ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೌಕರರಿಗೆ ಸಿಹಿ ಸುದ್ದಿ: ಇಪಿಎಫ್ ಮೇಲಿನ ಬಡ್ಡಿದರ ಏರಿಕೆ

|
Google Oneindia Kannada News

ನವದೆಹಲಿ, ಫೆಬ್ರವರಿ 21: ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ.

ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿದೆ.

employees provident fund interest rate hiked to 8.65 per cent from 8.55 percent

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದೆ. ಈ ನಿರ್ಧಾರವು 2018-19ರ ಹಣಕಾಸು ವರ್ಷದಿಂದಲೇ ಜಾರಿಗೆ ಬರಲಿದೆ.

ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಪಿಂಚಣಿಗೆ ಸಂಬಂಧಿಸಿದ ಪ್ರಸ್ತಾವಗಳ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ನೌಕರರ ಭವಿಷ್ಯನಿಧಿ ಸಂಸ್ಥೆಯ (ಇಪಿಎಫ್‌ಒ) ಮಂಡಳಿಯು ಇಪಿಎಫ್ ಬಡ್ಡಿದರ ಹೆಚ್ಚಳಕ್ಕೆ ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿತ್ತು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಇಪಿಎಫ್ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ ಎನ್ನಲಾಗಿತ್ತು. ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರಸಕ್ತ ಹಣಕಾಸು ವರ್ಷದ ಇಪಿಎಫ್‌ ಬಡ್ಡಿದರದ ನಿರ್ಧಾರ ತೆಗೆದುಕೊಂಡಿದೆ.

English summary
Employees' Provident Fund Organisation has hiked interest rate on employees' provident fund to 8.65% from 8.55% for the 2018-19 fiscal year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X