Gold Price: ಚಿನ್ನದ ಬೆಲೆ ದಿಢೀರ್ 9,800 ರೂಪಾಯಿ ಏರಿಕೆ, ಬೆಳ್ಳಿಗು ಬಂತು ಭಾರಿ ಡಿಮ್ಯಾಂಡ್!
ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ಚಿನ್ನ & ಬೆಳ್ಳಿಗೆ ಇದೀಗ ಭರ್ಜರಿ ಬೇಡಿಕೆ ಬರುತ್ತಿದೆ. ಹೀಗಾಗಿಯೇ ಬೆಲೆ ಏರಿಕೆ ಕೂಡ ಆಗುತ್ತಿದ್ದು, ಇಂದು ಒಂದೇ ದಿನದಲ್ಲಿ ಚಿನ್ನ ಬೆಲೆ ಬರೋಬ್ಬರಿ 9,800 ರೂಪಾಯಿ ಏರಿಕೆ ಕಂಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ & ಬೆಳ್ಳಿ ಬೆಲೆ? ಚಿನ್ನ & ಬೆಳ್ಳಿ ಬೆಲೆಯ ಕಂಪ್ಲೀಟ್ ಮಾಹಿತಿ ತಿಳಿಯಲು ಮುಂದೆ ಓದಿ.
ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆ ವಿಚಾರದಲ್ಲಿ ಭಾರತೀಯರೆ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ, ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಅದ್ರಲ್ಲೂ ಚಿನ್ನವನ್ನ ವ್ಯಾಪಾರದ ಉದ್ದೇಶಕ್ಕಾಗಿ, ಭಾರತದಲ್ಲಿ ಈ ಹಿಂದಿನಿಂದ ಕೂಡ ಬಳಕೆ ಮಾಡಿಕೊಂಡು ಬರಲಾಗುತ್ತಿತ್ತು. ಆಗಿನ ಕರೆನ್ಸಿ ಅಂದ್ರೆ ನಾಣ್ಯಗಳ ಮುದ್ರಣಕ್ಕೆ ಕೂಡ ಚಿನ್ನ ಬಳಕೆ ಮಾಡಲಾಗುತ್ತಿತ್ತು. ಹೀಗೆ ನಮ್ಮ ನೆಲದ ಜೊತೆಗೇ ಚಿನ್ನ ಕೂಡ ಬೆರೆತು ಹೋಗಿದೆ. ಈ ರೀತಿ ಚಿನ್ನದ ಮೇಲೆ ವಿಪರೀತ ಅವಲಂಬನೆ ಕಾರಣಕ್ಕೆ ಇದೀಗ ಚಿನ್ನದ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿದ್ದು ಇಂದು ಎಷ್ಟಿದೆ ಗೊತ್ತಾ ಚಿನ್ನ & ಬೆಳ್ಳಿ ಬೆಲೆ? ಬನ್ನಿ ಮುಂದೆ ಓದಿ ತಿಳಿಯೋಣ.

ಬಂಗಾರದ ಬೆಲೆ ಇಂದು ಇಷ್ಟಿದೆ!
24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಇಂದು ಏರಿಕೆ ಬಳಿಕ ಹೊಸ ದಾಖಲೆ ಸೃಷ್ಟಿ ಮಾಡಿ, 100 ಗ್ರಾಂಗೆ ದಾಖಲೆಯ ಬೆಲೆಯಲ್ಲಿ ಮಾರಾಟ ಆಗುತ್ತಿದೆ. ಇದೀಗ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 9,800 ರೂಪಾಯಿ ಏರಿಕೆ ಆಗಿದೆ. ಈ ಮೂಲಕ ಇದೀಗ 24 ಕ್ಯಾರೆಟ್ ಶುದ್ಧ ಚಿನ್ನ ಪ್ರತಿ 100 ಗ್ರಾಂಗೆ 7,50,000 ರೂಪಾಯಿಗೆ ಮಾರಾಟ ಆಗುತ್ತಿದೆ. ಶುದ್ಧ ಚಿನ್ನವು ಪ್ರತಿ 10 ಗ್ರಾಂಗೆ 75,000 ರೂಪಾಯಿಗೆ ಏರಿಕೆ ಆಗಿದೆ. ಹಾಗಾದ್ರೆ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಈಗ ಎಷ್ಟಿದೆ? ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಮಾಹಿತಿ ಮುಂದೆ ಇದೆ.
