• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

5ನೇ ಬಹುದೊಡ್ಡ ಹೂಡಿಕೆ ಪಡೆದ ರಿಲಯನ್ಸ್ ಜಿಯೋ

|

ಮುಂಬೈ, ಮೇ 22: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋವೇದಿಕೆಗೆ 5ನೇ ಬಹುದೊಡ್ಡ ಹೂಡಿಕೆ ಸಿಕ್ಕಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್‌ಫಾರ್ಮ್ಸ್") ನಲ್ಲಿ ಜಾಗತಿಕ ಹೂಡಿಕೆ ಸಂಸ್ಥೆ ಕೆಕೆಆರ್ 11,367 ಕೋಟಿ ರೂ.ಗಳ ಹೂಡಿಕೆಯನ್ನು ಘೋಷಿಸಿವೆ.

ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91 ಲಕ್ಷ ಕೋಟಿ ರೂ.ಗಳಿಗೆ ಹಾಗೂ ಎಂಟರ್‌ಪ್ರೈಸ್ ಮೌಲ್ಯವನ್ನು 5.16 ಲಕ್ಷ ಕೋಟಿ ರೂ.ಗಳಿಗೆ ಕೊಂಡೊಯ್ಯಲಿದೆ. ಜಾಗತಿಕ ಹೂಡಿಕೆ ಸಂಸ್ಥೆ ಕೆಕೆಆರ್ ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ 2.32% ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ.

ಕಿರಾಣಿ ಅಂಗಡಿಗಳನ್ನು ಆನ್ಲೈನ್ ಗೆ ತಂದ ಜಿಯೋ-ಫೇಸ್ಬುಕ್

ಈ ಹೂಡಿಕೆಯೊಂದಿಗೆ, ನಾಲ್ಕು ವಾರಗಳಿಗೂ ಕಡಿಮೆ ಅವಧಿಯಲ್ಲಿ ಫೇಸ್‌ಬುಕ್, ಸಿಲ್ವರ್ ಲೇಕ್, ವಿಸ್ತಾ ಈಕ್ವಿಟಿ ಪಾರ್ಟ್‌ನರ್ಸ್ ಹಾಗೂ ಜನರಲ್ ಅಟ್ಲಾಂಟಿಕ್ ಸೇರಿದಂತೆ ಪ್ರಮುಖ ತಂತ್ರಜ್ಞಾನ ಹೂಡಿಕೆದಾರರಿಂದ ಜಿಯೋ ಪ್ಲಾಟ್‌ಫಾರ್ಮ್ಸ್ 78,562 ಕೋಟಿ ರೂ. ಹೂಡಿಕೆ ಪಡೆದುಕೊಂಡಿದೆ.

ಜಿಯೋ ಪ್ಲಾಟ್‌ಫಾರ್ಮ್ಸ್ ಬಗ್ಗೆ

ಜಿಯೋ ಪ್ಲಾಟ್‌ಫಾರ್ಮ್ಸ್ ಬಗ್ಗೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್, ಭಾರತದಾದ್ಯಂತ ಉನ್ನತ ಗುಣಮಟ್ಟದ ಹಾಗೂ ಕೈಗೆಟುಕುವ ದರದ ಡಿಜಿಟಲ್ ಸೇವೆಗಳನ್ನು ಒದಗಿಸುವತ್ತ ತನ್ನ ಗಮನವನ್ನು ಕೇಂದ್ರೀಕರಿಸಿರುವ ಮುಂದಿನ ತಲೆಮಾರಿನ ತಂತ್ರಜ್ಞಾನ ವೇದಿಕೆಯಾಗಿದೆ. ಜಿಯೋ ಪ್ಲಾಟ್‌ಫಾರ್ಮ್ಸ್ 388 ದಶಲಕ್ಷಕ್ಕೂ ಹೆಚ್ಚಿನ ಚಂದಾದಾರರನ್ನು ಹೊಂದಿದೆ.

