ಮಾರ್ಚ್ 19ರಂದು ಚಿನ್ನದ ದರದಲ್ಲಿ ಭಾರಿ ಏರಿಕೆ, ಬೆಳ್ಳಿ ತುಸು ಅಗ್ಗ
ಬೆಂಗಳೂರು, ಮಾರ್ಚ್ 19: ಹಬ್ಬ ಹರಿದಿನಗಳು ಹತ್ತಿರ ಬರುತ್ತಿರುವಂತೆಯೇ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಆಭರಣ ಪ್ರಿಯರಿಗೆ ಮತ್ತು ಮದುವೆ ಮುಂತಾದ ಸಮಾರಂಭಗಳಿಗೆ ತಯಾರಿ ನಡೆಸುತ್ತಿರುವವರನ್ನು ಇದು ಕಂಗಾಲಾಗಿಸಿದೆ. ಸತತ ಎರಡನೆಯ ದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆಯಾಗಿದೆ.
Recommended Video
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಶುಕ್ರವಾರ ಮತ್ತೆ ಹೆಚ್ಚಾಗಿದೆ. ಗುರುವಾರ ಹತ್ತರಿಂದ ನೂರು ರೂಪಾಯಿವರೆಗೆ ಅಲ್ಪ ಏರಿಕೆ ಕಂಡುಕೊಂಡಿದ್ದ ಹಳದಿ ಲೋಹ, ಶುಕ್ರವಾರ ಗ್ರಾಹಕರ ಜೇಬಿಗೆ ಮತ್ತಷ್ಟು ಭಾರವಾಗಿದೆ. ಎಂಸಿಎಕ್ಸ್‌ನಲ್ಲಿ ಹಳದಿ ಲೋಹದ ಬೆಲೆ ಪ್ರತಿ ಗ್ರಾಂಗೆ 32 ರೂಪಾಯಿಯಂತೆ ಏರಿಕೆಯಾಗಿದೆ. ಎಂಸಿಎಕ್ಸ್‌ನಲ್ಲಿ ಪ್ರತಿ ಹತ್ತು ಗ್ರಾಂ ಚಿನ್ನದ ದರ 320 ರೂಪಾಯಿಯಷ್ಟು ಹೆಚ್ಚಳವಾಗಿದೆ.
ಎಂಸಿಎಕ್ಸ್‌ನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್ ಎರಡರಲ್ಲಿಯೂ ಏರಿಕೆಯಾಗಿದ್ದು, 22 ಕ್ಯಾರಟ್‌ನ ಹತ್ತು ಗ್ರಾಂ ಚಿನ್ನದ ಬೆಲೆ 44,280 ರೂ. ತಲುಪಿದೆ. 24 ಕ್ಯಾರಟ್ ಚಿನ್ನದ ಹತ್ತು ಗ್ರಾಂ.ಗೆ 45,280 ರೂಪಾಯಿ ದರವಿದೆ. ಈ ದರದಲ್ಲಿ ದೇಶದ ಪ್ರಮುಖ ನಗರದಿಂದ ನಗರಕ್ಕೆ ವ್ಯತ್ಯಾಸವಿದೆ. ಕೆಲವು ನಗರಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ದುಬಾರಿಯಾಗಿದೆ, ವಿವಿಧ ನಗರಗಳಲ್ಲಿ ಹಳೆಯ ದರ ಕಾಯ್ದುಕೊಂಡಿದೆ.

ದೆಹಲಿಯಲ್ಲಿ ದರ
ಹಳದಿ ಲೋಹದ ಬೆಲೆ ದೆಹಲಿಯಲ್ಲಿ ಶುಕ್ರವಾರ ಏರಿಕೆಯಾಗಿದೆ. ಗುರುವಾರ ಸ್ಥಿರತೆ ಕಾಯ್ದುಕೊಂಡಿದ್ದ ಬೆಲೆ, ಇಂದು ಪ್ರತಿ ಹತ್ತು ಗ್ರಾಂಗೆ 200 ರೂ. ದುಬಾರಿಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 44,150 ರೂ ದಿಂದ 44,350ಕ್ಕೆ ಹೆಚ್ಚಲ ಕಂಡಿದೆ. ಹಾಗೆಯೇ 24 ಕ್ಯಾರಟ್ ಚಿನ್ನ ಬೆಲೆ ಗ್ರಾಂಗೆ 22 ರೂ.ದಂತೆ ಏರಿಕೆಯಾಗಿದ್ದು, ಪ್ರತಿ 10 ಗ್ರಾಂ ಚಿನ್ನದ ದರ 48,380 ರೂಪಾಯಿ ಇದೆ.

