ಏ. 1ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ?

ಬೆಂಗಳೂರು, ಏಪ್ರಿಲ್ 1: ಕಳೆದ ಒಂದು ವಾರದಿಂದ ಇಳಿಮುಖದತ್ತ ಸಾಗಿರುವ ಚಿನ್ನದ ದರ, ಹೊಸ ಹಣಕಾಸು ವರ್ಷದ ಆರಂಭದ ದಿನವಾದ ಏಪ್ರಿಲ್ 1ರಂದು ಕೂಡ ಗ್ರಾಹಕರಿಗೆ ಸಂತಸ ನೀಡಿದೆ. ದೇಶದಲ್ಲಿ ಗುರುವಾರ ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಪ್ರತಿ 100 ಗ್ರಾಂಗೆ 2,500 ರೂಪಾಯಿಯಷ್ಟು ಬಂಗಾರದ ಬೆಲೆ ಅಗ್ಗವಾಗಿದೆ.

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (ಎಂಸಿಎಕ್ಸ್) ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಬೆಳ್ಳಿ ದರ ಮತ್ತೆ ಇಳಿಕೆಯತ್ತ ಸಾಗಿದೆ. ಎಂಸಿಎಕ್ಸ್‌ನಲ್ಲಿ ಜೂನ್ ಗೋಲ್ಡ್ ಫ್ಯೂಚರ್ ಪ್ರತಿ 10 ಗ್ರಾಂಗೆ 44,977ಕ್ಕೆ ರೂಪಾಯಿಗೆ ತಲುಪಿದೆ. ಬೆಳ್ಳಿ ದರ ಕೂಡ ಶೇ 0.35ರ ಇಳಿಕೆಯೊಂದಿಗೆ 63,595 ರೂಪಾಯಿಗೆ ತಲುಪಿದೆ. ಹಿಂದಿನ ಅವಧಿಯಲ್ಲಿ ಚಿನ್ನ ಶೇ 1 ಮತ್ತು ಬೆಳ್ಳಿ ಶೇ 0.9ರಷ್ಟು ಏರಿಕೆಯಾಗಿದ್ದವು.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸಾರ್ವಕಾಲಿಕ ಏರಿಕೆಯಾದ 56,200 ರೂಪಾಯಿಗೆ ತಲುಪಿದ್ದ 10 ಗ್ರಾಂ ಚಿನ್ನದ ದರ, ಈ ವರ್ಷದ ಮೊದಲ ಮೂರು ತಿಂಗಳಲ್ಲಿ 5,000 ರೂಪಾಯಿಯಷ್ಟು ಇಳಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಇಳಿಕೆ

ದೆಹಲಿಯಲ್ಲಿ ಬೆಲೆ ಇಳಿಕೆ

ಬಂಗಾರದ ಬೆಲೆ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 10 ರೂ ಇಳಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 43,240 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 47,170 ರೂಪಾಯಿಗೆ ಇಳಿಕೆಯಾಗಿದೆ.

ಬೆಂಗಳೂರಲ್ಲಿ ಬಂಗಾರ ಅಗ್ಗ

ಬೆಂಗಳೂರಲ್ಲಿ ಬಂಗಾರ ಅಗ್ಗ

ಬೆಂಗಳೂರಿನಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಗಿದೆ. ಆದರೆ ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಗುರುವಾರದ ಇಳಿಕೆ ಅತ್ಯಲ್ಪ ಪ್ರಮಾಣದ್ದು. ಇಂದು 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂಗೆ 10 ರೂಪಾಯಿಯಷ್ಟು ಇಳಿಕೆಯಾಗಿದೆ. ಪ್ರತಿ ಹತ್ತು ಗ್ರಾಂ ಚಿನ್ನಕ್ಕೆ 41,090 ರೂಪಾಯಿ ಇದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಇಳಿಕೆಯೊಂದಿಗೆ 44,830 ರೂಪಾಯಿಗೆ ಕುಸಿದಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಕೂಡ ಬಂಗಾರದ ಬೆಲೆ ಇದೇ ರೀತಿ ಇದೆ.

ಚೆನ್ನೈನಲ್ಲಿ ದರ ಏರಿಕೆ

ಚೆನ್ನೈನಲ್ಲಿ ದರ ಏರಿಕೆ

ನೆರೆಯ ಚೆನ್ನೈನಲ್ಲಿ ಚಿನ್ನದ ದರದಲ್ಲಿ ಎರಡು ದಿನಗಳ ಏರಿಕೆ ಬಳಿಕ ಗುರುವಾರ ಕೊಂಚ ಇಳಿಕೆಯಾಗಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 140 ರೂಪಾಯಿ ಇಳಿಕೆಯೊಂದಿಗೆ 41,620 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 140 ರೂಪಾಯಿ ಇಳಿಕೆಯಾಗಿದ್ದು, 45,400 ರೂಪಾಯಿಗೆ ತಲುಪಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ತಗ್ಗಿದ್ದು, 43,360 ರೂಪಾಯಿಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ರೂಪಾಯಿ ಇಳಿಕೆಯೊಂದಿಗೆ 44,360 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 10 ರೂ. ಅಗ್ಗವಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 41,090 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 44,830 ರೂಪಾಯಿಗೆ ಮಾರಾಟವಾಗುತ್ತಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಒಟ್ಟಾರೆಯಾಗಿ ಬೆಳ್ಳಿ ದರ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 400 ರೂಪಾಯಿ ಏರಿಕೆಯಾಗಿದ್ದು, 63,600 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಪ್ರತಿ ಕೆಜಿ ಬೆಳ್ಳಿಗೆ 2,100 ರೂಪಾಯಿ ಇಳಿಕೆಯೊಂದಿಗೆ 63,400 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಒಂದು ಕೆಜಿಗೆ 67,600 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ 400 ರೂಪಾಯಿ ಏರಿಕೆಯಾಗಿದ್ದು, ಪ್ರತಿ ಕೆಜಿಗೆ 63,600 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 1೦ ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+