೆ.

ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಎರಡು ದಿನಗಳ ಹಿಂದೆ ಬಿಜೆಪಿ ರಾಜ್ಯಸಭಾ ಸದಸ್ಯ, ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿ ಇಂಧನ ಬೆಲೆ ಏರಿಕೆ ತಗ್ಗಿಸಬೇಕು, 40 ಪ್ರತಿ ಲೀಟರ್ ನಂತೆ ಮಾರಬೇಕು ಎಂದು ಸೂಚಿಸಿದ್ದರು. ಬುಧವಾರದಂದು ಕಾಂಗ್ರೆಸ್ ಮುಖಂದ ಶ್ರೀವತ್ಸಾ ಅವರು ಟ್ವೀಟ್ ಮಾಡಿ ಪೆಟ್ರೋಲ್ ದರ 90ರು, ಅಸಲಿ ದರ 30 ರು, ಮೋದಿ ತೆರಿಗೆ: 60 ರು ಹೀಗಾಗಿ ಎಲ್ಲಾ ಪೆಟ್ರೋಲ್ ಬಂಕ್ ಗಳನ್ನು, ''ನರೇಂದ್ರ ಮೋದಿ ವಸೂಲಿ ಕೇಂದ್ರ'' ಎಂದು ಬದಲಾಯಿಸಿ ಎಂದು ಆಗ್ರಹಿಸಿದ್ದಾರೆ.

ಕಳೆದ 18 ದಿನಗಳಲ್ಲಿ ಒಂದೆರಡು ದಿನಗಳು ಹೊರತುಪಡಿಸಿದರೆ ಮಿಕ್ಕೆಲ್ಲ ದಿನಗಳು ತೈಲ ದರ ಏರಿಕೆ ಕಂಡಿವೆ. ಪೆಟ್ರೋಲ್ 2.65 ಪ್ರತಿ ಲೀಟರ್ ಹಾಗೂ ಡೀಸೆಲ್ 3.40 ಲೀಟರ್ ಏರಿಕೆಯಾಗಿದೆ. ಮೆಟ್ರೋಪಾಲಿಟನ್ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಬೆಲೆಯನ್ನು ಗ್ರಾಹಕರು ನೀಡುತ್ತಿದ್ದಾರೆ.

ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary
Congress slams BJP govt and said The cost of petrol and diesel have once again skyrocketed in all major cities across the country and ‘All petrol bunks should be renamed Narendra Modi Vasooli Kendra’.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X