• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಏಪ್ರಿಲ್ 21ರಂದು ಬಿಟ್ ಕಾಯಿನ್ ಮೌಲ್ಯ ಎಷ್ಟಿದೆ?

|

ಬೆಂಗಳೂರು, ಏಪ್ರಿಲ್ 21: ಕೋವಿಡ್ 19 ಸಂಕಷ್ಟ ಕಾಲದಲ್ಲೂ ಡಿಜಿಟಲ್ ಕರೆನ್ಸಿ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ 61 ಸಾವಿರ ಡಾಲರ್ ಗಡಿ ದಾಟುವ ಹಂತ ತಲುಪಿ ಟ್ರೇಡರ್ಸ್ ಉತ್ಸಾಹ ಹೆಚ್ಚಿಸಿದೆ. ಆದರೆ, ನಂತರ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಇನ್ನು ಗಳಿಕೆಗೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 103.72ರಷ್ಟು ಲಾಭವನ್ನು ನೀಡಿದೆ.

ಏಪ್ರಿಲ್ 21 ರಂದು ಈ ಸಮಯಕ್ಕೆ ಬಿಟ್ ಕಾಯಿನ್ ಮೌಲ್ಯ:
ಬಿಟ್ ಕಾಯಿನ್ ಬೆಲೆ: $55,646.37
ಒಟ್ಟಾರೆ ಮಾರುಕಟ್ಟೆ ಮೌಲ್ಯ: $1,037,145,060,980
ಒಂದು ಬಿಟ್ ಕಾಯಿನ್ ಬೆಲೆ = 41,92,191.94ರು
(1 USD=75.35 ರುಪಾಯಿ)

ಬಿಟ್ ಕಾಯಿನ್ ಮೌಲ್ಯ ,000 ಗಡಿ ದಾಟಿ ಹೊಸ ದಾಖಲೆಬಿಟ್ ಕಾಯಿನ್ ಮೌಲ್ಯ ,000 ಗಡಿ ದಾಟಿ ಹೊಸ ದಾಖಲೆ

ಬಿಟ್ ಕಾಯಿನ್ ಕಳೆದ 24 ಗಂಟೆಗಳಲ್ಲಿ ಶೇ 0.11ರಷ್ಟು ಇಳಿಕೆ ಕಂಡಿದೆ. ಈ ವಾರ ಶೇ 12.64ರಷ್ಟು ಏರಿಕೆಯಾಗಿದೆ. ಈ ನಡುವೆ ಮತ್ತೊಂದು ಡಿಜಿಟಲ್ ಕರೆನ್ಸಿ ಇಥೆರಿಯಂ (Ethereum) ಕಳೆದ 24 ಗಂಟೆಗಳಲ್ಲಿ ಶೇ 7.11ರಷ್ಟು ಏರಿಕೆ ಕಂಡಿದ್ದು, 2,416.96 ಡಾಲರ್ ಮೌಲ್ಯ ಪಡೆದಿದೆ. ಒಟ್ಟಾರೆ $278,330,089,000 ಮೌಲ್ಯ ಹೊಂದಿದೆ.

ಇತ್ತೀಚೆಗೆ ಉತ್ತಮ ವಹಿವಾಟು ಮೂಲಕ, ಒಟ್ಟಾರೆ, ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಮೌಲ್ಯ $2 ಟ್ರಿಲಿಯನ್‌ಗೆ ಏರಿಕೆಯಾಗಲು ಕಾರಣವಾಗಿವೆ. ಈ ನಡುವೆ ಬಿಟ್ ಕಾಯಿನ್ ಈ ಹಿಂದಿನ $61,222 ಮೌಲ್ಯ ದಾಖಲೆ ಮುರಿದು ಏಪ್ರಿಲ್ ತಿಂಗಳಲ್ಲಿ ಮೊದಲ ಬಾರಿಗೆ 64 ಸಾವಿರ ಡಾಲರ್ ಮೌಲ್ಯಕ್ಕೇರಿತ್ತು. ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮೌಲ್ಯ 2,061,735,853,309 ಟ್ರಿಲಿಯನ್ ಡಾಲರ್ ದಾಟಿದೆ. ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 103.72ರಷ್ಟು ಲಾಭವನ್ನು ನೀಡಿದೆ.

ಬಿಟ್‌ಕಾಯಿನ್‌: ಇದು ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾಗಿದೆ. ಡಿಜಿಟಲ್ ಕರೆನ್ಸಿಯಾಗಿರುವುದರಿಂದ ಯಾವುದೇ ರೀತಿಯಲ್ಲಿ ಮುದ್ರಣ ರೂಪದಲ್ಲಿ ಸಿಗುವುದಿಲ್ಲ. ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಯಾವುದೇ ದೇಶ, ಭಾಷೆ, ಬ್ಯಾಂಕುಗಳಿಗೆ ಇದು ಸೀಮಿತವಾಗಿಲ್ಲ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಅನೇಕ ದೇಶಗಳಲ್ಲಿ ನಿಷೇಧವಾಗಿರುವ ಕ್ರಿಪ್ಟೋ ಕರೆನ್ಸಿ ಇತ್ತೀಚೆಗೆ ಭಾರಿ ಬೇಡಿಕೆ ಪಡೆದು ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ. ಆದರೆ, ಡಿಜಿಟಲ್ ಆಸ್ತಿ ರೂಪದಲ್ಲಿ ಕ್ರಿಪ್ಟೋ ಕರೆನ್ಸಿ ಬಳಕೆಯಾಗಬಹುದೇ ಹೊರತೂ ಸಾಮಾನ್ಯ ವ್ಯವಹಾರಕ್ಕೆ ಸೂಕ್ತವಲ್ಲ ಎಂದು ತಜ್ಞರು ಕೂಡಾ ಅಭಿಪ್ರಾಯಪಟ್ಟಿದ್ದಾರೆ.

English summary
Ethereum Rate Plunges than Bitcoin. Bitcoin rate steady On April 21: Here are the Latest Rate and Market Cap of major cryptocurrencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
loader
X