ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

DHFL ಹಗರಣ: ಹೈಕೋರ್ಟಿಗೆ ಜಾಮೀನು ಅರ್ಜಿ ಹಾಕಿದ ರಾಣಾ ಪತ್ನಿ ಬಿಂದು

|
Google Oneindia Kannada News

ಮುಂಬೈ, ಸೆಪ್ಟೆಂಬರ್ 20: ದಿವಾನ್ ಹೌಸಿಂಗ್ ಫೈನಾನ್ಶಿಯಲ್ ಲಿಮಿಟೆಡ್ (DHFL) ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ ಪತ್ನಿ ಬಿಂದು ಕಪೂರ್ ಮತ್ತು ಪುತ್ರಿಯರಾದ ರಾಧಾ ಕಪೂರ್ ಮತ್ತು ರೋಶಿನಿ ಕಪೂರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಇದರ ಬೆನ್ನಲ್ಲೇ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿರುವ ಬಿಂದು, ಪುತ್ರಿಯರಾದ ರಾಧಾ, ರೋಶಿನಿ ಅವರು ಜಾಮೀನು ಕೋರಿ ಅರ್ಜಿ ಹಾಕಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡಗಳಾದ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಿವೆ. ಸಿಬಿಐ ಇತ್ತೀಚೆಗೆ ಪೂರಕ ಆರೋಪಪಟ್ಟಿ ಸಲ್ಲಿಸಿದ್ದು, ಬಿಂದು ಮತ್ತು ರಾಧಾ ಕಪೂರ್ ಅವರನ್ನು ಆರೋಪಿಗಳೆಂದು ಹೆಸರಿಸಿತ್ತು. ಆದರೆ, ಈ ಇಬ್ಬರನ್ನು ಇನ್ನೂ ಬಂಧಿಸಿಲ್ಲ.

ಯೆಸ್‌ ಬ್ಯಾಂಕ್ ಹಣಕಾಸು ಅವ್ಯವಹಾರ ಪ್ರಕರಣ: ಮೊದಲ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐಯೆಸ್‌ ಬ್ಯಾಂಕ್ ಹಣಕಾಸು ಅವ್ಯವಹಾರ ಪ್ರಕರಣ: ಮೊದಲ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ಸಮನ್ಸ್‌ಗೆ ಸಂಬಂಧಿಸಿದಂತೆ, ಸೆ. 4ರಂದು ಹಾಜರಾಗಿದ್ದ ಇಬ್ಬರು ಅರ್ಜಿದಾರರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಮೊದಲ ಆರೋಪಪಟ್ಟಿಯಲ್ಲಿ ಕಪೂರ್ ಜೊತೆಗೆ ರೋಶಿನಿ ಅವರನ್ನು ಆರೋಪಿಯೆಂದು ಹೆಸರಿಸಲಾಗಿತ್ತು. ಇತರ ಆರೋಪಿಗಳೊಂದಿಗೆ ಶಾಮೀಲಾಗಿರುವುದನ್ನು ಈ ಮಹಿಳೆಯರ ವಿರುದ್ಧದ ಆರೋಪಗಳು ಸಾಬೀತುಪಡಿಸಿರುವ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಸ್‌ ಯು ವಡಗಾಂವ್ಕರ್ ಅವರು ಸೆಪ್ಟೆಂಬರ್ 18 ರಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರು.

DHFL case: Denied bail, Yes Bank founder Rana Kapoor’s wife, daughters move HC

"ಅಪರಾಧದ ಗಹನತೆ ಮತ್ತು ಸ್ವರೂಪ ಪರಿಗಣಿಸಿ ಮತ್ತು ಸಮಾಜದ ದೊಡ್ಡ ಹಿತಾಸಕ್ತಿಯನ್ನು ಪರಿಗಣಿಸಿ, ಆರೋಪಿಗಳು/ ಅರ್ಜಿದಾರರು ರೂ 4000 ಕೋಟಿಗಳಷ್ಟು ದೊಡ್ಡ ಮೊತ್ತದ ಸಾರ್ವಜನಿಕ ಹಣ ನಷ್ಟ ಉಂಟಾಗಿರುವ ಪ್ರಕರಣದಲ್ಲಿ ಪಾಲುಗೊಂಡಿರುವುದರಿಂದ ಅರ್ಜಿಗಳು ತಿರಸ್ಕರಿಸಲು ಅರ್ಹವಾಗಿವೆ" ಎಂದು ವಿಶೇಷ ನ್ಯಾಯಾಲಯ ಹೇಳಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಅರ್ಜಿದಾರರು ಮಹಿಳೆಯರು ಹಾಗೂ ಅವರಲ್ಲಿ ಒಬ್ಬರು ಚಿಕ್ಕ ಮಕ್ಕಳ ತಾಯಿ ಎಂಬ ವಾದವನ್ನು ನ್ಯಾಯಾಲಯ ಜಾಮೀನು ನೀಡುವ ವೇಳೆ ಒಪ್ಪಲಿಲ್ಲ. ಬದಲಿಗೆ ಸೆಪ್ಟೆಂಬರ್ 23ರವರೆಗೆ ಮಹಿಳೆಯರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಯೆಸ್ ಬ್ಯಾಂಕ್ ಮತ್ತು ಡಿಎಚ್‌ಎಫ್‌ಎಲ್‌ಗೆ ಮೋಸ ಮತ್ತು ವಂಚನೆ ಮಾಡುವ ಸಾಮಾನ್ಯ ಉದ್ದೇಶದೊಂದಿಗೆ 14 ಆರೋಪಿಗಳು ಕ್ರಿಮಿನಲ್ ಪಿತೂರಿ ನಡೆಸಿದ್ದರು ಎಂಬುದು ಸಿಬಿಐ ವಾದಿಸಿದೆ.

