ಸಂಪತ್ತಿನಲ್ಲಿ ಭಾರಿ ಏರಿಕೆ: ಮಸ್ಕ್, ಬೆಜೊಸ್‌ರನ್ನೂ ಹಿಂದಿಕ್ಕಿದ ಅದಾನಿ
ನವದೆಹಲಿ, ಮಾರ್ಚ್ 13: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿಯ ಸಂಪತ್ತು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ವರ್ಷ ಜಗತ್ತಿನ ಎಲ್ಲ ಶ್ರೀಮಂತ ಉದ್ಯಮಿಗಳಿಗಿಂತಲೂ ಅತ್ಯಧಿಕ, ಬಿಲಿಯನ್ ಡಾಲರ್‌ಗಟ್ಟಲೆ ಸಂಪತ್ತನ್ನು ಹೆಚ್ಚಿಸಿಕೊಂಡಿದ್ದಾರೆ. ಅವರ ಬಂದರು, ವಿದ್ಯುತ್ ಸ್ಥಾವರ ಯೋಜನೆಗಳು ಸೇರಿದಂತೆ ಅನೇಕ ಉದ್ಯಮಗಳಿಗೆ ದೊಡ್ಡ ಮಟ್ಟದ ಹೂಡಿಕೆ ಹರಿದುಬಂದಿದೆ.
ಮೊದಲ ಪೀಳಿಗೆಯ ಉದ್ಯಮಿಯಾಗಿರುವ ಅದಾನಿ ಅವರ ನಿವ್ವಳ ಸಂಪತ್ತಿನ ಮೌಲ್ಯ 2021ರಲ್ಲಿ 16.2 ಬಿಲಿಯನ್ ಡಾಲರ್‌ನಿಂದ 50 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ ಎಂದು ಬ್ಲೂಮ್‌ಬರ್ಗ್ ಬಿಲಿಯನೇರ್ ಇಂಡೆಕ್ಸ್ ತಿಳಿಸಿದೆ. ಈ ಮೂಲಕ ಅವರನ್ನು ಈ ವರ್ಷ ಜಗತ್ತಿನಲ್ಲಿ ಈವರೆಗೆ ಅತಿ ಹೆಚ್ಚು ಸಂಪತ್ತು ಸಂಪಾದಿಸಿದ ವ್ಯಕ್ತಿ ಎಂದು ಪ್ರಕಟಿಸಲಾಗಿದೆ.
ಜಗತ್ತಿನ ಮುಂಚೂಣಿ ಉದ್ಯಮಿಗಳಾದ, ಅತಿ ಶ್ರೀಮಂತ ವ್ಯಕ್ತಿ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವ ಜೆಫ್ ಬೆಜೋಸ್ ಮತ್ತು ಎಲೋನ್ ಮಸ್ಕ್ ಅವರನ್ನೂ ಗೌತಮ್ ಅದಾನಿ ಹಿಂದಿಕ್ಕಿದ್ದಾರೆ. ಅದಾನಿ ಸಮೂಹದಲ್ಲಿ ಒಂದು ಕಂಪೆನಿಯ ಹೊರತುಪಡಿಸಿ ಉಳಿದ ಎಲ್ಲ ಕಂಪೆನಿಗಳ ಷೇರುಗಳು ಕನಿಷ್ಠ ಶೇ 50ರಷ್ಟು ಹೆಚ್ಚಾಗಿದೆ. ಮುಂದೆ ಓದಿ.

ಮುಕೇಶ್ ಅಂಬಾನಿ ಸಂಪತ್ತು ಕೊಂಚ ಏರಿಕೆ
ಅದಾನಿಯೊಂದಿಗೆ ವಿವಿಧ ವಲಯಗಳಲ್ಲಿ ಪೈಪೋಟಿ ನೀಡುತ್ತಿರುವ ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಸಂಪತ್ತು 8.1 ಬಿಲಿಯನ್ ಡಾಲರ್‌ನಷ್ಟು ಹೆಚ್ಚಾಗಿದೆ. ಟೋಟಲ್ ಎಸ್‌ಎ ದಿಂದ ವಾರ್ಬರ್ಗ್ ಪಿಂಕಸ್‌ವರೆಗೆ ದೊಡ್ಡ ದೊಡ್ಡ ಕಂಪೆನಿಗಳಿಂದ ಹೂಡಿಕೆ ಆಕರ್ಷಿಸುವ ಮೂಲಕ ಅದಾನಿ, ಸಂಪತ್ತನ್ನು ಹೆಚ್ಚಿಸಿಕೊಂಡಿದ್ದಾರೆ.

