ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆ ಶೆಟ್ಟರ್ ಮನವಿ

|
Google Oneindia Kannada News

ಬೆಂಗಳೂರು, ಸೆ 4: ಕರ್ನಾಟಕದಲ್ಲಿ ಗೇಮಿಂಗ್ ಮತ್ತು ಅನಿಮೇಶನ್(ಎವಿಜಿಸಿ) ಕ್ಷೇತ್ರದ ಅವಕಾಶಗಳ ಅನ್ವೇಷಣೆ, ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶವಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Recommended Video

ದೆಹಲಿಯಲ್ಲಿ CCB ಬಲೆಗೆ ಬಿದ್ದ ಡ್ರಗ್ ಡೀಲರ್ | Oneindia Kannda

ಸಿಐಐ ಇಂದು ಏರ್ಪಡಿಸಿದ್ದ ಜಾಗತಿಕ ಅನಿಮೇಷನ್, ವಿಎಫ್ಎಕ್ಸ್, ಗೇಮಿಂಗ್ & ಕಾಮಿಕ್ಸ್ ಕುರಿತಾದ ವೆಬಿನಾರ್ ನಲ್ಲಿ ಪಾಲ್ಗೊಂಡಿದ್ದ ಶೆಟ್ಟರ್ ಅವರು ಈ ಕುರಿತಾಗಿ ಮಾತನಾಡಿದರು.

6 ಹೊಸ ಟೌನ್‌ಶಿಪ್‌ಗಳ ನಿರ್ಮಾಣದ ಪ್ರಸ್ತಾಪವಿದೆ: ಶೆಟ್ಟರ್6 ಹೊಸ ಟೌನ್‌ಶಿಪ್‌ಗಳ ನಿರ್ಮಾಣದ ಪ್ರಸ್ತಾಪವಿದೆ: ಶೆಟ್ಟರ್

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅನಿಮೇಷನ್ ಉದ್ಯಮ ಸ್ಥಿರವಾದ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು ಅತ್ಯಂತ ಹೆಚ್ಚು ಅವಕಾಶ ಹೊಂದಿರುವ ಕ್ಷೇತ್ರವಾಗಿದೆ. ಇದರ ಪರಿಣಾಮ ಭಾರತಕ್ಕೆ ಅನಿಮೇಷನ್ ತಂತ್ರಜ್ಞಾನದ ಅರಿವು ನಿರಂತರವಾಗಿ ಸಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಕೈಗಾರಿಕಾ ನೀತಿಗೆ ಅಸ್ತು, ಲಕ್ಷಾಂತರ ಉದ್ಯೋಗ ಸೃಷ್ಟಿರಾಜ್ಯ ಕೈಗಾರಿಕಾ ನೀತಿಗೆ ಅಸ್ತು, ಲಕ್ಷಾಂತರ ಉದ್ಯೋಗ ಸೃಷ್ಟಿ

ಕರ್ನಾಟಕವು ಹೈಟೆಕ್ ಉದ್ಯಮ ಕ್ಷೇತ್ರಕ್ಕೆ ಹೆಸರುವಾಸಿಯಾಗಿರುವ ರಾಜ್ಯವಾಗಿದೆ. ಇದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಂತರಿಕ್ಷ ಮತ್ತು ಇತರೆ ತಂತ್ರಜ್ಞಾನ ಆಧಾರಿತ ಕ್ಷೇತ್ರಗಳ ಮೂಲಕ ದೇಶದ ಆದಾಯಕ್ಕೆ ಗಣನೀಯ ಪ್ರಮಾಣದ ಕೊಡುಗೆಯನ್ನು ನೀಡುತ್ತಿದೆ ಎಂದು ಮಾಹಿತಿ ನೀಡಿದರು.

 ಬೆಳವಣಿಗೆ ಹೊಂದುತ್ತಿರುವ ಕ್ಷೇತ್ರ

ಬೆಳವಣಿಗೆ ಹೊಂದುತ್ತಿರುವ ಕ್ಷೇತ್ರ

ಅನಿಮೇಷನ್ ಮತ್ತು ಗೇಮಿಂಗ್ ಬೆಳವಣಿಗೆ ಹೊಂದುತ್ತಿರುವ ಕ್ಷೇತ್ರ ಎಂಬುದನ್ನು ಪರಿಗಣಿಸಿದ ಮೊದಲ ರಾಜ್ಯವೆಂದರೆ ಕರ್ನಾಟಕ. ಅಲ್ಲದೇ, ಈ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಪ್ರತ್ಯೇಕ ನೀತಿಯನ್ನೂ ಜಾರಿಗೆ ತಂದಿರುವ ಮೊದಲ ರಾಜ್ಯವೂ ಕರ್ನಾಟಕವಾಗಿದೆ ಎಂದರು. ಇಂದು ಸಿಐಐ ನಿಂದ ಆಯೋಜಿಸಲಾಗಿದ್ದ ಗ್ಲೋಬಲ್‌ ಆನಿಮೇಷನ್‌, ವಿಏಫ್‌ಎಕ್ಸ್‌, ಗೇಮಿಂಗ್‌ ಮತ್ತು ಕಾಮಿಕ್ಸ್‌ (AVGC) ಶೃಂಗ ಸಭೆ - ಸಮಿಟ್‌ ಎಫ್‌ ಎಕ್‌ 2020 ನಲ್ಲಿ ವೆಬಿನಿಯರ್‌ ನಲ್ಲಿ ಸಚಿವ ಜಗದೀಶ್‌ ಶೆಟ್ಟರ್‌ ಅವರ ಜೊತೆಗೆ ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ ಮತ್ತು ಉದ್ಯೋಗ ಮಿತ್ರ ದ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಅವರು ಉಪಸ್ಥಿತರಿದ್ದರು.