ಯೆಸ್ ಬ್ಯಾಂಕ್ ಸ್ಥಗಿತ, 3 ಲಕ್ಷ ಕೋಟಿ ನಷ್ಟ, ಡಿಜಿಟಲ್ ಪೇಮೆಂಟ್ ಡೌನ್ಯೆಸ್ ಬ್ಯಾಂಕ್ ಸ್ಥಗಿತ, 3 ಲಕ್ಷ ಕೋಟಿ ನಷ್ಟ, ಡಿಜಿಟಲ್ ಪೇಮೆಂಟ್ ಡೌನ್

ಹಗರಣ ಪೀಡಿತ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ಗೆ ಸಂಬಂಧಿಸಿರುವ ಒಂದು ಸಂಸ್ಥೆಯಿಂದ ಕಪೂರ್, ಅವರ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳಿಂದ 600 ಕೋಟಿ ರುಪಾಯಿ ಪಡೆದಿದ್ದರು. ಕಪೂರ್, ಅವರ ಕುಟುಂಬ ಸದಸ್ಯರು ಮತ್ತು ಇತರರು ಬೃಹತ್ ಸಾಲಗಳನ್ನು ಮಂಜೂರು ಮಾಡಲು ಕಿಕ್‌ಬ್ಯಾಕ್ ಆಗಿ ನಿಯಂತ್ರಿಸುತ್ತಿರುವ ಕಂಪನಿಗಳ ಮೂಲಕ 4,300 ಕೋಟಿ ರುಪಾಯಿ ಪಡೆದಿದ್ದರು.

ನ್ಯೂಯಾರ್ಕ್, ಲಂಡನ್ ಹಾಗೂ ಮುಂಬೈನಲ್ಲಿರುವ ರಾಣಾ ಕಪೂರ್ ಹಾಗೂ ಕುಟುಂಬಸ್ಥರಿಗೆ ಸೇರಿದ ಸರಿ ಸುಮಾರು 2,200 ಕೋಟಿ ರು ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳಿಂದ ತಿಳಿದು ಬಂದಿದೆ.

ಇನ್ನೊಂದೆಡೆ, ಯೆಸ್ ಬ್ಯಾಂಕ್ ರಾಣಾ ಕಪೂರ್, ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮತ್ತು ಪ್ರವರ್ತಕರಾದ ಕಪಿಲ್ ವಾಧವನ್ ಮತ್ತು ಧೀರಜ್ ವಾಧವನ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್ ದಾಖಲಿಸಿ, ತನಿಖೆ ಮುಂದುವರೆಸಿದೆ.

ವೈಯಕ್ತಿಕ ಸಂತೃಪ್ತಿಯ ಬದಲಾಗಿ ಸಾಲಗಾರರನ್ನು ಆಯ್ಕೆ ಮಾಡಲು ಬ್ಯಾಂಕ್ ಹೆಚ್ಚಿನ ಮೌಲ್ಯದ ಸಾಲಗಳನ್ನು ವಿಸ್ತರಿಸಿದೆ ಎಂದು ಆರೋಪಿಸಲಾಗಿದೆ. ಚಾರ್ಜ್‌ಶೀಟ್‌ನಲ್ಲಿ ಈ ಘಟಕಗಳ ವಿರುದ್ಧದ ಆರೋಪಗಳು, ಮೋಸ, ವಂಚನೆ, ಪಿತೂರಿ, ಭ್ರಷ್ಟಾಚಾರ ಮತ್ತು ಸಾಲ ನೀಡುವ ಮಾನದಂಡಗಳ ಉಲ್ಲಂಘನೆಯನ್ನು ಒಳಗೊಂಡಿರುತ್ತದೆ.(ಪಿಟಿಐ)

English summary
Yes Bank founder Rana Kapoor’s wife Bindu and daughters Roshni and Radha Kapoor Khanna on Monday approached Bombay High Court challenging a special court’s order refusing them bail in a corruption and cheating case involving private sector lender DHFL.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X