ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾ ಸಾವಿನ ಪ್ರಮಾಣ ನಿರಂತರವಾಗಿ ಕಡಿಮೆಯಾಗುತ್ತಿದೆ..!

|
Google Oneindia Kannada News

ನವದೆಹಲಿ, ಆಗಸ್ಟ್‌ 01:ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡಿರುವ ಕೊರೊನಾವೈರಸ್‌ನಿಂದಾಗುವ ಸಾವಿನ ಪ್ರಮಾಣವು ಭಾರತದಲ್ಲಿ ನಿರಂತರವಾಗಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಕೋವಿಡ್-19 ಪ್ರಕರಣದ ಸಾವಿನ ಪ್ರಮಾಣ ಇಂದು ಶೇಕಡಾ 2.15 ರಷ್ಟಿದ್ದು, ಮೊದಲ ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ. ಇದು ಜೂನ್ ಮಧ್ಯಭಾಗದಲ್ಲಿ ಸುಮಾರು ಶೇಕಡಾ 3.33 ರಿಂದ ನಿರಂತರವಾಗಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 57 ಸಾವಿರ ಕೊರೊನಾ ಸೋಂಕಿತರು ಪತ್ತೆಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 57 ಸಾವಿರ ಕೊರೊನಾ ಸೋಂಕಿತರು ಪತ್ತೆ

ಭಾರತದಲ್ಲಿ ಇದುವರೆಗೂ 16,95,988 ಪ್ರಕರಣಗಳು ದಾಖಲಾಗಿದ್ದು, 36,511 ಮಂದಿ ಕೊರೊನಾ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 10,94,374 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

Coronavirus: Indias Fatality Rate Continuously Reducing From Around 3.33% In Mid-June

ಆಗಸ್ಟ್‌ 01ರಂದು 57,118 ಹೊಸ ಪ್ರಕರಣಗಳು ದಾಖಲಾಗಿದ್ದು, 36,569 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಇಂದು 764 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

English summary
Case Fatality Rate stands at 2.15% today and it is lowest since the 1st lockdown started. It has been continuously reducing from around 3.33% in mid-June says Ministry of Health and Family Welfare
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X