6 ಕೋಟಿ ನೌಕರ ವರ್ಗಕ್ಕೆ ಶುಭ ಸುದ್ದಿ ಕೊಟ್ಟ ಮೋದಿ ಸರ್ಕಾರ

ನವದೆಹಲಿ, ಏಪ್ರಿಲ್ 28: ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿದೆ.

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ.

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದ್ದು, 2018-19ನೇ ಸಾಲಿನಿಂದಲೇ ಜಾರಿಯಾಗಲಿದೆ ಎಂದು ವಿತ್ತ ಸಚಿವಾಲಯ ಪ್ರಕಟವಾಗಿದೆ.

EPF interest rate hiked to 8.65%; to benefit 6 crore provident fund subscribers

ಇಪಿಎಫ್ ಬಡ್ಡಿದರ ಏರಿಕೆ ಬಗ್ಗೆ ಫೆಬ್ರವರಿ ತಿಂಗಳಿನಲ್ಲೇ ಘೋಷಣೆಯಾಗಿದ್ದರೂ, ಅಧಿಕೃತ ಅಧಿಸೂಚನೆ ಈಗ ಹೊರಡಿಸಲಾಗಿದೆ.

ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಇಪಿಎಫ್ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ ಎನ್ನಲಾಗಿತ್ತು. ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರಸಕ್ತ ಹಣಕಾಸು ವರ್ಷದ ಇಪಿಎಫ್‌ ಬಡ್ಡಿದರದ ನಿರ್ಧಾರ ತೆಗೆದುಕೊಂಡಿದೆ.

ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+