ಹೊಂದಾಣಿಕೆ ಕೊರತೆ: ಆರ್ ಬಿಐಗೂ ಮೋದಿ ಸರ್ಕಾರಕ್ಕೂ ಶುರುವಾಗಿದೆಯೇ ತಿಕ್ಕಾಟ?
ನವದೆಹಲಿ, ಅಕ್ಟೋಬರ್ 29: ಅತ್ತ ರೂಪಾಯಿ-ಡಾಲರ್ ಮೌಲ್ಯದ ನಡುವಿನ ಅಂತರ ಜನರಲ್ಲಿ ಕಳವಳ ಮೂಡಿಸುತ್ತಿದ್ದರೆ, ಇತ್ತ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಡುವೆ ಸಂಬಂಧ ಹಳಸಿದೆ ಎನ್ನಲಾಗಿದೆ.
ಅದರಲ್ಲಿಯೂ ಮುಖ್ಯವಾಗಿ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಮತ್ತು ಸರ್ಕಾರದ ನಡುವೆ ಒಡಕು ಮೂಡಿದೆ ಎಂಬ ಮಾತುಗಳು ಕೇಳಿಬಂದಿವೆ.
ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಚರ್ಚಿಸಲು ಇಬ್ಬರೂ ಮುಖಾಮುಖಿಯಾಗುತ್ತಿಲ್ಲ. ಮಾತ್ರವಲ್ಲ, ಸರ್ಕಾರ ಮತ್ತು ಆರ್ ಬಿಐ ನಡುವೆ ಹೆಚ್ಚೂ ಕಡಿಮೆ ಸಂಹವನವೇ ಸಂಪೂರ್ಣ ಸ್ಥಗಿತಗೊಂಡಿದೆ ಎಂದು 'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ.

ಸರ್ಕಾರ-ಆರ್ ಬಿಐ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಊರ್ಜಿತ್ ಪಟೇಲ್ ಅವರ ಹಣೆಬರಹವನ್ನು ಬದಲಿಸುವ ಸಾಧ್ಯತೆ ಬಗ್ಗೆ ಅನುಮಾನ ಮೂಡಿಸಿದೆ. ಅವರ ಮೂರು ವರ್ಷದ ಅವಧಿ ಮುಂದಿನ ಸೆಪ್ಟೆಂಬರ್‌ನಲ್ಲಿ ಮುಗಿಯಲಿದ್ದು, ಮತ್ತೆ ಅವರನ್ನು ಮುಂದುವರಿಸುವ ಸಾಧ್ಯತೆ ತೀರಾ ಕಡಿಮೆ.
ಎನ್‌ಡಿಎ ಸರ್ಕಾರದ ಅನೇಕರು ಪಟೇಲ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 'ಹಿಂದಿನ ಗವರ್ನರ್ ರಘುರಾಂ ರಾಜನ್ ಅವರೇ ಇದಕ್ಕಿಂತ ವಾಸಿ' ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
2018ರಲ್ಲಿಯೇ ಅರ್ಧಕ್ಕಿಂತಲೂ ಹೆಚ್ಚು ಆರ್ಥಿಕ ನೀತಿ ನಿರ್ಧಾರಗಳನ್ನು ಎರಡೂ ಕಡೆ ಪರಸ್ಪರ ವಿರುದ್ಧವಾಗಿ ತೆಗೆದುಕೊಳ್ಳಲಾಗಿದೆ. ಹಣದುಬ್ಬರದ ಸಂದರ್ಭದಲ್ಲಿ ಬಡ್ಡಿದರವನ್ನು ಕಡಿಮೆ ಮಾಡದ ಆರ್ ಬಿಐ ವಿರುದ್ಧ ಸರ್ಕಾರ ಅಸಮಾಧಾನಗೊಂಡಿತ್ತು. ಅದನ್ನು ಹೆಚ್ಚಿಸುವ ವಿಚಾರದಲ್ಲಿಯೂ ಸರ್ಕಾರಕ್ಕೆ ಆರ್ ಬಿಐ ನಡೆ ಕೋಪ ತರಿಸಿದೆ.
ನೀರವ್ ಮೋದಿ ಅವರ ವಂಚನೆ ಪ್ರಕರಣ ಬಯಲಿಗೆ ಬಂದಾಗ ಆರ್ ಬಿಐ ತೆಗೆದುಕೊಂಡ ನಿರ್ಧಾರದ ಬಗ್ಗೆ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ, ಸಾರ್ವಜನಿಕ ವಲಯದ ಬ್ಯಾಂಕುಗಳ ಮೇಲೆ ನಿಯಂತ್ರಣ ಸಾಧಿಸಲು ಇನ್ನೂ ಹೆಚ್ಚಿನ ಅಧಿಕಾರ ನೀಡುವಂತೆ ಪಟೇಲ್ ಕೇಳಿದ್ದರು.
ಐಎಲ್ & ಎಫ್ಎಸ್ ಸಾಲ ಮರುಪಾವತಿಸಲಾಗದೆ ಬಿಕ್ಕಟ್ಟಿನಲ್ಲಿ ಸಿಲುಕಿದಾಗ ಬ್ಯಾಂಕೇತರ ಹಣಕಾಸು ಕಂಪೆನಿಗಳಿಗೆ ಕೆಲ ನಿರ್ಬಂಧಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರ ಆರ್ ಬಿಐ ಗೆ ಸೂಚಿಸಿತ್ತು. ಆದರೆ, ಅದಕ್ಕೆ ಆರ್ ಬಿಐ ಒಪ್ಪಿರಲಿಲ್ಲ.
ಇದೇ ಕಾರಣದಿಂದ ಆರ್ ಬಿಐ ಮಂಡಳಿಯಲ್ಲಿ ಬದಲಾವಣೆ ತರಲಾಗಿತ್ತು. ಅವಧಿ ಮುಗಿಯುವ ಎರಡು ವರ್ಷ ಮೊದಲೇ ನಚಿಕೇತ್ ಮೋರ್ ಅವರನ್ನು ಸಾಂಪ್ರದಾಯಿಕ ಮಾಹಿತಿಯನ್ನೂ ನೀಡದೆ ತೆಗೆದು ಹಾಕಲಾಗಿತ್ತು.
ಕೇಂದ್ರ ಬ್ಯಾಂಕಿನ ಸ್ವಾತಂತ್ರ್ಯವನ್ನು ಸರ್ಕಾರ ಗೌರವಿಸುತ್ತಿಲ್ಲ. ಇದರಿಂದ ಹಣಕಾಸು ಮಾರುಕಟ್ಟೆ, ಆರ್ಥಿಕ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಲಿದ್ದು, ಈ ನಿಯಂತ್ರಕ ಸಂಸ್ಥೆಯ ಮಹತ್ವಕ್ಕೆ ಧಕ್ಕೆ ತರಲಿದೆ ಎಂದು ಆರ್ ಬಿಐ ಡೆಪ್ಯುಟಿ ಗವರ್ನರ್ ವಿರಾಲ್ ಆಚಾರ್ಯ ಹೇಳಿದ್ದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications