Gold Price on April 19: ಬೆಂಗಳೂರು ಸೇರಿದಂತೆ ಭಾರತದಾದ್ಯಂತ ಏಪ್ರಿಲ್ 19ರಂದು ಚಿನ್ನ ಬೆಳ್ಳಿ ಬೆಲೆ

ಭಾರತದಲ್ಲಿ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಏಪ್ರಿಲ್ 19ರಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಬೆಲೆ ಏರಿಕೆಯ ಮಧ್ಯ ಚಿನ್ನದ ಬೆಲೆ ಪ್ರತಿ ನಿತ್ಯ ಹೆಚ್ಚಾಗುತ್ತಿದ್ದು ಶುಭ ಕಾರ್ಯಗಳಿಗಾಗಿ ಚಿನ್ನಾಭರಣ ಖರೀದಿ ಮಾಡಲು ಜನ ನೂರು ಬಾರಿ ಯೋಚಿಸುವಂತಾಗಿದೆ. ಇನ್ನೂ ತಜ್ಞರ ಪ್ರಕಾರ ಕೆಲವೇ ದಿನಗಳಲ್ಲಿ ಚಿನ್ನದ ಬೆಲೆ 1 ಲಕ್ಷ ದಾಟುವ ಸಾಧ್ಯತೆ ಇದೆ. ಹಾಗಾದರೆ ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ.

ಬೆಂಗಳೂರಿನಲ್ಲಿಂದು (ಏಪ್ರಿಲ್ 19) 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 89,450 ರೂಪಾಯಿ ಇದೆ. ಇನ್ನೂ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 97,580 ರೂಪಾಯಿಗೆ ಸಿಗುತ್ತಿದೆ. ಅಲ್ಲದೆ 18 ಕ್ಯಾರೆಟ್ 10 ಗ್ರಾಂ ಚಿನ್ನ 73,190 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗಾದರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ಈಗ ತಿಳಿಯೋಣ.

gold and silver price april 19 gold and silver prices increase across India including bengaluru

ಪ್ರಸ್ತುತ ದೇಶದ ಎಲ್ಲಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97 ಸಾವಿರ ರೂ.ಗಳನ್ನು ದಾಟಿದೆ. ಇಂದು ದೆಹಲಿಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 270 ರೂ. ಏರಿಕೆಯಾಗಿ 97,730 ರೂ.ಗೆ ವಹಿವಾಟಾಗುತ್ತಿದೆ. ಆಭರಣ ಖರೀದಿದಾರರ ಬಗ್ಗೆ ಹೇಳುವುದಾದರೆ, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 89 ಸಾವಿರ ರೂ.ಗಳನ್ನು ಮೀರಿದೆ. ಇದರಲ್ಲಿಯೂ 270 ರೂ. ಹೆಚ್ಚಳವಾಗಿದೆ.

ಅಮೆರಿಕದ ಸುಂಕ ನೀತಿ ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭಯದ ನಡುವೆ, ಜನರು ಚಿನ್ನದಲ್ಲಿ ಹೆಚ್ಚು ಹೂಡಿಕೆ ಮಾಡುತ್ತಿದ್ದಾರೆ. ಇದರಿಂದಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ಇದಲ್ಲದೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದಿಂದಾಗಿ ಚಿನ್ನದ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಮದುವೆಗಳ ಸೀಸನ್ ಆರಂಭವಾಗಿದ್ದರಿಂದ ಬೆಲೆಗಳು ಹೆಚ್ಚಿದ್ದರೂ ಚಿನ್ನದ ಬೇಡಿಕೆ ಹೆಚ್ಚಾಗಿದೆ. ಆದರೆ ಇಂದು (ಏಪ್ರಿಲ್ 19) ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಶನಿವಾರ ಬೆಳ್ಳಿ ಬೆಲೆ ಕೆಜಿಗೆ 99,900 ರೂಪಾಯಿ ಇದೆ.

ದೇಶದ ದೊಡ್ಡ ನಗರಗಳಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ದರ:-

* ದೆಹಲಿಯಲ್ಲಿ ಇಂದಿನ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 97,730 ರೂಪಾಯಿ ಇದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಗೆ ಸುಮಾರು 89,600 ರೂಪಾಯಿ ಇದೆ.

* ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 97,580 ರೂಪಾಯಿ ಇದ್ದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,450 ರೂ. ಆಗಿದೆ.

* ಕೋಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,450 ರೂಪಾಯಿ ಇದ್ದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,580 ರೂ. ಇದೆ.

* ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,500 ರೂಪಾಯಿ ಇದ್ದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,630 ರೂಪಾಯಿ ಮಾರಾಟವಾಗುತ್ತಿದೆ.

* ಅಹಮದಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,500 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,630 ರೂ. ಇದೆ.

* ಇನ್ನೂ ಲಕ್ನೋದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,450 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,580 ರೂಪಾಯಿಗೆ ಮಾರಾಟವಾಗುತ್ತಿದೆ.

* ಜೈಪುರದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,450 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,580 ರೂ. ಇದೆ.

* ಪಾಟ್ನಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,450 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,580 ರೂಪಾಯಿಗೆ ಮಾರಾಟವಾಗುತ್ತಿದೆ.

* ಹೈದರಾಬಾದ್ ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 89,450 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,580 ರೂಪಾಯಿಗೆ ಮಾರಾಟವಾಗುತ್ತಿದೆ.

* ಗುರುಗ್ರಾಮದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,500 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,630 ರೂಪಾಯಿ ಇದೆ.

* ನೋಯ್ಡಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,600 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 97,730 ರೂ. ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+