ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ

|
Google Oneindia Kannada News

ನವದೆಹಲಿ, ಜುಲೈ 6: ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರು ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿವೆ.

ಪರಿಷ್ಕೃತ ದರ ಪಟ್ಟಿಯಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕುಟುಂಬಗಳು ಪ್ರತಿ ಸಿಲಿಂಡರ್‌ಗೆ 1,053 ರೂ. ಪಾವತಿಸಬೇಕಾಗುತ್ತದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಸಿಲಿಂಡರ್ ಬೆಲೆ 1,052.50 ರೂ., ಕೋಲ್ಕತ್ತಾದಲ್ಲಿ 1,079 ರೂ. ಮತ್ತು ಚೆನ್ನೈ ನಿವಾಸಿಗಳು 1,068.50 ರೂ. ತೆರಬೇಕಾಗುತ್ತದೆ. ಬೆಂಗಳೂರಲ್ಲಿ ದರ 1005. 50 ರೂ ನಂತಿದೆ. ದೇಶದ ಪ್ರಮುಖ ನಗರಗಳ ಎಲ್ ಪಿ ಜಿ ದರ ತಿಳಿಯಲು ಕ್ಲಿಕ್ ಮಾಡಿ

ಇದೇ ವೇಳೆ 5ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ ಕೂಡಾ ಪರಿಷ್ಕರಿಸಲಾಗಿದ್ದು, 18 ರು ಏರಿಕೆ ಕಂಡಿದೆ. 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ದರ 8.5 ರು ಪ್ರತಿ ಸಿಲಿಂಡರ್ ನಂತೆ ಇಳಿಕೆಯಾಗಿದೆ.

Domestic LPG cylinder price hiked by Rs 50. Know latest price in Major cities

ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಜುಲೈ 1ರಂದು ಇಳಿಕೆ ಮಾಡಲಾಗಿತ್ತು. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂಪಾಯಿ 198 ಕಡಿತ ಮಾಡಲಾಗಿತ್ತು.

ಮೇ ತಿಂಗಳಲ್ಲಿ ಏರಿಕೆಯಾಗಿದ್ದ ದರ
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಮೇ ತಿಂಗಳಲ್ಲಿ 50 ರು ಪ್ರತಿ ಸಿಲಿಂಡರ್ ಏರಿಕೆಯಾಗಿತ್ತು. ಅದಕ್ಕೂ ಕಳೆದ ತಿಂಗಳು ದೆಹಲಿಯಲ್ಲಿ ಬೆಲೆಯು ರೂಪಾಯಿ 1,003ಕ್ಕೆ ಏರಿಕೆಯಾಗಿತ್ತು. ಒಂದು ತಿಂಗಳಲ್ಲೇ ಎರಡು ಬಾರಿ ಗೃಹ ಬಳಕೆಯ ಎಲ್‌ಪಿಜಿ ದರ ಹೆಚ್ಚಳವಾಗಿದೆ. ಸಿಲಿಂಡರ್‌ಗೆ ಸುಮಾರು ರೂಪಾಯಿ 53.50ರಷ್ಟು ಹೆಚ್ಚಳವಾಗಿತ್ತು. ಈ ಬಳಿಕ ದೇಶದ ಹಲವಾರು ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ದರವು ಒಂದು ಸಾವಿರದ ಗಡಿ ದಾಟಿತ್ತು.

ಜೂ.16ರಿಂದ ಹೊಸ ಎಲ್‌ಪಿಜಿ ಸಂರ್ಪಕ ದರ ಏರಿಕೆಜೂ.16ರಿಂದ ಹೊಸ ಎಲ್‌ಪಿಜಿ ಸಂರ್ಪಕ ದರ ಏರಿಕೆ

ಈ ನಡುವೆ ಕಚ್ಚಾತೈಲ ಬೆಲೆ ಏರಿಳಿತ ಕಂಡಿದ್ದರೂ ಮೇ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಬಹುತೇಕ ಸ್ಥಿರವಾಗಿದೆ.

ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್‌ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.

ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ.

English summary
The price of a 14.2 kg domestic LPG cylinder has been hiked by Rs 50 from today. Households in Delhi will have to shell out Rs 1,053 for a cylinder in the national capital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X