ಬೆಂಗಳೂರಲ್ಲಿ ಚಿನ್ನದ ದರ
ಬೆಂಗಳೂರಿನಲ್ಲಿ ಚಿನ್ನದ ದರ ತುಟ್ಟಿಯಾಗಿದೆ. ಆದರೆ ಗುರುವಾರದ ದರ ಏರಿಕೆಗೆ ಹೋಲಿಸಿದರೆ ಇದು ಸಮಾಧಾನಕರ. 22 ಕ್ಯಾರಟ್ ಚಿನ್ನದ ಬೆಲೆ 10 ರೂಪಾಯಿ ಏರಿಕೆಯಾಗಿದ್ದು, 42,210 ರೂಪಾಯಿಗೆ ತಲುಪಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 10 ರೂ ಏರಿಕೆಯಾಗಿದೆ. ಶುದ್ಧ ಚಿನ್ನದ ದರ 46,050 ರೂಪಾಯಿಗೆ ಮುಟ್ಟಿದೆ.

ಚೆನ್ನೈನಲ್ಲಿ ಬೆಲೆ ಎಷ್ಟು?
ಚೆನ್ನೈನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ 10 ರೂಪಾಯಿಯಷ್ಟು ದುಬಾರಿಯಾಗಿದೆ. 10 ಗ್ರಾಂ ತೂಕದ 22 ಕ್ಯಾರಟ್ ಚಿನ್ನದ ಬೆಲೆ 42,590 ರೂ.ಗೆ ಮಾರಾಟವಾಗುತ್ತಿದೆ ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 10 ರೂಪಾಯಿ ಹೆಚ್ಚಳದೊಂದಿಗೆ 46,460 ರೂ. ತಲುಪಿದೆ.

ಮುಂಬೈನಲ್ಲಿ ಚಿನ್ನದ ದರ
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆಯಾಗಿದ್ದು, 44,290 ರೂ ದರದಲ್ಲಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ಗ್ರಾಂಗೆ 10 ರೂ ಹೆಚ್ಚಳದಂತೆ 45,290 ರೂ ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಸಹ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. 22 ಕ್ಯಾರೆಟ್ ಚಿನ್ನವು 10 ರೂದಂತೆ ಏರಿಕೆಯಾಗಿದ್ದು, 10 ಗ್ರಾಂಗೆ 42,210 ರೂ ಮತ್ತು, 24 ಕ್ಯಾರಟ್ ಹಳದಿ ಲೋಹ 46,050 ರೂ.ಗೆ ಮಾರಾಟವಾಗುತ್ತಿದೆ.

ದೇಶದಲ್ಲಿ ಬೆಳ್ಳಿ ಬೆಲೆ
ಬೆಳ್ಳಿ ದರದಲ್ಲಿ ಶುಕ್ರವಾರ ಕೊಂಚ ಇಳಿಕೆ ಕಂಡಿದೆ. ಎಂಸಿಎಕ್ಸ್‌ನಲ್ಲಿ ಪ್ರತಿ ಕೆಜಿ ಬೆಳ್ಳಿ ದರ 400 ರೂಪಾಯಿಯಷ್ಟು ಅಗ್ಗವಾಗಿದೆ. ಪ್ರಸ್ತುತ ಒಂದು ಕೆಜಿ ಬೆಳ್ಳಿಗೆ 67,300 ರೂ ದರವಿದೆ. ಬೆಂಗಳೂರಿನಲ್ಲಿಯೂ ಬೆಳ್ಳಿ ಬೆಲೆ ಇಳಿಕೆಯಾಗಿದೆ. ನಗರದಲ್ಲಿ ಬೆಳ್ಳಿ ದರ ಒಂದು ಕೆಜಿಗೆ 400 ರೂಪಾಯಿ ಇಳಿಕೆಯಾಗಿದ್ದು, 67,700 ರೂಪಾಯಿಯಿಂದ 67,300 ರೂ.ಗೆ ತಗ್ಗಿದೆ. ದೆಹಲಿಯಲ್ಲಿ ಕೆಜಿ ಬೆಳ್ಳಿದರ 67,6=700 ರೂ. ದಿಂದ 67,300 ರೂ.ಗೆ ಕುಸಿದಿದೆ. ಚೆನ್ನೈನಲ್ಲಿ 72,000 ರೂ ಮತ್ತು ಮುಂಬೈನಲ್ಲಿ 67,300 ರೂಪಾಯಿ ದರವಿದೆ.
* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 9 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.












Click it and Unblock the Notifications