Gold price: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: ಇಂದಿನ ಬಂಗಾರದ ಬೆಲೆ ನೋಡಿ!
Gold price: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಹೆಚ್ಚಳವಾಗುತ್ತಲ್ಲೇ ಇದೆ. ಮುಂದಿನ ದಿನಗಳಲ್ಲಿಯೂ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳವಾಗುವ ಆತಂಕವೂ ಇದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿದೆ. ವಿಶ್ವದಾದ್ಯಂತ ಈಗ ಟ್ಯಾಕ್ಸ್ ವಾರ್ ಶುರುವಾಗಿದೆ. ಈ ಟ್ಯಾಕ್ಸ್ ವಾರ್ ಭಾರತದ ಮೇಲೂ ಪರಿಣಾಮ ಬೀರುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ನೀತಿಯ ಬಗ್ಗೆ ಮಾತನಾಡಿದ್ದು. ಭಾರತವು ಅಮೆರಿಕದ ಹೊಸ ತೆರಿಗೆ ನೀತಿಗೆ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಭಾರತದಲ್ಲಿ ವಿವಿಧ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಅದರಲ್ಲಿ ಪ್ರಮುಖವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯೂ ಸೇರಿದೆ. ಮಾರ್ಚ್ 10ರ ಚಿನ್ನ ಮತ್ತು ಬೆಳ್ಳಿ ಬೆಲೆಯ ವಿವರ ಇಲ್ಲಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಟ್ಯಾಕ್ಸ್ ವಾರ್ ಶುರು ಮಾಡಿದ್ದಾರೆ. ಇದಾದ ಮೇಲೆ ವಿವಿಧ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲ್ಲೇ ಇದೆ. ಯಾವ ದೇಶಗಳು ಎಷ್ಟು ತೆರಿಗೆ ವಿಧಿಸುತ್ತವೋ ಅಷ್ಟೇ ಪ್ರಮಾಣದ ತೆರಿಗೆಯನ್ನು ನಾವೂ ವಿಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆಯಾದ ಮೇಲೆ ಚಿನ್ನದ ಬೆಲೆಯು ರಾಕೆಟ್‌ನಂತೆ ಏರಿಕೆಯಾಗುತ್ತಲ್ಲೇ ಇದೆ. ಮಾರ್ಚ್ 10ರಂದು ಚಿನ್ನದ ಬೆಲೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನ ಪ್ರಿಯರಿಗೆ ಸಂತೋಷದ ವಿಷಯವೆಂದರೆ ಅಲ್ಪ ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ.
ಇಂದಿನ ಚಿನ್ನದ ಬೆಲೆ ಹೇಗಿದೆ: 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 11 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ಸೋಮವಾರ ಪ್ರತಿ ಗ್ರಾಂ ಚಿನ್ನದ ಬೆಲೆ 8,782 ರೂಪಾಯಿ ಆಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯು 10 ಗ್ರಾಂಗೆ 87,820 ರೂಪಾಯಿ ಆಗಿದೆ. ಭಾನುವಾರ ಪ್ರತಿ 10 ಗ್ರಾಂ ಚಿನ್ನದ ಬೆಲೆಯು 87,710 ರೂಪಾಯಿ ಆಗಿತ್ತು.

22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 8,050 ರೂಪಾಯಿ ಆಗಿದೆ. ಪ್ರತಿ ಗ್ರಾಂಗೆ 10 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆಯು 80,500 ರೂಪಾಯಿ ಆಗಿದೆ. ಭಾನುವಾರ (ಮಾರ್ಚ್ 9ಕ್ಕೆ) 80,400 ರೂಪಾಯಿ ಇತ್ತು.
ಬೆಳ್ಳಿ ಬೆಲೆ ಹೇಗಿದೆ: ಇನ್ನು ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 99 ರೂಪಾಯಿ ಆಗಿದೆ. ಪ್ರತಿ ಕೆ.ಜಿ ಬೆಳ್ಳಿ ಬೆಲೆಯು 99,000 ಸಾವಿರ ರೂಪಾಯಿ ಆಗಿದೆ.
ಅಮೆರಿಕ ತಂದ ಸಂಕಷ್ಟ: ಇನ್ನು ಚಿನ್ನದ ವಿಚಾರದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಂಕಷ್ಟ ತಂದೊಡ್ಡಿದ್ದಾರೆ. ಅಮೆರಿಕ ಮೊದಲು ಎನ್ನುವ ಅವರ ನೀತಿಯೂ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಹೂಡಿಕೆಯ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದ್ದು. ಜನ ಹೆಚ್ಚು ಚಿನ್ನದ ಮೇಲೆ ಹೂಡಿಕೆ ಮಾಡಲು ಪ್ರಾರಂಭಿಸಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.












Click it and Unblock the Notifications