ಎಲೆಕ್ಟ್ರಿಕ್‌ ವಾಹನಗಳಿಗೆ ಕಡ್ಡಾಯ ವಿಮೆ: ಸರ್ಕಾರಗಳಿಗೆ ನೋಟಿಸ್‌ ಜಾರಿ

ನವದೆಹಲಿ, ಮೇ 5: ಎಲೆಕ್ಟ್ರಿಕ್‌ ವಾಹನಗಳಿಗೆ ವಿಮೆಯನ್ನು ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಿದೆ

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್‌ ಸಾಂಘಿ ಮತ್ತು ನ್ಯಾಯಮೂರ್ತಿ ನವೀನ್‌ ಚಾವ್ಲಾ ಅವರ ನೇತೃತ್ವದ ವಿಭಾಗೀಯ ಪೀಠವುವಕೀಲ ರಜತ್‌ ಕಪೂರ್‌ ಸಲ್ಲಿಸಿದ್ದ ಮನವಿ ವಿಚಾರಣೆಯನ್ನು ನಡೆಸಿ, ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ಎಲೆಕ್ಟ್ರಿಕ್‌ ವಾಹನಗಳಿಗೆ ವ್ಯಾಪಕ ಬೇಡಿಕೆ ಉಂಟು ಮಾಡಿದೆ. ದ್ವಿಚಕ್ರ ಎಲೆಕ್ಟ್ರಿಕ್‌ ವಾಹನಗಳಿಗೆ ವಿಮೆ ಇಲ್ಲ ಎಂಬ ಮಹತ್ವದ ಪ್ರಶ್ನೆಯನ್ನು ಈ ವೇಳೆ ಎತ್ತಬೇಕಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

Delhi HC notice on plea for mandatory insurance for electric two-wheelers

ಪ್ರತಿ ಗಂಟೆಗೆ ಗರಿಷ್ಠ 25 ಕಿ ಮೀ ವೇಗ ಮೀರದ, 250 ವ್ಯಾಟ್‌ ಶಕ್ತಿಯ ಎಲೆಕ್ಟ್ರಿಕಲ್‌ ವೆಹಿಕಲ್‌ಗಳಿಗೆ ಚಾಲನಾ ಪರವಾನಗಿಯೂ ಬೇಕಿಲ್ಲ. ಇವುಗಳ ನೋಂದಣಿಯೂ ಅಗತ್ಯವಿಲ್ಲದಿರುವುದರಿಂದ ವಿದ್ಯಾರ್ಥಿಗಳು, ಯುವಕರು ಮತ್ತು ನಿವೃತ್ತರು ಎಲೆಕ್ಟ್ರಿಕ್‌ ವಾಹನಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

"ವಿಮೆಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳು ಇಲ್ಲದಿರುವುದರಿಂದ ಹಲವು ಬಗೆಯ ವಾಹನಗಳು ರಸ್ತೆಗಿಳಿಯಲಿದ್ದು, ಇದು ಮುಂದಿನ ದಿನಗಳಲ್ಲಿ ಹಲವು ಸಮಸ್ಯೆಗಳನ್ನು ಸೃಷ್ಟಿಸಬಹುದು. ಮೂರನೇ ವ್ಯಕ್ತಿ ವಿಮೆ (ಥರ್ಡ್‌ ಪಾರ್ಟಿ ಇನ್ಯೂರೆನ್ಸ್) ಅತ್ಯಗತ್ಯವಾಗಿದ್ದು, ವಿಮೆ ಔಪಚಾರಿಕತೆ ಮುಗಿಯುವವರೆಗೆ ಶೋರೂಮ್‌ನಿಂದ ವಾಹನ ತೆಗೆದುಕೊಂಡು ಹೋಗಲು ಅನುಮತಿಸಬಾರದು" ಎಂದು ಮನವಿಯಲ್ಲಿ ವಿವರಿಸಲಾಗಿದೆ.

Delhi HC notice on plea for mandatory insurance for electric two-wheelers

ಉಕ್ರೇನ್-ರಷ್ಯಾ ಯುದ್ಧದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದರಿಂದ ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ, ಎಲೆಕ್ಟ್ರಿಕ್‌ ವಾಹನಗಳಿಗೆ ಸಂಬಂಧಿಸಿದಂತೆ ತಕ್ಷಣ ಕಾನೂನು ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+