ಮಾರ್ಚ್ 25ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ

ಬೆಂಗಳೂರು, ಮಾರ್ಚ್ 25: ಕಳೆದ ವಾರಾಂತ್ಯದಿಂದ ನಿರಂತರ ಇಳಿಕೆ ಕಂಡಿದ್ದ ಚಿನ್ನದ ದರ, ಭಾರತದ ಆಭರಣ ಮಾರುಕಟ್ಟೆಯಲ್ಲಿ ಗುರುವಾರ ಮತ್ತೆ ಏರಿಕೆ ಕಂಡಿದೆ. ಪ್ರತಿ ಒಂದು ಗ್ರಾಂ ಬಂಗಾರದ ದರ 102 ರೂಪಾಯಿಯಷ್ಟು ತುಟ್ಟಿಯಾಗಿದೆ. ಹಿಂದಿನ ದಿನವಷ್ಟೇ ಗಣನೀಯ ಕುಸಿತ ಕಂಡಿದ್ದ ಬಂಗಾರದ ಬೆಲೆ ಮತ್ತೆ ಏರಿಕೆಯಾಗಿರುವುದು ಗ್ರಾಹಕರನ್ನು ಚಿಂತೆಗೀಡುಮಾಡಿದೆ.

ದೇಶದಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 4,402 ರೂಪಾಯಿಗೆ ತಲುಪಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಕೂಡ ಪ್ರತಿ 10 ಗ್ರಾಂಗೆ 1020 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂನ ಚಿನ್ನದ ದರ 43,000 ರೂ.ದಿಂದ 44,020 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ತೂಕದ ಚಿನ್ನದ ದರ 45,020 ರೂಪಾಯಿಗೆ ಏರಿಕೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಮತ್ತೆ ಇಳಿಕೆಯಾಗಿದೆ.

ಎಂಸಿಎಕ್ಸ್‌ನಲ್ಲಿ ಹಳದಿ ಲೋಹದ ಬೆಲೆ ಗುರುವಾರ ಶೇ 0.05ರ ಏರಿಕೆಯೊಂದಿಗೆ ಪ್ರತಿ 10 ಗ್ರಾಂಗೆ 45,900 ರೂಪಾಯಿ ದರವಿದೆ. ಬೆಳ್ಳಿ ದರದಲ್ಲಿ ಶೇ 0.15ರ ಇಳಿಕೆಯೊಂದಿಗೆ ಪ್ರತಿ ಕೆಜಿಗೆ 65,150 ರೂಪಾಯಿಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ತೆರೆದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ದರ ಏರಿಕೆ

ದೆಹಲಿಯಲ್ಲಿ ದರ ಏರಿಕೆ

ಬಂಗಾರದ ಬೆಲೆ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 10 ರೂ ಏರಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 44,060 ರೂ.ದಿಂದ 44,070ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 48,070 ರೂಪಾಯಿಗೆ ಹೆಚ್ಚಳ ಕಂಡಿದೆ.

ಬೆಂಗಳೂರಲ್ಲಿ ಚಿನ್ನದ ದರ ಏರಿಕೆ ಹೆಚ್ಚು

ಬೆಂಗಳೂರಲ್ಲಿ ಚಿನ್ನದ ದರ ಏರಿಕೆ ಹೆಚ್ಚು

ಬೆಂಗಳೂರಿನಲ್ಲಿ ಚಿನ್ನದ ದರ ಬುಧವಾರ ಸ್ಥಿರವಾಗಿತ್ತು, ಆದರೆ ಗುರುವಾರ ತುಟ್ಟಿಯಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಇಂದು 100 ರೂಪಾಯಿ ಏರಿಕೆಯಾಗಿದೆ. 41,900 ರೂಪಾಯಿಯಿಂದ 42,000ಕ್ಕೆ ತಲುಪಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 120 ರೂಪಾಯಿ ಏರಿಕೆಯೊಂದಿಗೆ 45,820 ರೂಪಾಯಿಗೆ ತಲುಪಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಕೂಡ ಇದೇ ದರವಿದೆ.

ಚೆನ್ನೈನಲ್ಲಿ ಬೆಲೆ ಏರಿಕೆ

ಚೆನ್ನೈನಲ್ಲಿ ಬೆಲೆ ಏರಿಕೆ

ಚೆನ್ನೈನಲ್ಲಿ ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 50 ರೂಪಾಯಿ ಹೆಚ್ಚಳದೊಂದಿಗೆ 42,350 ರೂ.ಗೆ ಮಾರಾಟವಾಗುತ್ತಿದೆ ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 60 ರೂಪಾಯಿ ಏರಿಕೆಯಾಗಿದ್ದು, 46,200 ರೂಪಾಯಿಗೆ ತಲುಪಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆ

ಮುಂಬೈನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆಯಾಗಿದ್ದು, 43,030 ರೂಪಾಯಿಯಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ರೂಪಾಯಿ ಏರಿಕೆಯೊಂದಿಗೆ 45,030 ರೂ ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಚಿನ್ನದ ಬೆಲೆ ತುಟ್ಟಿಯಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 42,000 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 45,820 ರೂಪಾಯಿಯಲ್ಲಿ ನಿಂತಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ಬೆಳ್ಳಿ ದರದಲ್ಲಿ ಗುರುವಾರ ಏರಿಳಿತ ಕಂಡಿದೆ. ಒಟ್ಟಾರೆ ದೇಶಿ ಮಾರುಕಟ್ಟೆಯಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿ ದರ 400 ರೂ ಏರಿಕೆಯೊಂದಿಗೆ 65,700 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 800 ರೂ. ಕಡಿಮೆಯಾಗಿದ್ದು, 65,700 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಪ್ರತಿ ಕೆಜಿ ಬೆಳ್ಳಿ 300 ರೂ, ಅಗ್ಗವಾಗಿದ್ದು, ಒಂದು ಕೆಜಿಗೆ 69,400 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಏರಿಕೆಯಾಗಿದ್ದು, ಪ್ರತಿ ಕೆಜಿಗೆ 65,700 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 11 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+