Gold Price: ಚಿನ್ನದ ಬೆಲೆಯಲ್ಲಿ ಇವತ್ತು ಕೂಡ ಭಾರಿ ಇಳಿಕೆ? ಇಂದು ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ?

ಚಿನ್ನ & ಬೆಳ್ಳಿ ಬೆಲೆ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದ್ದು, ನಿನ್ನೆಯು ಕೂಡ ಭಾರಿ ಇಳಿಕೆ ಕಂಡಿದೆ. ಆಷಾಢ ಮಾಸ ಮುಗಿದು ಶ್ರಾವಣ ಶುರುವಾಗಿರುವ ಸಮಯದಲ್ಲೇ ಮದುವೆ ಸೇರಿ ಹಲವು ಶುಭ ಕಾರ್ಯಕ್ರಮಗಳು ಶುರುವಾಗಿವೆ. ಇದೇ ಸಮಯದಲ್ಲಿ ಚಿನ್ನದ ಬೆಲೆಯಲ್ಲೂ ಭಾರಿ ಕುಸಿತ ಕಂಡುಬರುತ್ತಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ? ಇಂದು ಕೂಡ ಚಿನ್ನ & ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಾಣುತ್ತದೆಯೇ? ಮುಂದೆ ಓದಿ.

ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದೆ. ಹಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಕುಸಿತ ದಾಖಲಾಗುತ್ತಿದೆ. ಹೀಗಾಗಿ ಬಂಗಾರ ಭಾರಿ ಕುಸಿತ ಕಂಡಿದ್ದು, ಇನ್ನೇನು ಶೀಘ್ರದಲ್ಲೇ 50 ಸಾವಿರ ರೂಪಾಯಿಗೆ ಕುಸಿತ ಕಾಣುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದಾರೆ ಚಿನ್ನಾಭರಣ ಪ್ರಿಯರು. ಹಾಗಾದ್ರೆ ಚಿನ್ನದ ಬೆಲೆ ಮತ್ತಷ್ಟು ಇಳಿಕೆ ಆಗುವುದು ಗ್ಯಾರಂಟಿನಾ? ಈಗ ಚಿನ್ನ & ಬೆಳ್ಳಿ ಬೆಲೆ ಮಾರುಕಟ್ಟೆಯಲ್ಲಿ ಎಷ್ಟಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.

Gold And Silver Price May Decrease Today Also

ಬಂಗಾರದ ಬೆಲೆ ಇಷ್ಟಿದೆ ಓದಿ!

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ನಿನ್ನೆ 100 ಗ್ರಾಂಗೆ 8000 ರೂಪಾಯಿ ಕುಸಿತ ಕಂಡಿದೆ. ಹಾಗೇ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆಯು ನಿನ್ನೆ 800 ರೂ ಕಡಿತವಾಗಿದೆ. ಆಭರಣ ಚಿನ್ನದ ಬೆಲೆ ಕುಸಿತದ ಬಳಿಕ ಪ್ರತಿ 10 ಗ್ರಾಂಗೆ 63,900 ರೂಪಾಯಿ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿದೆ. ಕುಸಿತ ಕಂಡ ಬಳಿಕ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 8,700 ರೂಪಾಯಿ ಇಳಿಕೆ ಕಂಡಿದೆ. ಹಾಗಾದ್ರೆ ಬೆಳ್ಳಿಯ ಬೆಲೆ ಇದೀಗ ಎಷ್ಟಿದೆ ಮಾಹಿತಿ ಗೊತ್ತೆ? ಮಾಹಿತಿ ತಿಳಿಯಲು ಮುಂದೆ ಓದಿ.

ಕುಸಿದು ಬೀಳುತ್ತಿದೆ ಚಿನ್ನ & ಬೆಳ್ಳಿ!

10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 8,700 ರೂಪಾಯಿ ಇಳಿಕೆ ಕಂಡು, ಇಳಿಕೆ ನಂತರ ಪ್ರತಿ 10 ಗ್ರಾಂಗೆ 69,710 ರೂಪಾಯಿಗೆ ಮಾರಾಟ ಆಗುತ್ತಿದೆ. ಬೆಳ್ಳಿ ಬೆಲೆ ನಿನ್ನೆ ಪ್ರತಿ ಕೆಜಿಗೆ 1,500 ರೂ. ಕುಸಿತ ಕಂಡಿದೆ. ಈ ಮೂಲಕ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ಪ್ರತಿ ಕೆಜಿಗೆ 83,500 ರೂಪಾಯಿ ಲೆಕ್ಕದಲ್ಲಿ ಮಾರಾಟ ಆಗುತ್ತಿದೆ. ಹೀಗಾಗಿ, ಶೀಘ್ರದಲ್ಲೇ ಆಭರಣ ಚಿನ್ನ ಪ್ರತಿ 10 ಗ್ರಾಂಗೆ 50,000 ರೂಪಾಯಿಗೆ ಕುಸಿತ ಕಾಣುತ್ತಾ? ಎಂಬ ಕುತೂಹಲದಲ್ಲಿ ಚಿನ್ನ ಪ್ರಿಯರು ಕಾಯುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಚಿನ್ನ ಇಲ್ಲದೆ ಏನೂ ನಡೆಯಲ್ಲ!

ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಎಲ್ಲಾ ಕಡೆಯಿಂದಲೂ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣಕ್ಕೆ ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ಬಂಗಾರ ಮಾರುಕಟ್ಟೆಯ ತಜ್ಞರು.

ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!

15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಮತ್ತೆ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗೆ, ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದ್ದು ಚಿನ್ನ ಬೆಲೆ ಈ ವರ್ಷದ ಅಂತ್ಯಕ್ಕೆ 1 ಲಕ್ಷ ರೂಪಾಯಿ ಆಸುಪಾಸಿಗೆ ಬರಬಹುದು ಎನ್ನಲಾಗಿತ್ತು. ಆದರೆ ಈಗ ನೋಡಿದರೆ ಚಿನ್ನದ ಬೆಲೆಯಲ್ಲಿ ಕುಸಿತ ಆರಂಭ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+