Gold Price on March 12: ಚಿನ್ನ ಪ್ರಿಯರಿಗೆ ಮತ್ತೆ ಶಾಕ್: ಚಿನ್ನ, ಬೆಳ್ಳಿ ಬೆಲೆ ಇಲ್ಲಿದೆ!
ಚಿನ್ನ ಪ್ರಿಯರಿಗೆ ಮತ್ತೆ ಶಾಕ್ ಎದುರಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಚಿನ್ನದ ಬೆಲೆಯು ವಿಪರೀತವಾಗಿ ಏರಿಕೆಯಾಗುತ್ತಿದೆ. ಅದೇ ರೀತಿ ಬುಧವಾರವೂ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆಯಾಗಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಚಿನ್ನದ ಬೆಲೆಯಲ್ಲಿ ಮಾರ್ಚ್ 12ಕ್ಕೆ ಬರೋಬ್ಬರಿ 4,500 ರೂಪಾಯಿ ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಬುಧವಾರ ಎಷ್ಟಾಗಿದೆ ಅಂತ ನೋಡೋಣ...
ಬೆಲೆ ಏರಿಕೆ, ಟ್ಯಾಕ್ಸ್‌ವಾರ್ ಹಾಗೂ ಹಣದುಬ್ಬರಗಳಿಂದಾಗಿ ವಿವಿಧ ವಸ್ತುಗಳ ಬೆಲೆ ಬೆಲೆ ಏರಿಕೆಯಾಗಿ ಜನರ ಬಳಿ ದುಡ್ಡೇ ನಿಲ್ಲುತ್ತಿಲ್ಲ. ಉಳಿತಾಯ ಮಾಡುವುದಕ್ಕೆ ಹೋಗಲಿ ಕನಿಷ್ಠ ಖರ್ಚಿಗೂ ಹಣ ಸಾಕಾಗುತ್ತಿಲ್ಲ. ಈ ರೀತಿ ಇರುವಾಗ ಜನ ಆಯ್ಕೆ ಮಾಡಿಕೊಂಡಿರುವುದು ಚಿನ್ನದ ಮೇಲೆ ಹೂಡಿಕೆ ಮಾಡುವುದು. ಜನರಿಗೆ ಇತ್ತೀಚಿನ ವರ್ಷಗಳಲ್ಲಿ ಬ್ಯಾಂಕ್‌ನಲ್ಲಿ ಹೂಡಿಕೆ ಮಾಡುವುದರಿಂದಲೂ ನಿರೀಕ್ಷಿತ ಮಟ್ಟದಲ್ಲಿ ಲಾಭ ಸಿಗುತ್ತಿಲ್ಲ. ಹೀಗಾಗಿ ಜನ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಹೆಚ್ಚು ಹಣ ಇರುವವರು ದೊಡ್ಡ ಮಟ್ಟದಲ್ಲಿ ಚಿನ್ನವನ್ನು ಖರೀದಿ ಮಾಡುತ್ತಿದ್ದರೆ, ಬಡವರು ಹಾಗೂ ಮಧ್ಯಮ ವರ್ಗದವರು ಇರುವ ದುಡ್ಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಚಿನ್ನ ಖರೀದಿ ಮಾಡುತ್ತಿದ್ದಾರೆ.

ಇದೀಗ ಚಿನ್ನದ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು. ಚಿನ್ನ ಪ್ರಿಯರು ಕಂಗಾಲಾಗುವಂತೆ ಮಾಡಿದೆ. ಭಾರತದ ಮೇಲೆ ಅಮೆರಿಕ ಮುನಿಸಿಕೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಯಾಕೆಂದರೆ ಭಾರತದಿಂದ ಅಮೆರಿಕಗೆ ರಫ್ತು ಆಗುವ ವಸ್ತುಗಳ ಮೇಲೆ ಹೆಚ್ಚು ಟ್ಯಾಕ್ಸ್ ವಿಧಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಅಮೆರಿಕದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳ ಮೇಲೆ ಟ್ಯಾಕ್ಸ್ ಕಡಿಮೆ ಮಾಡಲಾಗುತ್ತಿದೆ. ಈ ಎರಡೂ ಬೆಳವಣಿಗೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾರತದಲ್ಲಿ ವಿವಿಧ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದ್ದು ಇದರಿಂದ ಚಿನ್ನದ ಬೆಲೆಯೂ ಜಾಸ್ತಿ ಆಗಲಿದೆ ಎಂದು ಅಂದಾಜಿಸಲಾಗಿದೆ.
ಮಾರ್ಚ್ 12ರ ಚಿನ್ನ ಮತ್ತು ಬೆಳ್ಳಿ ಬೆಲೆ ನೋಡಿ
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಮಾರ್ಚ್ 12ಕ್ಕೆ ಪ್ರತಿ ಗ್ರಾಂಗೆ 8,065 ರೂಪಾಯಿ ಆಗಿದೆ. 10 ಗ್ರಾಂಗೆ 64,520 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಮೇಲೆ 45 ರೂಪಾಯಿ ಆಗಿದೆ. 10 ಗ್ರಾಂಗೆ 450 ರೂಪಾಯಿ ಹೆಚ್ಚಳವಾದಂತೆ ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂ 8,798 ರೂಪಾಯಿ ಆಗಿದೆ. 10 ಗ್ರಾಂಗೆ 87,980 ರೂಪಾಯಿ ಆಗಿದೆ. ಈ ಮೂಲಕ ಪ್ರತಿ ಗ್ರಾಂಗೆ 49 ರೂಪಾಯಿ ಹಾಗೂ ಪ್ರತಿ 10ಗ್ರಾಂಗೆ 490 ರೂಪಾಯಿ ಹೆಚ್ಚಳವಾದಂತೆ ಆಗಿದೆ.
ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಬೆಳ್ಳಿ ಬೆಲೆಯಲ್ಲೂ ಅಲ್ಪ ಪ್ರಮಾಣದ ಏರಿಕೆಯಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 2 ರೂಪಾಯಿ ಹೆಚ್ಚಳವಾಗುವ ಮೂಲಕ ಪ್ರತಿ ಗ್ರಾಂಗೆ 100 ರೂಪಾಯಿ ಆಗಿದೆ. ಪ್ರತಿ 10 ಗ್ರಾಂ ಬೆಳ್ಳಿ ಬೆಲೆಯು 1,000 ಸಾವಿರ ರೂಪಾಯಿ ಆಗಿದೆ.












Click it and Unblock the Notifications