Gold Price: ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಇಂದಿನ ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ

ಬೆಂಗಳೂರು: ಚಿನ್ನ, ಬೆಳ್ಳಿ ಎಂದ್ರೆ ಯಾರಿಗೆ ಇಷ್ಟ ಆಗಲ್ಲಾ ಹೇಳಿ. ಅದರಲ್ಲೂ ಮಹಿಳೆಯರಿಗೆ ಇದರಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. ಚಿನ್ನ ಅಥವಾ ಬೆಳ್ಳಿ ಖರೀದಿಸುವ ಮುನ್ನ ಇವುಗಳ ಬೆಲೆಗಳ ಬಗ್ಗೆ ಕುತೂಹಲ ಹೊಂದಿರುತ್ತಾರೆ. ಹಾಗಾಗಿ ಇಂದು(ಮೇ 26, 2026) ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದ್ದರೆ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಭರಣ ಖರೀದಿದಾರರಿಗೆ ಇಂದಿನ ಮಾರುಕಟ್ಟೆ ದರಗಳು ಮಹತ್ವದ್ದಾಗಿವೆ. ಮಾರುಕಟ್ಟೆಯ ಮೂಲಗಳ ಪ್ರಕಾರ, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 14,565 ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಅದೇ ರೀತಿ ಶುದ್ಧ ಚಿನ್ನ ಅಥವಾ 24 ಕ್ಯಾರಟ್ ಚಿನ್ನದ ಬೆಲೆಯು 1 ಗ್ರಾಂಗೆ 15,889 ರೂಪಾಯಿ ದಾಖಲಾಗಿದೆ. ಇನ್ನು ಬೆಳ್ಳಿಯ ವಿಚಾರಕ್ಕೆ ಬಂದರೆ, ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ 284.90 ರೂಪಾಯಿ ಇದ್ದು, 1 ಕೆಜಿ ಬೆಳ್ಳಿಯ ಬೆಲೆ 2,84,900 ರೂಪಾಯಿಗಳಷ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆ ಹಾಗೂ ಎಂಸಿಎಕ್ಸ್ ವಹಿವಾಟುಗಳ ಆಧಾರದ ಮೇಲೆ ಈ ದರಗಳು ನಿಗದಿಯಾಗಿವೆ.

Gold And Silver Price

ನಿನ್ನೆಯ ಮಾರುಕಟ್ಟೆ ದರಗಳಿಗೆ ಹೋಲಿಸಿದರೆ, ಇಂದು ಚಿನ್ನ ಹಾಗೂ ಬೆಳ್ಳಿಯಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,610 ರೂಪಾಯಿ ಇತ್ತು, ಇಂದು ಅದು ₹14,565 ರೂ.ಗೆ ಅಂದರೆ ಕೇವಲ 45 ರೂ. ಇಳಿಕೆ ಕಂಡಿದೆ. 24 ಕ್ಯಾರಟ್ ಚಿನ್ನ ನಿನ್ನೆ 15,938 ರೂ. ಇತ್ತು, ಇಂದು ₹15,889 ರೂ. ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿಯೂ ಗ್ರಾಹಕರಿಗೆ ತುಸು ರಿಲೀಫ್ ಸಿಕ್ಕಿದ್ದು, ನಿನ್ನೆ 1 ಕೆಜಿಗೆ 2,85,000 ರೂ. ಇದ್ದ ಬೆಳ್ಳಿ ದರ ಇಂದು 100 ರೂ. ಇಳಿಕೆಯಾಗಿ 2,84,900 ರೂಪಾಯಿಗೆ ಮಾರಾಟವಾಗುತ್ತಿದೆ.

ವಿವಿಧ ನಗರಗಳಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ ಪಟ್ಟಿ

ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಇಂದಿನ 22 ಕ್ಯಾರಟ್ (1 ಗ್ರಾಂ) ಚಿನ್ನದ ನಿಖರ ಬೆಲೆಗಳ ವಿವರ ಇಲ್ಲಿದೆ:

ನಗರ 22 ಕ್ಯಾರೆಟ್ ಚಿನ್ನದ ಬೆಲೆ (1 ಗ್ರಾಂ)
ಬೆಂಗಳೂರು ರೂ 14,565
ದೆಹಲಿ ರೂ 14,580
ಚೆನ್ನೈ ರೂ 14,730
ಮುಂಬೈ ರೂ 14,565
ಹೈದರಾಬಾದ್ ರೂ 14,565
ಅಹಮದಾಬಾದ್ ರೂ 14,570
ಪುಣೆ ರೂ 14,565
ಕೋಲ್ಕತ್ತಾ ರೂ 14,565

ಮುಂದಿನ ದಿನಗಳಲ್ಲಿ ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಹಾಗೂ ಅಂತಾರಾಷ್ಟ್ರೀಯ ಒಪ್ಪಂದಗಳ ಬೆಳವಣಿಗೆಗಳು ಮುಂದುವರಿದರೆ, ಎಂಸಿಎಕ್ಸ್‌ ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಮತ್ತಷ್ಟು ಬದಲಾವಣೆಗೆ ಒಳಪಡುವ ಸಾಧ್ಯತೆಗಳು ದಟ್ಟವಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+