ಬಂಗಾರದ ಬೆಲೆಯಲ್ಲಿ ಅಲ್ಪ ಇಳಿಕೆ: ಮಾರ್ಚ್ 23ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ

ಬೆಂಗಳೂರು, ಮಾರ್ಚ್ 23: ಭಾರತದ ಆಭರಣ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಮಂಗಳವಾರವೂ ಸಮಾಧಾನಕರ ಸುದ್ದಿ ಸಿಕ್ಕಿದೆ. ಸತತ ನಾಲ್ಕನೆಯ ದಿನ ಹಳದಿ ಲೋಹದ ದರದಲ್ಲಿ ಇಳಿಕೆ ಕಂಡಿದೆ. ಶನಿವಾರದಿಂದಲೂ ಬಂಗಾರದ ಬೆಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ಈ ದರ ದೊಡ್ಡ ನಿರಾಳತೆ ನೀಡುವಷ್ಟು ಮಟ್ಟದಲ್ಲಿಲ್ಲ.

ಎಂಸಿಎಕ್ಸ್‌ನಲ್ಲಿ ಹಳದಿ ಲೋಹದ ಬೆಲೆ ಮಂಗಳವಾರ ಚಿನ್ನದ ಫ್ಯೂಚರ್ ಶೇ 0.15ರಷ್ಟು ಇಳಿಕೆಯಾಗಿದೆ. ಪ್ರತಿ ಹತ್ತು ಗ್ರಾಂನ ಚಿನ್ನದ ಬೆಲೆ 44,838 ರೂಪಾಯಿದೆ. ಸೋಮವಾರದ ಮಾರುಕಟ್ಟೆ ಅಂತ್ಯದ ವೇಳೆಗೆ 44,905 ರೂಪಾಯಿಗೆ ಮುಕ್ತಾಯಗೊಂಡಿತ್ತು. ಹಾಗೆಯೇ ಬೆಳ್ಳಿ ದರ ಕೂಡ ಶೇ 0.38ರಂತೆ ಪ್ರತಿ ಕೆ.ಜಿಗೆ 66,082 ರೂಪಾಯಿಗೆ ಇಳಿಕೆಯಾಗಿದೆ.

ದೇಶದಲ್ಲಿ ಸರಾಸರಿ ಚಿನ್ನದ ಬೆಲೆ 10 ಗ್ರಾಂಗೆ 10 ರೂಪಾಯಿ ಇಳಿಕೆಯಾಗಿದ್ದು, 22 ಕ್ಯಾರಟ್ ಚಿನ್ನಕ್ಕೆ 43,790 ರೂಪಾಯಿ ಇದೆ. ಹಾಗೆಯೇ 24 ಕ್ಯಾರಟ್ ಚಿನ್ನವು 44,970 ರೂಪಾಯಿ ಮೌಲ್ಯ ಹೊಂದಿದೆ.

ದೆಹಲಿಯಲ್ಲಿ ದರ

ದೆಹಲಿಯಲ್ಲಿ ದರ

ಬಂಗಾರದ ಬೆಲೆ ದೆಹಲಿಯಲ್ಲಿ ಸೋಮವಾರದಂತೆಯೇ ಪ್ರತಿ ಹತ್ತು ಗ್ರಾಂಗೆ 10 ರೂ ಇಳಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 44,190 ರೂ. ಇದ್ದರೆ, 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 48,210 ರೂಪಾಯಿ ಇದೆ.

ಬೆಂಗಳೂರಲ್ಲಿ ಚಿನ್ನದ ದರ ಇಳಿಕೆ

ಬೆಂಗಳೂರಲ್ಲಿ ಚಿನ್ನದ ದರ ಇಳಿಕೆ

ಬೆಂಗಳೂರಿನಲ್ಲಿ ಚಿನ್ನದ ದರ ಇತರೆ ನಗರಗಳಿಗೆ ಹೋಲಿಸಿದರೆ ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂಗೆ 150 ರೂ ಇಳಿಕೆಯಾಗಿದ್ದು, 41,900 ರೂಪಾಯಿಗೆ ತಲುಪಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 180 ಇಳಿಕೆಯಾಗಿದೆ. ಶುದ್ಧ ಚಿನ್ನದ ದರ 45,700 ರೂಪಾಯಿಗೆ ಮುಟ್ಟಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಕೂಡ ಇದೇ ದರವಿದೆ.

ಚೆನ್ನೈನಲ್ಲಿ ಬೆಲೆ ಸ್ಥಿರ

ಚೆನ್ನೈನಲ್ಲಿ ಬೆಲೆ ಸ್ಥಿರ

ಚೆನ್ನೈನಲ್ಲಿ ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 10 ರೂಪಾಯಿ ಇಳಿಕೆಯೊಂದಿಗೆ 42,110 ರೂ.ಗೆ ಮಾರಾಟವಾಗುತ್ತಿದೆ ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 45,940 ರೂಪಾಯಿಗೆ ಕುಸಿದಿದೆ.

ಮುಂಬೈನಲ್ಲಿ ಚಿನ್ನದ ದರ ಇಳಿಕೆ

ಮುಂಬೈನಲ್ಲಿ ಚಿನ್ನದ ದರ ಇಳಿಕೆ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಮಂಗಳವಾರ 10 ರೂ ಇಳಿಕೆಯಾಗಿದ್ದು, 43,790 ರೂ ದರದಲ್ಲಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ಗ್ರಾಂ 44,790 ರೂ ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಚಿನ್ನದ ಬೆಲೆ ಅಗ್ಗವಾಗಿದೆ. 22 ಕ್ಯಾರೆಟ್ ಚಿನ್ನವು 150 ರೂ.ದಂತೆ ತಗ್ಗಿದ್ದು, 10 ಗ್ರಾಂಗೆ 41,900 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 180 ರೂ ಇಳಿಕೆಯೊಂದಿಗೆ 45,700 ರೂ.ಗೆ ತಲುಪಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ಬೆಳ್ಳಿ ದರದಲ್ಲಿ ಮಂಗಳವಾರವೂ ಇಳಿಕೆ ಕಂಡಿದೆ. ಒಟ್ಟಾರೆ ದೇಶಿ ಮಾರುಕಟ್ಟೆಯಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿ ದರ 600 ರೂ ಕುಸಿತದೊಂದಿಗೆ 66,000 ರೂ.ಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 1000 ರೂಪಾಯಿ ಇಳಿಕೆಯಾಗಿದೆ. ನಗರದಲ್ಲಿ ಬೆಳ್ಳಿ ದರ ಒಂದು ಕೆಜಿಗೆ 66,500 ರೂಪಾಯಿಗೆ ತಲುಪಿದೆ. ಮೈಸೂರಿನಲ್ಲಿ ಬೆಳ್ಳಿ ದರ ಪ್ರತಿ ಕೆ.ಜಿ.ಗೆ 100 ರೂ ಇಳಿಕೆಯಾಗಿದ್ದು, 66,500 ರೂ ದರವಿದೆ ಮತ್ತು ಮಂಗಳೂರಿನಲ್ಲಿಯೂ 66,500 ರೂ ದರವಿದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 11 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+