Gold Price: ಚಿನ್ನದ ಬೆಲೆ ಇವತ್ತು ಏನಾಯ್ತು? ಬೆಳ್ಳಿ ರೇಟ್ ಎಷ್ಟಿದೆ?

ಬಂಗಾರದ ಬೆಲೆ ದಿನೇ ದಿನೇ ಏರಿಕೆ ಕಡೆಗೆ ಮುಖ ಮಾಡುತ್ತಿದೆ. ಆಷಾಢ ಮುಗಿದು ಇದೀಗ ಶ್ರಾವಣ ಶುರುವಾಗಿದ್ದು, ಶುಭ ಕಾರ್ಯಗಳು ಅದ್ಧೂರಿಯಾಗಿ ಆರಂಭವಾಗಿವೆ. ಹೀಗಿದ್ದಾಗಲೇ ಚಿನ್ನದ ಬೆಲೆ ಸತತ ಏರಿಕೆ ಕಡೆಗೆ ಮುಖ ಮಾಡಿದ್ದು, ಇಂದು ಕೂಡ ಚಿನ್ನದ ರೇಟ್ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಭಾರಿ ದೊಡ್ಡ ಕುಸಿತ ಕಂಡು ಬಂದಿದ್ದು, ಇದೀಗ ಬೆಂಗಳೂರು & ಕರ್ನಾಟಕದಲ್ಲಿ ಎಷ್ಟಿದೆ ಗೊತ್ತಾ ಬಂಗಾರ & ಬೆಳ್ಳಿ ಬೆಲೆ? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋದಕ್ಕೆ ಮುಂದೆ ಓದಿ.

ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ತುಂಬಾ ಇಷ್ಟ, ಅದ್ರಲ್ಲೂ ಆಭರಣವನ್ನ ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗೆ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತದೆ. ಇದೆಲ್ಲವನ್ನೂ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಹೀಗಿದ್ದಾಗ ಚಿನ್ನ ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದು ಜನರಿಗೆ ಕೂಡ ಬೇಸರ ತರಿಸಿತ್ತು. ಆದರೆ ಇಂದು ಕೂಡ ಚಿನ್ನದ ಬೆಲೆ ಏರಿಕೆ ಕಂಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಬಂಗಾರದ ರೇಟ್? ಮುಂದೆ ಓದಿ.

Gold And Silver Price In Karnataka On 12 August 2024

ಚಿನ್ನದ ಬೆಲೆ ನಮ್ಮಲ್ಲಿ ಇಷ್ಟಿದೆ!

24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ, ಏರಿಕೆ ಬಳಿಕ ಹೊಸ ಹಂತ ತಲುಪಿದೆ. 100 ಗ್ರಾಂಗೆ 2,700 ರೂಪಾಯಿ ಏರಿಕೆ ಕಂಡಿದೆ 24 ಕ್ಯಾರೆಟ್ ಶುದ್ಧ ಚಿನ್ನ ಬೆಲೆ. ಹೀಗೆ ಶುದ್ಧ ಚಿನ್ನದ ಬೆಲೆಯು ಪ್ರತಿ 100 ಗ್ರಾಂಗೆ 7,05,800 ರೂಪಾಯಿ ಆಗಿದೆ. ಇದರ ಜೊತೆಗೆ, ಶುದ್ಧ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 70,580 ರೂಪಾಯಿಗೆ ಏರಿಕೆ ಆಗಿದೆ. ಹಾಗಾದ್ರೆ ಬೆಳ್ಳಿ ಬೆಲೆ ಇದೀಗ ಎಷ್ಟಿದೆ? ಮತ್ತು 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಎಷ್ಟಿದೆ? ಮುಂದೆ ಮಾಹಿತಿ ಇದೆ ತಿಳಿಯಿರಿ.

ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ!

ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಭಾರಿ ಏರಿಕೆ ಕಂಡು, ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 2,500 ರೂಪಾಯಿ ಏರಿಕೆ ಆಗಿದೆ. ಈ ಮೂಲಕ, ಪ್ರತಿ 10 ಗ್ರಾಂಗೆ ಆಭರಣ ಚಿನ್ನದ ಬೆಲೆ ಈಗ 250 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನ ಬೆಲೆ ಏರಿಕೆ ನಂತರ ಇದೀಗ ಪ್ರತಿ 10 ಗ್ರಾಂಗೆ 64,700 ರೂಪಾಯಿಗೆ ಮಾರಾಟ ಆಗುತ್ತಿದೆ ಈ ಮೂಲಕ ಚಿನ್ನ ಖರೀದಿಗೆ ಕಾದು ಕೂತಿದ್ದ ಜನರಿಗೆ ಶಾಕ್ ಸಿಕ್ಕಂತಾಗಿದೆ. ಆದರೆ ಇದೇ ಸಮಯದಲ್ಲಿ ಬೆಳ್ಳಿ ಬೆಲೆ ವಿಚಾರದಲ್ಲಿ, ಖುಷಿಯ ಸುದ್ದಿ ಸಿಕ್ಕಂತಾಗಿದೆ. ಬೆಳ್ಳಿ ಬೆಲೆ ಇದೀಗ ಪ್ರತಿ ಒಂದು ಕೆಜಿಗೆ 79,000 ರೂಪಾಯಿಗೆ ಕುಸಿತ ಕಂಡಿದೆ.

ಚಿನ್ನ ಇಲ್ಲದೆ ಏನೂ ನಡೆಯಲ್ಲ!

ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗೆಯೇ, ಎಲ್ಲಾ ಕಡೆಯಿಂದ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ, ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ತಜ್ಞರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+