ಬ್ರಾಡ್‌ಬ್ಯಾಂಡ್ ಸಂಪರ್ಕ, ಸ್ಮಾರ್ಟ್ ಸಾಧನಗಳು, ಕ್ಲೌಡ್ ಮತ್ತು ಎಡ್ಜ್ ಕಂಪ್ಯೂಟಿಂಗ್, ಬಿಗ್ ಡೇಟಾ ಅನಲಿಟಿಕ್ಸ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಇಂಟರ್‌ನೆಟ್ ಆಫ್ ಥಿಂಗ್ಸ್, ಆಗ್ಮೆಂಟೆಡ್ ಮತ್ತು ಮಿಕ್ಸೆಡ್ ರಿಯಾಲಿಟಿ ಹಾಗೂ ಬ್ಲಾಕ್‌ಚೈನ್‌ನಂತಹ ಮುಂಚೂಣಿ ತಂತ್ರಜ್ಞಾನಗಳಿಂದ ಚಾಲಿತವಾಗಿರುವ ತನ್ನ ಡಿಜಿಟಲ್ ಇಕೋಸಿಸ್ಟಂನಾದ್ಯಂತ ಜಿಯೋ ಪ್ಲಾಟ್‌ಫಾರ್ಮ್ಸ್ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ. ಸಣ್ಣ ವರ್ತಕರು, ಅತಿಸಣ್ಣ ಉದ್ಯಮಗಳು ಹಾಗೂ ರೈತರೂ ಸೇರಿದಂತೆ ಭಾರತದಾದ್ಯಂತ 1.3 ಶತಕೋಟಿ ಜನರು ಹಾಗೂ ಉದ್ಯಮಗಳಿಗೆ ಡಿಜಿಟಲ್ ಇಂಡಿಯಾವನ್ನು ಸಾಧ್ಯವಾಗಿಸುವುದು ಜಿಯೋದ ದೂರದೃಷ್ಟಿಯಾಗಿದೆ.

ಹೂಡಿಕೆ ಸಂಸ್ಥೆ ಕೆಕೆಆರ್ ಬಗ್ಗೆ

ಹೂಡಿಕೆ ಸಂಸ್ಥೆ ಕೆಕೆಆರ್ ಬಗ್ಗೆ

1976ರಲ್ಲಿ ಸ್ಥಾಪನೆಯಾದ ಜಾಗತಿಕ ಹೂಡಿಕೆದಾರ ಸಂಸ್ಥೆಯು ತಂತ್ರಜ್ಞಾನ ಕ್ಷೇತ್ರದಲ್ಲಿ ಸತತ ಹೂಡಿಕೆ ಮಾಡಿ ಯಶಸ್ಸುಗಳಿಸಿದೆ. ಬಿಎಂಸಿ ಸಾಫ್ಟ್ ವೇರ್, ಬೈಟ್ ಡ್ಯಾನ್ಸ್, ಜೋಜೆಕ್ ಹೀಗೆ ಕ್ಲೈಂಟ್ ಪಟ್ಟಿ ಬೆಳೆಯುತ್ತದೆ. ಸಮರು 30 ಬಿಲಿಯನ್ ಡಾಲರ್ ಗಳಷ್ಟು ಮೊತ್ತವನ್ನು ಟೆಕ್ ಕಂಪನಿಗಳಲ್ಲಿ ಹೂಡಿಕೆ ಮಾಡಿರುವ ಕೆಕೆಆರ್ ಸದ್ಯ ವಿಶ್ವದ ಅಗ್ರಗಣ್ಯ 20 ಕಂಪನಿಗಳನ್ನು ತನ್ನ ತೆಕ್ಕೆಯಲ್ಲಿ ಹೊಂದಿದೆ. ಭಾರತದಲ್ಲಿ 2006ರಿಂದ ಹೂಡಿಕೆ ಮಾಡುತ್ತಿರುವ ಕೆಕೆಆರ್ ಈಗ ರಿಲಯನ್ಸ್ ಜಿಯೋ ಪ್ಲಾಟ್ ಫಾರ್ಮ್ ಗಳಲ್ಲಿ 11,367 ಕೋಟಿ ರೂ.ಗಳ ಹೂಡಿಕೆಯನ್ನು ಘೋಷಿಸಿದೆ.