ಬೆಳ್ಳಿ ಬೆಲೆ ಎಷ್ಟಿದೆ ನೋಡಿ
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ. ಪ್ರತಿ 100 ಗ್ರಾಂ ಆಭರಣ ಚಿನ್ನ ಬೆಲೆ ಈಗ 9,000 ರೂಪಾಯಿ ಏರಿಕೆ ಆಗಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನ ಬೆಲೆ 900 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಏರಿಕೆ ನಂತರ ಇದೀಗ ಪ್ರತಿ 10 ಗ್ರಾಂಗೆ 68,750 ರೂಪಾಯಿಗೆ ಮಾರಾಟ ಆಗುತ್ತಿದೆ. ಇದೇ ರೀತಿ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣ್ತಿದೆ. ಬೆಳ್ಳಿ ಬೆಲೆ ಇದೀಗ, ಕೆಜಿಗೆ 94,750 ರೂಪಾಯಿ ಆಗಿದೆ. ಇನ್ನೇನು ಆಷಾಢ ಮಾಸ ಮುಗಿಯುತ್ತಿದ್ದು, ಶುಭ ಕಾರ್ಯಕ್ರಮಗಳ ಸರದಿ ಶುರುವಾಗಲಿದೆ. ಆಗ ಚಿನ್ನ & ಬೆಳ್ಳಿಗೆ ಮತ್ತಷ್ಟು ಬೆಲೆ ಬರುವ ನಿರೀಕ್ಷೆ ಇದೆ.
ಚಿನ್ನದ ಬೆಲೆ 1 ಲಕ್ಷ ರೂಪಾಯಿ ಆಗುತ್ತಾ?
ಚಿನ್ನ ಅನ್ನೋದು ಹೂಡಿಕೆ ಮಾಡುವವರಿಗೆ ಖಜಾನೆಯೇ ಎನ್ನುವಂತಾಗಿದೆ. ಯಾಕಂದ್ರೆ ಹಳದಿ ಲೋಹ ಅಂದರೆ ಚಿನ್ನದ ಮೇಲೆ ಹೂಡಿಕೆ ಮಾಡುವ ಯಾರಿಗೆ ಆದರೂ ಲಾಭ ಗ್ಯಾರಂಟಿ. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಆಗುತ್ತಿದೆ. ಆದರೆ ಚಿನ್ನ ಇಷ್ಟಪಡುವ ಮಹಿಳೆಯರಿಗೆ ಈ ವರ್ಷ ಆಘಾತ ಎದುರಾಗುವುದು ಗ್ಯಾರಂಟಿ ಅಂತಿದ್ದಾರೆ ತಜ್ಞರು. ಯಾಕಂದ್ರೆ ಚಿನ್ನದ ಬೆಲೆ ಈ ವರ್ಷ 1 ಲಕ್ಷ ರೂಪಾಯಿ ತಲುಪುವ ಸಾಧ್ಯತೆ ಹೆಚ್ಚಿದೆ.
ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!
ಕಳೆದ 15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿ ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನೂ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲಾ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗಾಗಿ ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಚಿನ್ನದ ಬೆಲೆ ಈ ವರ್ಷದ ಅಂತ್ಯಕ್ಕೆ, 1 ಲಕ್ಷ ರೂಪಾಯಿ ಆಸುಪಾಸಿಗೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ ತಜ್ಞರು.












Click it and Unblock the Notifications