ಕೃಷಿ ಸಾಲಗಳ ಮೌಲ್ಯಮಾಪನಕ್ಕೆ ಉಪಗ್ರಹದಿಂದ ಡೇಟಾ ತೆಗೆದುಕೊಳ್ಳುವ ಐಸಿಐಸಿಐ ಬ್ಯಾಂಕ್
ನವದೆಹಲಿ, ಆಗಸ್ಟ್ 26: ಭಾರತದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಐಸಿಐ ಬ್ಯಾಂಕ್ ಲಿಮಿಟೆಡ್ ಕೃಷಿ ಸಾಲಗಳ ಮೌಲ್ಯಮಾಪನಕ್ಕಾಗಿ ಉಪಗ್ರಹಗಳ ದತ್ತಾಂಶವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಮೂಲಕ ರೈತರಿಗೆ ಸಾಲ ನೀಡುವ ವ್ಯವಸ್ಥೆಯಲ್ಲಿ ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯ ಎಂದಿದೆ.
ಭಾರತದ ಎರಡನೇ ಅತಿದೊಡ್ಡ ಖಾಸಗಿ ಬ್ಯಾಂಕ್ ಕಳೆದ ಎರಡು ವರ್ಷಗಳಿಂದ ಆಯ್ದ ಕೆಲವು ಹಳ್ಳಿಗಳಲ್ಲಿ ಯೋಜನೆಯನ್ನು ಪ್ರಾಯೋಗಿಕವಾಗಿ ನಡೆಸುತ್ತಿದೆ ಮತ್ತು ಈಗ ಅದನ್ನು ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಗುಜರಾತ್‌ನ 500 ಹಳ್ಳಿಗಳಿಗೆ ವಿಸ್ತರಿಸುತ್ತಿದೆ.
ಈ ಉದ್ದೇಶಕ್ಕಾಗಿ ಬ್ಯಾಂಕ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಯು.ಎಸ್.ನ ರಾಷ್ಟ್ರೀಯ ಏರೋನಾಟಿಕ್ಸ್ ಮತ್ತು ಬಾಹ್ಯಾಕಾಶ ಆಡಳಿತದಿಂದ ಸುಲಭವಾಗಿ ಲಭ್ಯವಿರುವ ಉಪಗ್ರಹ ಚಿತ್ರಗಳನ್ನು ಬಳಸುತ್ತಿದೆ.

"ಮುಂದಿನ ಒಂದು ತಿಂಗಳಲ್ಲಿ ನಾವು 25 ಸಾವಿರ ಹಳ್ಳಿಗಳನ್ನು ಒಳಗೊಳ್ಳುತ್ತೇವೆ ಮತ್ತು ಮುಂದಿನ ಎರಡು ತಿಂಗಳಲ್ಲಿ ಅದನ್ನು 63,000 ಹಳ್ಳಿಗಳಿಗೆ ಅಳೆಯುತ್ತೇವೆ" ಎಂದು ಐಸಿಐಸಿಐ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಅನುಪ್ ಬಾಗ್ಚಿ ಮಂಗಳವಾರ ಹೇಳಿದ್ದಾರೆ.
2020-21ರ ಮೊದಲ ತ್ರೈಮಾಸಿಕದಲ್ಲಿ ಐಸಿಐಸಿಐ ಬ್ಯಾಂಕಿನ ಕೃಷಿ ಸಾಲವು ವರ್ಷದಿಂದ ವರ್ಷಕ್ಕೆ ಶೇಕಡಾ 14.3ನಷ್ಟು ಹೆಚ್ಚಳವಾಗಿ ಸುಮಾರು 58,000 ಕೋಟಿ ರೂ.ಗಳಿಗೆ ತಲುಪಿದೆ ಎಂದು ಹೇಳಿದ್ದಾರೆ. ಉಪಗ್ರಹಗಳ ಫೋಟೋ ಬಳಕೆಯಿಂದ ಸ್ಥಳಕ್ಕೆ ಹೋಗುವ ವೆಚ್ಚ ಹಾಗೂ ಸಮಯ ಉಳಿತಾಯ ಸಾಧ್ಯ ಎಂದು ಬ್ಯಾಂಕ್ ಹೇಳಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications