Breaking: ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು
ನವದೆಹಲಿ, ಸೆಪ್ಟೆಂಬರ್ 28: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಆಪರೇಟಿಂಗ್ ಅಧಿಕಾರಿ ಆನಂದ್ ಸುಬ್ರಮಣಿಯನ್ ಮತ್ತು ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣನ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಶಾಸನಬದ್ಧ ಜಾಮೀನು ಮಂಜೂರು ಮಾಡಿದೆ.
ಇದಕ್ಕೂ ಮುನ್ನ ನ್ಯಾಯಾಲಯವು ಚೈತ್ರಾ ರಾಮಕೃಷ್ಣ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅವರಿಗೆ ಜಾಮೀನು ನೀಡುವುದಕ್ಕೆ ಇನ್ನೂ ಸಮಯ ಬಂದಿಲ್ಲ ಎಂದು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಹೇಳಿದ್ದರು.
ಇನ್ನು ವಿಚಾರಣೆ ಸಂದರ್ಭದಲ್ಲಿ ಚೈತ್ರಾ ರಾಮಕೃಷ್ಣರಿಗೆ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ವಿಚಾರಣೆ ಮುಂದುವರಿದಿದ್ದು, ಅಪರಾಧದಲ್ಲಿ ಅವರು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಹೇಗೆ ಭಾಗಿಯಾಗಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕಿದೆ ಎಂದು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸೈಬರ್ ದೌರ್ಬಲ್ಯದ ಹೆಸರಿನಲ್ಲಿ ಫೋನ್ ಕದ್ದಾಲಿಕೆ:
2009 ರಿಂದ 2017 ರವರೆಗೆ ಮಾಜಿ ಎನ್‌ಎಸ್‌ಇ ಸಿಇಒ ರವಿ ನಾರಾಯಣ್, ಚೈತ್ರಾ ರಾಮಕೃಷ್ಣ, ಕಾರ್ಯನಿರ್ವಾಹಕ ಉಪಾಧ್ಯಕ್ಷ ರವಿ ವಾರಣಾಸಿ ಮತ್ತು ಮುಖ್ಯಸ್ಥ ಮಹೇಶ್ ಹಳದೀಪುರ್ ಮತ್ತು ಇತರರು ಎನ್‌ಎಸ್‌ಇ ಮತ್ತು ಅದರ ಉದ್ಯೋಗಿಗಳನ್ನು ವಂಚಿಸಲು ಸಂಚು ರೂಪಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್‌ಕೆ ಮಟ್ಟಾ ನ್ಯಾಯಾಲಯಕ್ಕೆ ತಿಳಿಸಿದರು. ಎನ್ಎಸ್ಇಯ ಸೈಬರ್ ದೌರ್ಬಲ್ಯಗಳ ಅಧ್ಯಯನದ ನೆಪದಲ್ಲಿ ಉದ್ಯೋಗಿಗಳ ಫೋನ್ ಕರೆಗಳನ್ನು ಕಾನೂನುಬಾಹಿರವಾಗಿ ಕದ್ದಾಲಿಕೆ ಮಾಡಲು iSEC ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಅನ್ನು ಬಳಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಉಲ್ಲೇಖಿಸಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣಗ ಹಿನ್ನೆಲೆ?:
ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್ ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರು ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತಿಳಿಸಿದೆ ಎಂದು ವರದಿಯಾಗಿದೆ.
4 ಲಕ್ಷ ಕೋಟಿ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯದ ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್ಎಸ್ಇ (NSE)ಗೆ ಮಾಜಿ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಚಿತ್ರಾ ರಾಮಕೃಷ್ಣ ತಾನು ನೋಡದ, ತಮಗೆ ಪರಿಚಯವೇ ಇಲ್ಲದ ಹಿಮಾಲಯದ ಯೋಗಿಯೋರ್ವರ ಸಲಹೆಯನ್ನು ಪಡೆದುಕೊಂಡೇ ನಿರ್ಧಾರವನ್ನು ಕೈಗೊಳ್ಳುತ್ತಿದ್ದರು. NSEಯ ಪ್ರಮುಖ ವ್ಯವಹಾರ ಯೋಜನೆಗಳು ಮತ್ತು ಅಜೆಂಡಾ ಸೇರಿದಂತೆ ಹಲವಾರು ವಿಚಾರಗಳನ್ನು ಆ ಅಪರಿಚಿತ ಯೋಗಿಯೊಂದಿಗೆ ಹಂಚಿಕೊಂಡಿದ್ದಾರೆ ಎಂಬ ವಿಚಾರವನ್ನು ಸೆಬಿ ಬಹಿರಂಗಪಡಿಸಿದೆ.












Click it and Unblock the Notifications