ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಡವಾಳ ಹೂಡಿಕೆದಾರರ ಸಮಾವೇಶ, 5 ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 28 : ನವೆಂಬರ್‌ 2ರಿಂದ 4 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವರು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಎಲ್ಲಾ ರೀತಿಯ ಸಿದ್ಧತೆ ಭರದಿಂದ ಸಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್‌ ವರಿಷ್ಠರಿಗೆ ಸಲಹೆ ನೀಡಿದ ಸಿದ್ದರಾಮಯ್ಯಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್‌ ವರಿಷ್ಠರಿಗೆ ಸಲಹೆ ನೀಡಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಮಾವೇಶವನ್ನು ಉದ್ಘಾಟನೆ ಮಾಡಿ ಮಾತನಾಡಲಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭಗವಂತ ಖೂಬಾ, ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವ ಭಾಗವಾಗಿ ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ರೋಡ್‌ ಶೋ ವೇಳೆ ಉದ್ಯಮಿಗಳ ಜತೆ ನಡೆಸಿದ ಮಾತುಕತೆ ಫಲಪ್ರದವಾಗಿದೆ. ದಿಲ್ಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ ಎಂದು ಸಚಿವರು ಹೇಳಿದರು.

 5 ಲಕ್ಷ ಕೋಟಿ ರೂ. ಹೂಡಿಕೆ ನಿರೀಕ್ಷೆ

5 ಲಕ್ಷ ಕೋಟಿ ರೂ. ಹೂಡಿಕೆ ನಿರೀಕ್ಷೆ

ಅದೇ ರೀತಿ, ಹೈದರಾಬಾದ್‌ ಹಾಗೂ ಮುಂಬೈ ರೋಡ್‌ ಶೋ ವೇಳೆ ಉದ್ಯಮಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಅಂತಾರಾಷ್ಟ್ರೀಯ ರೋಡ್‌ ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದರು.

 ಕರ್ನಾಟಕ ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ

ಕರ್ನಾಟಕ ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ

ಜಾಗತಿಕ ಹೂಡಿಕೆದಾರರ ಸಮಾವೇಶ 'ಬಿಲ್ಡ್‌ ಫಾರ್‌ ದ ವರ್ಲ್ಡ್‌' ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ. ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

 ರಾಜ್ಯಕ್ಕೆ 1.76 ಲಕ್ಷ ಕೋಟಿ ರೂ.ವಿದೇಶಿ ನೇರ ಹೂಡಿಕೆ

ರಾಜ್ಯಕ್ಕೆ 1.76 ಲಕ್ಷ ಕೋಟಿ ರೂ.ವಿದೇಶಿ ನೇರ ಹೂಡಿಕೆ

ನಮ್ಮ ಸರಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹೀ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್‌ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ ಎಂದು ನಿರಾಣಿ ಹೇಳಿದರು.

 18 ತಿಂಗಳಲ್ಲಿ 5 ವಿಮಾನ ನಿಲ್ದಾಣ ಸ್ಥಾಪನೆ

18 ತಿಂಗಳಲ್ಲಿ 5 ವಿಮಾನ ನಿಲ್ದಾಣ ಸ್ಥಾಪನೆ

ಬಾದಾಮಿ, ರಾಯಚೂರು, ಕೊಪ್ಪಳ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಮುಂಬರುವ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು. ಇದು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಪೂರಕವಾಗುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

English summary
Murugesha R. Nirani Minister of Large and Medium Industries, said that the Global Investors Meet to be held from November 2nd to 4th in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X