ಅದಾನಿ ಜಾಲ ವಿಸ್ತರಣೆ
ಬಂದರು, ವಿಮಾನ ನಿಲ್ದಾಣ, ದತ್ತಾಂಶ ಕೇಂದ್ರಗಳು, ಆಹಾರ ಉತ್ಪನ್ನಗಳು, ಕಲ್ಲಿದ್ದಲು ಗಣಿ ಹೀಗೆ ದೇಶದ ಬಹುತೇಕ ಕ್ಷೇತ್ರಗಳಿಗೆ ಅದಾನಿ ತಮ್ಮ ಜಾಲವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿನ ಕಾರ್ಮೈಖಲ್ ಕಲ್ಲಿದ್ದಲು ಗಣಿ ಯೋಜನೆ ವಿವಾದದಿಂದ ಹಿನ್ನಡೆ ಅನುಭವಿಸಿದ್ದು ಬಿಟ್ಟರೆ, ಉಳಿದೆಲ್ಲ ಕಡೆ ಅದಾನಿ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ.

ಡೇಟಾ ಸೆಂಟರ್ ಉದ್ಯಮ
'ಅದಾನಿ ಸಮೂಹವು ಮಾರುಕಟ್ಟೆಯಲ್ಲಿ ಹೆಚ್ಚು ಸ್ಥಿತಿಸ್ಥಾಪಕ ಗುಣ ಹೊಂದಿರುವ ವಲಯಗಳಲ್ಲಿನ ತನ್ನ ಉದ್ಯಮವನ್ನು ನಿರಂತರವಾಗಿ ವಿಸ್ತರಿಸಿಕೊಳ್ಳುತ್ತಿದೆ. ಈಗ ಡೇಟಾ ಸೆಂಟರ್ ಉದ್ಯಮಕ್ಕೆ ಪ್ರವೇಶಿಸುವುದರ ಮೂಲಕ ಸಮೂಹವು ತಂತ್ರಜ್ಞಾನ ಕ್ಷೇತ್ರದಲ್ಲಿನ ತನ್ನ ಹಸಿವನ್ನು ತೋರಿಸಿದೆ' ಎಂದು ನೈಕಾ ಸಲಹಾ ಸೇವಾ ಕಂಪೆನಿಯ ಸಂಸ್ಥಾಪಕ ಸುನಿಲ್ ಚಂದಿರಾಮಣಿ ತಿಳಿಸಿದ್ದಾರೆ.

ವೃದ್ಧಿಸಿದ ಷೇರು ಮೌಲ್ಯ
ಭಾರತದಲ್ಲಿ 1 ಗಿಗಾ ವ್ಯಾಟ್ ಡೇಟಾ ಕೇಂದ್ರಗಳ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವ ಸಂಬಂಧ ಅದಾನಿ ಎಂಟರ್‌ಪ್ರೈಸಸ್ ಕಳೆದ ತಿಂಗಳು ಒಪ್ಪಂದಕ್ಕೆ ಸಹಿ ಹಾಕಿತ್ತು. ಅದಾನಿ ಟೋಟಲ್ ಗ್ಯಾಸ್‌ನ ಷೇರು ಈ ವರ್ಷ ಶೇ 96ರಷ್ಟು ಹೆಚ್ಚಳ ಕಂಡಿದೆ. ಅದಾನಿ ಎಂಟರ್‌ಪ್ರೈಸಸ್ ಶೇ 90, ಅದಾನಿ ಟ್ರಾನ್ಸ್‌ಮಿಷನ್ ಲಿ. ಶೇ 79ರಷ್ಟು ಹೆಚ್ಚಾಗಿದೆ. ಅದಾನಿ ಪವರ್, ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕಾನಾಮಿಕ್ ಜೋನ್ ಲಿ. ಈ ವರ್ಷ 52%ಕ್ಕಿಂತ ಅಧಿಕ ಏರಿಕೆ ಕಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications