ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

LPG Price Hike:ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಹೆಚ್ಚಳ

|
Google Oneindia Kannada News

ನವದೆಹಲಿ, ಮಾರ್ಚ್ 22: ವಿಧಾನಸಭಾ ಚುನಾವಣೆ ಮುಗಿದ ತಕ್ಷಣ ಜನ ಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದೆ. ಮಂಗಳವಾರದಿಂದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 50 ರೂಪಾಯಿ ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮ ಭಾರತದಲ್ಲೂ ಕಂಡುಬಂದಿದೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಬೆಲೆ ಏರಿಕೆ ಮಾಡಿರಲಿಲ್ಲ. ಆದರೆ ಚುನಾವಣೆ ಮುಗಿಯುತ್ತಿದ್ದಂತೆಯೇ ಸಬ್ಸಿಡಿ ರಹಿತ ಸಿಲಿಂಡರ್ ದುಬಾರಿಯಾಗಿದೆ. ಕಳೆದ ಬಾರಿ ಅಕ್ಟೋಬರ್ 6 ರಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಸರ್ಕಾರಿ ತೈಲ ಕಂಪನಿಗಳು ಮಂಗಳವಾರ ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 50 ರೂಪಾಯಿ ಏರಿಕೆಯಾಗಿದೆ.

Important Report: ಮಾ.1ರಿಂದ ಸಿಲಿಂಡರ್, ಬ್ಯಾಂಕ್, ಡಿಜಿಟಲ್ ಪಾವತಿಯಲ್ಲಿ ಏನೆಲ್ಲ ಬದಲಾವಣೆ?Important Report: ಮಾ.1ರಿಂದ ಸಿಲಿಂಡರ್, ಬ್ಯಾಂಕ್, ಡಿಜಿಟಲ್ ಪಾವತಿಯಲ್ಲಿ ಏನೆಲ್ಲ ಬದಲಾವಣೆ?

ಮಾರ್ಚ್ 22ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯು ಲಕ್ನೋದಲ್ಲಿ ರೂ 938 ರಿಂದ ರೂ 987.5 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 14 ಕೆಜಿ ಗ್ಯಾಸ್ ಸಿಲಿಂಡರ್ 949.5 ರೂಪಾಯಿಗೆ ಏರಿಕೆ ಆಗಿದೆ. ಈ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 899.50 ರೂ ಆಗಿತ್ತು.

Domestic LPG Gas Cylinder Price Hiked by Rs 50; Check latest Rates

ದೆಹಲಿ ಹೊರತುಪಡಿಸಿ, ಇತರ ಮೆಟ್ರೋ ನಗರಗಳಲ್ಲಿ ಎಲ್‌ಪಿಜಿ ಬೆಲೆಗಳು ಬದಲಾಗಿವೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 926 ರಿಂದ 976 ರೂಪಾಯಿಗೆ ಏರಿಕೆಯಾಗಿದೆ. ಲಕ್ನೋದಲ್ಲಿ ಈಗ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ 987.5 ರೂ.ಗೆ ಲಭ್ಯವಿದ್ದರೆ, ಪಾಟ್ನಾದಲ್ಲಿ 998 ರೂ.ನಿಂದ 1039.5 ರೂ.ಗೆ ಏರಿಕೆಯಾಗಿದೆ.

5 ಕೆಜಿ, 10 ಕೆಜಿ ಸಿಲಿಂಡರ್ ಬೆಲೆಯೂ ಏರಿಕೆ

ತೈಲ ಕಂಪನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದಲ್ಲದೆ, 5 ಕೆಜಿ ಮತ್ತು 10 ಕೆಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ಈಗ 5 ಕೆಜಿ ಎಲ್‌ಪಿಜಿ ಸಿಲಿಂಡರ್ 349 ರೂ.ಗೆ ಮತ್ತು 10 ಕೆಜಿ 669 ರೂ.ಗೆ ಲಭ್ಯವಾಗಲಿದೆ. ಅಷ್ಟೇ ಅಲ್ಲ, 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 2,003.50 ರೂ.ಗೆ ತಲುಪಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಆದರೆ ಈಗ ಪೆಟ್ರೋಲ್‌-ಡೀಸೆಲ್‌ ಬೆಲೆಯು ಏರಿದೆ. ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 100 US ಡಾಲರ್​ಗಳಷ್ಟು ಏರಿಕೆಯಾಗಿತ್ತು. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 118.3 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

English summary
Domestic LPG Gas Cylinder Price Hiked by Rs 50; Check latest Rates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X