Gold Price: ಚಿನ್ನ 64,700 ರೂಪಾಯಿ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಕುಸಿತ!
ಚಿನ್ನ & ಬೆಳ್ಳಿಯ ಬೆಲೆ ನಿರಂತರವಾಗಿ ಕುಸಿತದ ಹಾದಿಗೆ ಮರಳುತ್ತಿದ್ದು, ಚಿನ್ನ ಖರೀದಿ ಮಾಡಲು ಕಾಯುತ್ತಿದ್ದ ಜನರಿಗೆ ಒಂದಷ್ಟು ನೆಮ್ಮದಿ ಸಿಗುತ್ತಿದೆ. ಅದರಲ್ಲೂ ಚಿನ್ನದ ಬೆಲೆ ಸತತವಾಗಿ ಏರಿಕೆ ಕಾಣುತ್ತಿದ್ದ ಕಾರಣಕ್ಕೆ ಸಾಮಾನ್ಯ ಜನರಿಗೆ ಚಿಂತೆ ಶುರುವಾಗಿತ್ತು. ಹಾಗೇ ಬೆಳ್ಳಿ ಬೆಲೆ ಕೂಡ ಈಗ ಭಾರಿ ಏರಿಕೆ ಕಾಣುತ್ತಿದೆ ಅಂತಾ ಜನರು ಚಿಂತೆ ಮಾಡುತ್ತಿದ್ದರು. ಆದರೆ ಚಿನ್ನ & ಬೆಳ್ಳಿ ಬೆಲೆಯು ಕುಸಿಯುತ್ತಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ಬೆಲೆ?
ಚಿನ್ನ ಬಹು ಬೇಡಿಕೆ ವಸ್ತು ಹೀಗಾಗಿ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ, ಚಿನ್ನ ಖರೀದಿಗಾಗಿ ಜನ ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿ ತಲುಪಿತ್ತು, ಇಂತಹ ಸ್ಥಿತಿಯಲ್ಲಿ ದಿಢೀರ್ ಬೆಳ್ಳಿ ಬೆಲೆಯಲ್ಲಿ ದೊಡ್ಡ ಕುಸಿತವಾಗಿದೆ. ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆ ಮತ್ತಷ್ಟು ಕುಸಿತ ಕಾಣುವ ನಿರೀಕ್ಷೆ ಇದೆ. ಈ ನಡುವೆ ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಕೂಡ ಭಾರಿ ಇಳಿಕೆ ಕಂಡಿರುವುದು ಬೆಳ್ಳಿ ಇಷ್ಟಪಡುವವರಿಗೆ ಖುಷಿ ಕೊಟ್ಟಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ? ಮುಂದೆ ಓದಿ.

ಚಿನ್ನ & ಬೆಳ್ಳಿ ಬೆಲೆ ಎಷ್ಟು?
ಕರ್ನಾಟಕ & ಬೆಂಗಳೂರಿನಲ್ಲಿ ಇದೀಗ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 6,47,000 ಲಕ್ಷ ರೂಪಾಯಿ ಆಗಿದೆ. ಹಾಗೇ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ಭರ್ಜರಿ 64,700 ರೂಪಾಯಿಗೆ ಇಳಿಕೆ ಕಂಡಿದೆ. ಜತೆಗೆ 24 ಕ್ಯಾರೆಟ್ ಶುದ್ದ ಚಿನ್ನದ ಬೆಲೆಯು ಪ್ರತಿ 100 ಗ್ರಾಂಗೆ 7,05,800 ರೂಪಾಯಿ ತಲುಪಿದ್ದರೆ, ಹಾಗೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ಭರ್ಜರಿ 70,580 ರೂಪಾಯಿಗೆ ಇಳಿಕೆ ಕಂಡಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕೂಡ ಇದೀಗ ಭಾರಿ ಇಳಿಕೆ ಕಂಡುಬರುತ್ತಿದ್ದು & ಬೆಳ್ಳಿಯ ಬೆಲೆಯಲ್ಲಿ ಕೂಡ ಕುಸಿತವಾಗುತ್ತಿದೆ.
ಬೆಳ್ಳಿಯ ಬೆಲೆ ಎಷ್ಟಿದೆ ಈಗ?
18 ಕ್ಯಾರೆಟ್ ಚಿನ್ನದ ಬೆಲೆ ಇದೀಗ ಕರ್ನಾಟಕ & ಕನ್ನಡಿಗರ ರಾಜಧಾನಿ ಬೆಂಗಳೂರಿನಲ್ಲಿ 52,940 ರೂಪಾಯಿಗೆ ಮಾರಾಟ ಆಗುತ್ತಿದೆ. ಅದೇ ರೀತಿ 100 ಗ್ರಾಂ 18 ಕ್ಯಾರೆಟ್ ಚಿನ್ನದ ಬೆಲೆ 5,29,400 ರೂಪಾಯಿ ಆಗಿದೆ. ಮತ್ತೊಂದು ಕಡೆ ಬೆಳ್ಳಿ ಬೆಲೆಯಲ್ಲಿ ಕುಸಿತ ಕಂಡುಬಂದ ಕಾರಣಕ್ಕೆ ಇದೀಗ ಬೆಳ್ಳಿ ಬೆಲೆ ಪ್ರತಿ 1 ಕೆಜಿಗೆ 750 ರೂಪಾಯಿ ಕಡಿಮೆ ಆಗಿದೆ. ಹೀಗಾಗಿ, ಬೆಳ್ಳಿ ಇದೀಗ ಪ್ರತಿ ಕೆಜಿಗೆ 85,000 ರೂಪಾಯಿಗೆ ಮಾರಾಟ ಆಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನ & ಬೆಳ್ಳಿ ಬೆಲೆ ಮತ್ತಷ್ಟು ಕುಸಿತ ಕಾಣುವ ನಿರೀಕ್ಷೆ ದಟ್ಟವಾಗಿದೆ.
5000 ವರ್ಷಗಳಿಂದ ಚಿನ್ನದ ಬಳಕೆ!
ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆ ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು.
ಚಿನ್ನ ಇಲ್ಲದೆ ಏನೂ ನಡೆಯಲ್ಲ!
ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಎಲ್ಲಾ ಕಡೆಯಿಂದಲೂ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣಕ್ಕೆ ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ಬಂಗಾರ ಮಾರುಕಟ್ಟೆಯ ತಜ್ಞರು.












Click it and Unblock the Notifications