ಮುಖೇಶ್ ಅಂಬಾನಿ ಪ್ರತಿಕ್ರಿಯೆ

ಮುಖೇಶ್ ಅಂಬಾನಿ ಪ್ರತಿಕ್ರಿಯೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಮಾತನಾಡಿ, "ವಿಶ್ವದ ಮುಂಚೂಣಿ ಹೂಡಿಕೆದಾರ ಸಂಸ್ಥೆ ಕೆಕೆಆರ್ ಅನ್ನು ಮೌಲ್ಯಯುತ ಪಾಲುದಾರರಾಗಿ ಸ್ವಾಗತಿಸಲು ನನಗೆ ರೋಮಾಂಚನವಾಗುತ್ತಿದೆ. ಭಾರತದ ಬೆಳವಣಿಗೆಯ ಬೃಹತ್ ಸಾಮರ್ಥ್ಯದ ಮೇಲೆ ಅವರು ಇಟ್ಟಿರುವ ನಂಬಿಕೆಗಾಗಿ ಅವರನ್ನು ಬಹಳವಾಗಿ ಮೆಚ್ಚುತ್ತೇನೆ. 1.3 ಶತಕೋಟಿ ಭಾರತೀಯರ ಜೀವನವನ್ನು ಸಮೃದ್ಧಗೊಳಿಸುವಲ್ಲಿ ಡಿಜಿಟಲೀಕರಣದ ಪರಿವರ್ತಕ ಶಕ್ತಿಯನ್ನು ಬಲವಾಗಿ ನಂಬುತ್ತದೆ. ಜಾಗತಿಕ ಪರಿಣತಿ ಮತ್ತು 430 ವರ್ಷಗಳ ತಂತ್ರಜ್ಞಾನ ಹೂಡಿಕೆಯ ಕಾರ್ಯತಂತ್ರದ ಒಳನೋಟಗಳ ಪ್ರಯೋಜನವನ್ನು ಜಿಯೋಗಾಗಿ ಪಡೆಯಲು ನಾವು ಉತ್ಸುಕರಾಗಿದ್ದೇವೆ." ಎಂದು ಹೇಳಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಹೂಡಿಕೆ

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಹೂಡಿಕೆ

ಮುಂಚೂಣಿ ಜಾಗತಿಕ ಬೆಳವಣಿಗೆ ಈಕ್ವಿಟಿ ಸಂಸ್ಥೆ ಜನರಲ್ ಅಟ್ಲಾಂಟಿಕ್‌ನಿಂದ ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 6,598.38 ಕೋಟಿ ರೂ.ಗಳ ಹೂಡಿಕೆ. ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ವಿಸ್ಟಾ ಈಕ್ವಿಟಿ ಪಾರ್ಟ್‌ನರ್ಸ್ ("ವಿಸ್ಟಾ") 11,367 ಕೋಟಿ ರೂ. ಹೂಡಿಕೆ ಮಾಡಲಿದೆ.ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಸಿಲ್ವರ್ ಲೇಕ್‌ 5,655.75 ಕೋಟಿ ರೂ. ಹೂಡಿಕೆ ಮಾಡಲಿದೆ. ಸುಮಾರು $40 ಬಿಲಿಯನ್ ಸಂಯೋಜಿತ ಆಸ್ತಿ, ಹಾಗೂ ಪ್ರಪಂಚದ ಅತ್ಯುತ್ತಮ ತಂತ್ರಜ್ಞಾನ ಮತ್ತು ತಂತ್ರಜ್ಞಾನ-ಸಶಕ್ತ ಅವಕಾಶಗಳತ್ತ ಕೇಂದ್ರೀಕೃತ ಗಮನ ಹೊಂದಿರುವ ಸಿಲ್ವರ್ ಲೇಕ್, ದೊಡ್ಡ ಪ್ರಮಾಣದ ತಂತ್ರಜ್ಞಾನ ಹೂಡಿಕೆಯಲ್ಲಿ ಜಾಗತಿಕ ನಾಯಕತ್ವದ ಸ್ಥಾನದಲ್ಲಿದೆ. ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಫೇಸ್‌ಬುಕ್ ಸಂಸ್ಥೆ 43,574 ಕೋಟಿ ರೂ ಹೂಡಿಕೆ ಮಾಡುವ ಉದ್ದೇಶದ ಒಪ್ಪಂದಕ್ಕೆ ಸಹಿ ಹಾಕಿದೆ.

English summary
Reliance Industries Limited (“Reliance Industries”) and Jio Platforms Limited (“Jio Platforms”), India’s leading digital services platform, announced today that KKR will invest ₹ 11,367 crore into Jio Platforms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X