• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸುಂಕ ಇಳಿಕೆಯಿಂದ ಇಂಧನ ಬಳಕೆ ಹೆಚ್ಚಳ ನಿರೀಕ್ಷೆ: ನಿರ್ಮಲಾ

|
Google Oneindia Kannada News

ನವದೆಹಲಿ, ನವೆಂಬರ್ 4: ''ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ದರಕ್ಕೆ ಕಡಿವಾಣ ಹಾಕಿರುವ ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಈ ಮೂಲಕ ಗ್ರಾಹಕರ ಮೇಲಿನ ಹೊರೆಯನ್ನು ತಗ್ಗಿಸಲಾಗುತ್ತಿದೆ, ಇದಲ್ಲದೆ, ಇದರಿಂದ ಇಂಧನ ಬಳಕೆ ಹೆಚ್ಚಳ ನಿರೀಕ್ಷೆಯಿದ್ದು, ಆರ್ಥಿಕ ಒಳಹರಿವು ಹೆಚ್ಚಳವಾಗಲಿದೆ,'' ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿದ್ದಾರೆ.

ನವೆಂಬರ್ 04ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಯಾಗಲಿದೆ. ಪೆಟ್ರೋಲ್ 5 ರೂ, ಹಾಗೂ ಡೀಸೆಲ್ ಮೇಲೆ 10 ರೂ.ಇಳಿಕೆ ಮಾಡಲಾಗಿದೆ. ಇದರ ಬೆನ್ನಲೇ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ವ್ಯಾಟ್, ಸೆಸ್ ತಗ್ಗಿಸಲಾಗಿದ್ದು, ಆ ರಾಜ್ಯಗಳಲ್ಲಿ ಬೆಲೆ ಇನ್ನಷ್ಟು ತಗ್ಗಲಿದೆ.

Breaking:ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಸರ್ಕಾರBreaking:ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಸರ್ಕಾರ

ಗ್ರಾಹಕರ ಹಿತ ದೃಷ್ಟಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡುವಂತೆ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿತ್ತು. ಇದಕ್ಕೆ ಸ್ಪಂದಿಸಿದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಇಂಧನ ಮೇಲೆ ವಿಧಿಸಲಾಗುವ ಸೆಸ್ ತಗ್ಗಿಸಿವೆ.

ವಿತ್ತ ಸಚಿವಾಲಯ ಪ್ರಕಟಣೆ

ವಿತ್ತ ಸಚಿವಾಲಯ ಪ್ರಕಟಣೆ

''ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ, ಇದು ಒಟ್ಟಾರೆ ಆರ್ಥಿಕ ಸುಧಾರಣಾ ಪ್ರಕ್ರಿಯೆಯ ಭಾಗವಾಗಿದೆ, ಇಂಧನ ಬಳಕೆ ಹೆಚ್ಚಳದಿಂದ ಸದ್ಯ ಸರ್ಕಾರದ ಮೇಲಿರುವ ಹೊರೆಯೂ ತಗ್ಗಲಿದ್ದು, ಹೆಚ್ಚಿನ ಆರ್ಥಿಕ ಒಳಹರಿವು ಹರಿದು ಬರಲಿದೆ,'' ಎಂದು ವಿತ್ತ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್ 5 ರೂ, ಹಾಗೂ ಡೀಸೆಲ್ ಮೇಲೆ 10 ರೂ.ಇಳಿಕೆ ಮಾಡಲಾಗಿದೆ. ಇದರ ಬೆನ್ನಲೇ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ವ್ಯಾಟ್, ಸೆಸ್ ತಗ್ಗಿಸಿದ್ದು, ದೇಶದ ಹಲವು ರಾಜ್ಯಗಳಲ್ಲಿ ನವೆಂಬರ್ 4ರಿಂದ ಇಂಧನ ದರ ಇಳಿಕೆಯಾಗಲಿದೆ.
ರಾಜ್ಯಗಳಿಂದ ಅಧಿಕ ಸೆಸ್

ರಾಜ್ಯಗಳಿಂದ ಅಧಿಕ ಸೆಸ್

ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 110 ರು ಗಿಂತ ತಗ್ಗಿಲ್ಲ. ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 110 ರು ಪ್ಲಸ್ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 122.59 ರೂ ನಷ್ಟಿದೆ, ಡೀಸೆಲ್ ಬೆಲೆ 113.11 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 115 ರೂ ಗಡಿ ದಾಟಿದೆ.

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 04ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 81.17 ಯುಎಸ್ ಡಾಲರ್(1 USD=74.44ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಬುಧವಾರದಂದು 83.08 ಯುಎಸ್ ಡಾಲರ್ ಪ್ರತಿ ಬ್ಯಾರೆಲ್‌ನಷ್ಟಿತ್ತು. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ನಂತರ ಸರಾಸರಿ 80-85 ಪ್ಲಸ್ ಡಾಲರ್‌ನಂತೆ ಮುಂದುವರೆದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಕರ್ನಾಟಕದಲ್ಲಿ ಎಷ್ಟು ಇಳಿಕೆ

ಕರ್ನಾಟಕದಲ್ಲಿ ಎಷ್ಟು ಇಳಿಕೆ

ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Breaking: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ತಲಾ 7 ರೂ ಇಳಿಕೆ


English summary
The Ministry of Finance said the reduction in excise duty on petrol and diesel is to give a further fillip to the economy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X