 ಗೇಮಿಂಗ್ ಡೆವಲಪರ್ ಗಳ ಸಂಖ್ಯೆ ಹೆಚ್ಚಳ

ಗೇಮಿಂಗ್ ಡೆವಲಪರ್ ಗಳ ಸಂಖ್ಯೆ ಹೆಚ್ಚಳ

ಕಳೆದ ಐದು ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಅನಿಮೇಷನ್ ಸೇವೆಗಳು, ವಿಎಫ್ಎಕ್ಸ್ ಸೇವೆಗಳು ಮತ್ತು ಗೇಮಿಂಗ್ ಡೆವಲಪರ್ ಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಈ ಸಂಖ್ಯೆ ಅಧಿಕವಾಗಿದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯ ಸರ್ಕಾರ ಅನಿಮೇಷನ್ ಮತ್ತು ಗೇಮಿಂಗ್ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ಪ್ರಕಟಿಸಿರುವುದಾಗಿದೆ ಎಂದು ತಿಳಿಸಿದರು.

ಕೊಪ್ಪಳ; ದೇಶದಲ್ಲೇ ದೊಡ್ಡ ಆಟಿಕೆ ತಯಾರಿಕಾ ಘಟಕ ನಿರ್ಮಾಣಕೊಪ್ಪಳ; ದೇಶದಲ್ಲೇ ದೊಡ್ಡ ಆಟಿಕೆ ತಯಾರಿಕಾ ಘಟಕ ನಿರ್ಮಾಣ

 ಟಾಪ್ ತಾಣಗಳಲ್ಲಿ ಕರ್ನಾಟಕ ಒಂದಾಗಿದೆ

ಟಾಪ್ ತಾಣಗಳಲ್ಲಿ ಕರ್ನಾಟಕ ಒಂದಾಗಿದೆ

ಪ್ರಸ್ತುತ ಅನಿಮೇಷನ್, ವಿಶ್ಯುವಲ್ ಎಫೆಕ್ಟ್ಸ್ ಮತ್ತು ಗೇಮಿಂಗ್ ಕ್ಷೇತ್ರದ ಟಾಪ್ ತಾಣಗಳಲ್ಲಿ ಕರ್ನಾಟಕ ಒಂದಾಗಿದೆ. ಟೆಕ್ನಿಕಲರ್ ಇಂಡಿಯಾ, ಝಿಂಗಾ ಇಂಡಿಯಾ, ಡ್ರೀಂ ವರ್ಕ್ಸ್ ಸ್ಟುಡಿಯೋಸ್, ಪ್ರೈಂ ಫೋಕಸ್, ಇಎ ಮತ್ತು ಟಾಟಾ ಎಲೆಕ್ಸಿಯಂತಹ ಜಾಗತಿಕ ಸ್ಟುಡಿಯೋಗಳ ಕಾರ್ಯಾಚರಣೆಯ ನೆಚ್ಚಿನ ತಾಣವಾಗಿದೆ ಎಂದು ಅವರು ತಿಳಿಸಿದರು.

 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ

10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ

ದೇಶದಲ್ಲಿರುವ 425 ಸ್ಟುಡಿಯೋಗಳ (300 ಅನಿಮೇಷನ್, 40 ವಿಎಫ್ಎಕ್ಸ್ ಮತ್ತು 85 ಗೇಮ್ ಡೆವಲಪ್ ಮೆಂಟ್) ಪೈಕಿ ಬೆಂಗಳೂರಿನಲ್ಲಿ ಶೇ.11 ರಷ್ಟಿವೆ. ಉದ್ಯಮದ ಅಂದಾಜಿನ ಪ್ರಕಾರ, ಎವಿಜಿಸಿ ಸಂಬಂಧಿತ ತರಬೇತಿಗಳನ್ನು ಕರ್ನಾಟಕದ 80 ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಇಲ್ಲಿ ಪ್ರತಿವರ್ಷ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಅಲ್ಲದೇ, 5 ಸಾವಿರಕ್ಕೂ ಅಧಿಕ ವೃತ್ತಿಪರರು ಶಿಕ್ಷಣ ಮತ್ತು ಅನಿಮೇಷನ್ ನಿರ್ಮಾಣ ಘಟಕಗಳಲ್ಲಿ ಉದ್ಯೋಗ ಪಡೆಯುತ್ತಿದ್ದಾರೆ ಎಂದು ಸಚಿವರು ವಿವರ ನೀಡಿದರು.

English summary
The Government has also earmarked land for AVGC parks in the ITIR Park and Devanahalli IT Park near Kempegowda International Airport, Bengaluru said Large and Medium Scale Industries Jagadish Shettar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X